ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಇ-ಸ್ವತ್ತು 2.0 ತಂತ್ರಾಂಶದ ಮೂಲಕ ಗ್ರಾಮೀಣ ಭಾಗದಲ್ಲಿರುವ ಕೃಷಿಯೇತರ ಖಾಲಿ ಜಾಗಗಳು ಮತ್ತು ಕಟ್ಟಡಗಳಿಗೆ ಇ-ಖಾತಾ ಒದಗಿಸಲಿದ್ದು, ನಾಗರಿಕರು ಮನೆಯಲ್ಲಿ ಕುಳಿತು ಇ-ಸ್ವತ್ತು 2.0 ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಸಾರ್ವಜನಿಕರು ಇ-ಸ್ವತ್ತು ಪೋರ್ಟಲ್ ಮೂಲಕ ಮನೆಯಿಂದಲೇ ಆಸ್ತಿ ದಾಖಲೆಗಳನ್ನು ಪಡೆಯಬಹುದಾಗಿದೆ. ಇ-ಖಾತಾ ವಿತರಣೆಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರ ಅನುಮೋದನೆಗೆ ಅವಕಾಶ ಕಲ್ಪಿಸಲಾಗಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತೆರಿಗೆಗೆ ಒಳಪಡದ ಎಲ್ಲಾ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಲು ಅವಕಾಶ ಕಲ್ಪಿಸಲಾಗಿದೆ.
ಇ -ಸ್ವತ್ತು ನಮೂನೆಗಳನ್ನು ನಿಗದಿತ ಕಾಲಾವಧಿಯೊಳಗೆ ಪಡೆಯಬಹುದಾಗಿದೆ. ಗ್ರಾಮ ಪಂಚಾಯತಿ ಸೇವೆಗಳ ಶುಲ್ಕ ಹಾಗೂ ಮ್ಯುಟೇಶನ್ ಶುಲ್ಕ ತಂತ್ರಾಂಶದ ಮೂಲಕವೇ ನಿರ್ಧರಣೆಯಾಗಲಿದೆ. ನಿಗದಿತ ಅವಧಿಯಲ್ಲಿ ಅಧಿಕಾರಿಗಳು ಅನುಮೋದನೆ ನೀಡದಿದ್ದಲ್ಲಿ ಸ್ವಯಂಚಾಲಿತ ಅನುಮೋದನೆಗೆ ಅವಕಾಶ ಕಲ್ಪಿಸಲಾಗಿದೆ.








