ಮಂಡ್ಯ : ದೇಶದಲ್ಲಿ ಸಾಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದ ಮಹಾನ್ ವ್ಯಕ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಎಂದು ಶಾಸಕ ಕೆ.ಎಂ.ಉದಯ್ ಶನಿವಾರ ಹೇಳಿದರು.
ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 69 ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಮದ್ದೂರು ನಗರಸಭೆ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.
ಬಾಬಾಸಾಹೇಬ್ ಅಂಬೇಡ್ಕರ್ ಅವರ ನ್ಯಾಯ, ಸಮಾನತೆ ಮತ್ತು ಬದ್ಧತೆ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸಲು ಸ್ಫೂರ್ತಿ ನೀಡಿದವರು. ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ಈ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದರಲ್ಲದೇ, ದೇಶದಲ್ಲಿ ಸಾಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ಎಂತಹ ಸಂವಿಧಾನದ ಅಗತ್ಯವಿದೆ ಎಂದು ಯೋಚಿಸಿ, ಅತ್ಯಂತ ಶ್ರೇಷ್ಠ ಸಂವಿಧಾನವನ್ನು ಕೊಟ್ಟಿದ್ದಾರೆ. ನಮ್ಮ ಸಾಮಾಜಿಕ ವ್ಯವಸ್ಥೆಯ ಬದಲಾವಣೆಯಾಗಬೇಕು. ಆಗ ಮಾತ್ರ ಎಲ್ಲರಿಗೂ ಸಮಾನ ಅವಕಾಶಗಳು ದೊರಕಬೇಕು ಹಾಗೂ ಸಾಮಾಜಿಕ ನ್ಯಾಯ ದೊರಕಿದಾಗ ಮಾತ್ರ ನಮ್ಮ ಸಂವಿಧಾನಕ್ಕೆ ಗೌರವ ನೀಡಿದಂತಾಗುತ್ತದೆ ಎಂದರು.
ಇದೇ ವೇಳೆ ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ರಾಜೇಂದ್ರ, ತಾ. ಗ್ಯಾರಂಟಿ ಸದಸ್ಯ ಸಿದ್ಧರಾಜು, ತಾ.ಕಾಂಗ್ರೇಸ್ ಎಸ್ಸಿ ಘಟಕದ ಅಧ್ಯಕ್ಷ ಮಹದೇವಯ್ಯ, ಸೇರಿದಂತೆ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
80 ಅಡಿ ಗೆ ಮದ್ದೂರು ಪೇಟೆ ಬೀದಿ ಅಗಲೀಕರಣ: ಮದ್ದೂರು ಶಾಸಕ ಕೆ.ಎಂ.ಉದಯ್








