ಮೈಸೂರು : ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕನಿಗೆ ಸಾರ್ವಜನಿಕರು ಹಿಡಿದು ಥಳಿಸಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ನಡೆದಿದೆ.
ಆರೋಪಿ ಲೋಕೇಶ್ ಎಂಬಾತನನ್ನು ಸಾರ್ವಜನಿಕರು ಹಿಡಿದು ಥಳಿಸಿದ್ದಾರೆ. ಡಿಸೆಂಬರ್ 3 ರಂದು 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ವೇಳೆ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಬಳಿಕ ಪೊಲೀಸರಿಗೆ ಶರಣಾಗಲು ಹೋಗುತ್ತಿದ್ದ ಆರೋಪಿಯನ್ನು ಹಿಡಿದು ಪೊಲೀಸರು ಹಿಡಿದು ಥಳಿಸಿದ್ದಾರೆ. ಸದ್ಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.








