ಬೆಂಗಳೂರು: ದಿನಾಂಕ 07-12-2025ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(KARTET-2025) ನಡೆಯಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ.
ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶ ಮಾಡಿದ್ದು, ದಿನಾಂಕ: 07-12-2025 ರಂದು ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2025) ರ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸುವಂತೆ ಮತ್ತು ಪರೀಕ್ಷೆ ನಡೆಯುವ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಹತ್ತಿರದಲ್ಲಿರುವ ಎಲ್ಲಾ ಜೆರಾಕ್ಸ್/ಸೈಬರ್/ಕಂಪ್ಯೂಟರ್ ಸೆಂಟರ್ ಮುಚ್ಚುವಂತೆ ಉಲ್ಲೇಖಿತ ಪತ್ರದಲ್ಲಿ ಕೋರಲಾಗಿರುತ್ತದೆ ಎಂದಿದ್ದಾರೆ.
ಈ ವಿಷಯದ ಬಗ್ಗೆ ನಾನು ಖುದ್ದಾಗಿ ಮಾಡಿದ ವಿಚಾರಣೆಯಿಂದ ಮತ್ತು ಗುಪ್ತವಾರ್ತಾ ವರದಿಯಿಂದ ಮೇಲ್ಕಂಡ ಪರೀಕ್ಷೆಯು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಪದೇಶಕ್ಕೆ ಅನ್ವಯಿಸುವಂತೆ ನಿಷೇಧಾಜ್ಞೆ ಹೊರಡಿಸುವುದು ಅಗತ್ಯವಿರುವುದನ್ನು ಮನಗಂಡಿರುತ್ತೇನೆ. ಆದ್ದರಿಂದ ಈ ಕೆಳಕಂಡಂತೆ ಆದೇಶಿದ್ದಾರೆ.
ಈ ದಿಸೆಯಲ್ಲಿ ದಿನಾಂಕ: 07-12-2025 ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2025) ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ದೃಷ್ಟಿಯಿಂದ, ನನಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಕಲಂ 163ನೇ ಪ್ರಕರಣದ ಅನ್ವಯ ಪದತ್ತವಾದ ಅಧಿಕಾರವನ್ನು ಚಲಾಯಿಸಿ, ಸೀಮಾಂತ್ ಕುಮಾರ್ ಸಿಂಗ್, ಐ.ಪಿ.ಎಸ್, ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಆದ ನಾನು, ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ದಿನಾಂಕ: 07-12-2025 ರಂದು ಪರೀಕ್ಷೆ ಮುಕ್ತಾಯಗೊಳ್ಳುವವರೆಗೆ ನಗರದ ಒಟ್ಟು 58 ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜೆರಾಕ್ಸ್/ಸೈಬರ್/ಕಂಪ್ಯೂಟರ್ ಸೆಂಟರ್‌ಗಳನ್ನು ಮುಚ್ಚುವಂತೆ ಘೋಷಿಸಿ, ಪ್ರತಿಬಂಧಕಾಜ್ಞೆಯನ್ನು ವಿಧಿಸಿ ಆದೇಶ ಹೊರಡಿಸಿರುತ್ತೇನೆ.
ಈ ನಡವಳಿಯನ್ನು ನನ್ನ ಸಹಿ ಮತ್ತು ನನ್ನ ಕಛೇರಿಯ ಮೊಹರಿನಲ್ಲಿ 2025 ರ ಡಿಸೆಂಬರ್ ಮಾಹೆಯ ದಿನಾಂಕ: 05-12-2025 ರಂದು ಹೊರಡಿಸಲಾಗಿದೆ ಎಂದಿದ್ದಾರೆ.










