ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಪೈಶಾಚಿಕ ಕೃತ್ಯ ನಡೆದಿದ್ದು, ಇಬ್ಬರು ಹೆಣ್ಣು ಮಕ್ಕಳ ಮೇಲೆಯೇ ಪಾಪಿ ತಂದೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ಗಣಿ ಕೆಲಸ ಮಾಡಿಕೊಂಡಿದ್ದ ಮಂಜುನಾಥ್ ಎಂಬಾತ ಮದ್ಯದ ಅಮಲಿನಲ್ಲಿ ತನ್ನ 13 ಹಾಗೂ 10 ವರ್ಷದ ಅಪ್ರಾಪ್ತ ಪುತ್ರಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕುಡಿತಕ್ಕೆ ದಾಸನಾಗಿದ್ದ ಮಂಜುನಾಥ್ ತನ್ನ ಮೇಲೂ ಅತ್ಯಾಚಾರ ಎಸಗಲು ಮುಂದಾಗಿದ್ದ ಆರೋಪಿ ತಾಯಿ ಕೂಡ ಆರೋಪ ಮಾಡಿದ್ದಾರೆ.
ಆರೋಪಿ ಮಂಜುನಾಥನಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸದ್ಯ ಆರೋಪಿಯನ್ನ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.








