ಎಂಟು ದಿಕ್ಕುಗಳನ್ನು ಕಾಯುವ ದೇವತೆಗಳೇ ಅಷ್ಟ ದಿಕ್ಪಾಲಕರು. ದಿಕ್ಪಾಲಕ ಅಂದರೆ ರಕ್ಷಣೆ ನೀಡುವವ ಎಂದರ್ಥ. ಬ್ರಹ್ಮಾಂಡ ಅನಂತವಾದುದು. ಮಾಪನಕ್ಕೇ ನಿಲುಕದ ಬ್ರಹ್ಮಾಂಡವನ್ನು ಎಂಟು ದಿಕ್ಕುಗಳಿಂದ ಗುರುತಿಸುತ್ತಾರೆ. ಸನಾತನ ಪರಂಪರೆಯ ಪ್ರಕಾರ ಬ್ರಹ್ಮಾಂಡವನ್ನು ಪೊರೆಯುವಾತನೇ ಭಗವಂತ. ಅಂತೆಯೇ ಪ್ರತಿಯೊಂದು ದಿಕ್ಕಿಗೂ ಒಬ್ಬೊಬ್ಬರು ಅಧಿ ದೇವತೆಗಳಿದ್ದಾರೆ.
ವಾಸ್ತುಶಾಸ್ತ್ರದ ಪ್ರಕಾರ ಅಷ್ಟದಿಕ್ಪಾಲಕರು: ಇಂದ್ರ-ಪೂರ್ವ, ಕುಬೇರ-ಉತ್ತರ, ಯಮ-ದಕ್ಷಿಣ, ವರುಣ-ಪಶ್ಚಿಮ, ಈಶಾನ (ಶಿವ)- ಈಶಾನ್ಯ, ಅಗ್ನಿ-ಆಗ್ನೇಯ, ವಾಯು-ವಾಯುವ್ಯ, ನಿಋತಿ(ರಾಕ್ಷಸ)- ನೈಋುತ್ಯ.
ಇಂದ್ರ: ಇಂದ್ರನು ದೇವತೆಗಳ ರಾಜ. ಸ್ವರ್ಗಲೋಕದ ಒಡೆಯ. ಮಳೆ ಮತ್ತು ಮಿಂಚುಗಳ ಅಧಿಧಿದೇವತೆ. ಐರಾವತ ಇವನ ವಾಹನ. ವಜ್ರಾಯುಧ ಇವನ ಆಯುಧ. ಅಧಿತಿಯ ಇಬ್ಬರು ಮಕ್ಕಳಲ್ಲಿ ಒಬ್ಬನಾದ ಇವನನ್ನು ಆದಿತ್ಯ ಎಂತಲೂ ಕರೆಯುತ್ತಾರೆ.
ಅಗ್ನಿ: ಬೆಂಕಿಯ ದೇವತೆ. ಅವನೇ ಯಜ್ಞ ಪುರುಷ. ಹೋಮ, ಹವನಗಳಲ್ಲಿ ಅರ್ಪಣೆಯಾಗುವ ಹವಿಸ್ಸನ್ನು ಸಂಬಧಿಂಧಿತ ದೇವತೆಗಳಿಗೆ ಮುಟ್ಟಿಸುತ್ತಾನೆ. ದೇವತೆಗಳ ಸಂದೇಶವಾಹಕನಾಗಿ ಕೆಲಸ ನಿರ್ವಹಿಸುತ್ತಾನೆ.

ಯಮ: ಹಿಂದೂ ಪುರಾಣಗಳ ಪ್ರಕಾರ ಯಮರಾಜನೇ ಮೃತ್ಯುದೇವತೆ. ಕಾಲಪುರುಷ ಎಂತಲೂ ಕರೆಯುತ್ತಾರೆ. ಈತ ದಕ್ಷಿಣ ದಿಕ್ಕಿನ ಅಧಿಧಿಪತಿ. ಇವನು ಸೂರ್ಯನ ಮಗ. ಶನಿಯ ತಮ್ಮ. ಈತನ ಆಯುಧ ದಂಡ.
ನಿಋುತಿ: ನೈಋುತ್ಯ ದಿಕ್ಕಿನ ಒಡೆಯ. ನಿಋುತಿಯ ಆಯುಧ ಖಡ್ಗ. ದುಷ್ಟ ಶಕ್ತಿಗಳಿಂದ ರಕ್ಷಿಸುತ್ತಾನೆ.ಇತನ ಆರಾಧನೆಯಿಂದ ದೀರ್ಘಾಯಸ್ಸು ಲಭಿಸುತ್ತದೆ.
ಪಶ್ಚಿಮದಲ್ಲಿ ವರುಣ: ವರುಣನ ಆಯುಧ ಪಾಶ. ಸರ್ವ ಜಲ ತತ್ವಗಳಿಗೆ ದೇವತೆ.
ವಾಯು: ವಾಯುವ್ಯ ದಿಕ್ಕಿನ ದೇವತೆ. ಇವನ ಆಯುಧ ಅಂಕುಶ. ಹನುಮನ ತಂದೆ. ಈತನನ್ನು ಪವನ, ಪ್ರಾಣ ಎಂತಲೂ ಕರೆಯುತ್ತಾರೆ. ಭಗವದ್ಗೀತೆಯ ಹತ್ತನೆಯ ಅಧ್ಯಾಯವಾದ ವಿಭೂತಿಯೋಗದಲ್ಲಿ ಶ್ರೀಕೃಷ್ಣನು ತನ್ನ ಭಾವ ವಾಯುವಿನಂತೆ ಇದೆ ಎಂದು ಹೇಳುತ್ತಾನೆ.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
ಕುಬೇರ: ಕುಬೇರ ಮಿಶ್ರವಸುವಿನ ಮಗ. ಈತನ ಆಯುಧ ಗಧೆ. ಕುಬೇರ ಹಿಂದೂ ಪುರಾಣಗಳ ಪ್ರಕಾರ ಯಕ್ಷ ಮತ್ತು ಧನ ದೇವತೆ.
ಈಶಾನ: ಇವನ ಆಯುಧ ತ್ರಿಶೂಲ. ಸಂಪತ್ತು, ಆರೋಗ್ಯ ಹಾಗೂ ಯಶಸ್ಸಿನ ದೇವತೆ. ಈತ ಜ್ಞಾನವನ್ನು ಕೊಟ್ಟು, ದುಃಖವನ್ನು ದೂರ ಮಾಡುತ್ತಾನೆ ಎಂಬ ನಂಬಿಕೆ ಇದೆ.








