ಶಿವಮೊಗ್ಗ: ಜಿಲ್ಲೆಯಲ್ಲಿ ತಾಯಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಮಗನೂ ಆತ್ಮಹತ್ಯೆಗೆ ಶರಣಾಗಿರುವಂತ ಧಾರುಣ ಘಟನೆಯೊಂದು ನಡೆದಿದೆ.
ಶಿವಮೊಗ್ಗದ ಅಶ್ವತ್ಥ್ ಬಡಾವಣೆಯ ಮನೆಯಲ್ಲಿ ತಾಯಿ-ಮಗ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಜಯಶ್ರೀ(57) ಹಾಗೂ ಪುತ್ರ ಆಕಾಶ್(32) ಆತ್ಮಹತ್ಯೆಗೆ ಶರಣಾದಂತವರಾಗಿದ್ದಾರೆ.
ಡೆತ್ ನೋಟ್ ಬರೆದಿಟ್ಟು ಮೊದಲಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಆತ್ಮಹತ್ಯೆಗೆ ಶರಣಾಗಿದ್ದು ನೋಡಿ ಮಗನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮೂರು ವರ್ಷದ ಹಿಂದೆ ಮೊದಲ ಪತ್ನಿ ನವ್ಯಾ ಆತ್ಮಹತ್ಯೆಗೆ ಶರಣಾಗಿದ್ದರು. 6 ತಿಂಗಳ ಹಿಂದೆಯಷ್ಟೇ 2ನೇ ಮದುವೆಯನ್ನು ಆಕಾಶ್ ಆಗಿದ್ದರು. 2ನೇ ಹೆಂಡತಿ ಮನೆಯಲ್ಲಿದ್ದಾಗ ತಾಯಿ, ಮಗ ಆತ್ಮಹತ್ಯೆಗೆ ಶರಣಾಗಿದ್ದಾರೆ.








