ಬೆಂಗಳೂರು: ಇಂಡಿಗೊ ವಿಮಾನಗಳ ಸಂಚಾರ ರದ್ದಾಗಿರುವ ಕಾರಣ ಪ್ರವೇಶ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಡಿ.8ರವರೆಗೆ ದಿನಾಂಕ ವಿಸ್ತರಿಸಿದೆ.
ಈ ಸಂಬಂಧ ಅನೇಕ ವಿದ್ಯಾರ್ಥಿಗಳು ಮನವಿ ಮಾಡಿದ ಕಾರಣ ಈ ತೀರ್ಮಾನ ಮಾಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಛಾಯ್ಸ್ ದಾಖಲಿಸಲು ಡಿ.8ರಂದು ಬೆಳಿಗ್ಗೆ 11ಗಂಟೆವರೆಗೆ ಅವಕಾಶ ನೀಡಲಾಗಿದೆ. ಛಾಯ್ಸ್-1 & 2 ದಾಖಲಿಸಿದವರು ಡಿ.8ರಂದು 12.30ರೊಳಗೆ ಶುಲ್ಕ ಪಾವತಿಸಬೇಕು. ಛಾಯ್ಸ್-1 ಆಯ್ಕೆ ಮಾಡಿದ ಅಭ್ಯರ್ಥಿಗಳು ಡಿ.8ರಂದು ಮಧ್ಯಾಹ್ನ 2.30ರವರೆಗೆ ಕೆಇಎ ಕಚೇರಿಯಲ್ಲಿ ಮೂಲ ದಾಖಲೆ ಸಲ್ಲಿಸಬೇಕು. ಮೂಲ ದಾಖಲೆ ಸಲ್ಲಿಸಿದ ನಂತರ ಡಿ.8ರೊಳಗೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ರಾಷ್ಟ್ರಪ್ರಶಸ್ತಿ ವಿಜೇತ ದೇಸಿ ಕಲಾವಿದರನ್ನು ಸನ್ಮಾನಿಸಿದ ನೀತಾ ಅಂಬಾನಿ; ಬಾಲಿವುಡ್ ತಾರಾಬಳಗ ಸಹ ಭಾಗಿ
BREAKING : ಕೆಲಸದ ನಂತರ ಕರೆ-ಇಮೇಲ್ ಗೆ ಉತ್ತರಿಸುವ ಅಗತ್ಯವಿಲ್ಲ : ಸಂಸತ್ತಿನಲ್ಲಿ ಮಂಡನೆಯಾಯ್ತು ಹೊಸ ಮಸೂದೆ!








