ಬೆಂಗಳೂರು: ನಗರದ ಪೊಲೀಸ್ ಕಮೀಷನರ್ ಕಚೇರಿ ಆವರಣದಲ್ಲಿ ಹಣವಿದ್ದ ಬ್ಯಾಂಗ್ ಕಳವು ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಪೊಲೀಸ್ ಸಿಬ್ಬಂದಿ ವಿರುದ್ಧವೇ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.
ಬೆಂಗಳೂರಿನ ಪೊಲೀಸ್ ಕಮೀಷನರ್ ಕಚೇರಿ ಆವರಣದಲ್ಲಿ ಹಣವಿದ್ದಂತ ಬ್ಯಾಗ್ ಕಳವು ಆಗಿದೆ. ಹೀಗಾಗಿ ಪೊಲೀಸ್ ಅಧಿಕಾರಿ ಉಮೇಶ್ ಕುಮಾರ್ ನೀಡಿದಂತ ದೂರಿನ ಆಧಾರದ ಮೇಲೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅಂದಹಾಗೇ ಪೊಲೀಸ್ ಅಧಿಕಾರಿ ಉಮೇಶ್ ಕುಮಾರ್ ಅವರು ಹಣವಿದ್ದ ಬ್ಯಾಗ್ ಅನ್ನು ಪೊಲೀಸ್ ಸಿಬ್ಬಂದಿ ಜಬೀವುಲ್ಲಾ ಎಂಬುವರು ಕದ್ದಿರುವುದಾಗಿ ದೂರು ನೀಡಿದ್ದಾರೆ. ಹೀಗಾಗಿ ಪೊಲೀಸ್ ಸಿಬ್ಬಂದಿ ಜಬೀವುಲ್ಲಾ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.
BREAKING : ಕೆಲಸದ ನಂತರ ಕರೆ-ಇಮೇಲ್ ಗೆ ಉತ್ತರಿಸುವ ಅಗತ್ಯವಿಲ್ಲ : ಸಂಸತ್ತಿನಲ್ಲಿ ಮಂಡನೆಯಾಯ್ತು ಹೊಸ ಮಸೂದೆ!








