ಬೆಂಗಳೂರು : ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕ ವೃಂದದಿಂದ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ವೃಂದದ ಹುದ್ದೆಗೆ ಬಡ್ತಿ ನೀಡಲು ಅರ್ಹತಾ ಪರೀಕ್ಷೆ ನಡೆಸಿ ಅಂತಿಮ ಅರ್ಹತಾ ಪಟ್ಟಿಯನ್ನು ಸಲ್ಲಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಉಲ್ಲೇಖ-1ರ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಯ ವೃಂದ ಮತ್ತು ನೇಮಕಾತಿ ನಿಯಮಗಳಂತೆ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ನೇರ ನೇಮಕಾತಿಗೆ ಶೇ.75 ರಷ್ಟು ಮತ್ತು ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕ ಗ್ರೇಡ್-02 ಹುದ್ದೆಯಿಂದ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗೆ ಪದೋನ್ನತಿ ನೀಡಲು ಶೇಕಡ 25ರಷ್ಟು ಅವಕಾಶ ಕಲ್ಪಿಸಿರುತ್ತದೆ. ಉಲ್ಲೇಖ (2)ರ ಸರ್ಕಾರದ ಅಧಿಸೂಚನೆಯಂತೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕ ಗ್ರೇಡ್-02 ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಸ್ತುತ ಬೋಧನಾ ವಿಷಯದ ಸ್ನಾತಕೋತ್ತರ ಪದವಿಯಲ್ಲಿ ಶೇ.50 ರಷ್ಟು ಅಂಕಗಳನ್ನು ಪಡೆದಿರುವ ಅಥವಾ ಪದವಿ ಹಂತದಲ್ಲಿ ಅಧ್ಯಯನ ಮಾಡಿದ. ಯಾವುದಾದರೂ ಐಚ್ಚಿಕ ವಿಷಯದ ಸ್ನಾತಕೋತ್ತರ ಪದವಿಯಲ್ಲಿ ಶೇ.50ರಷ್ಟು ಅಂಕಗಳನ್ನು ಪಡೆದಿರುವ ಹಾಗೂ ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕ ಗ್ರೇಡ್-02 ಹುದ್ದೆಯಲ್ಲಿ ಕನಿಷ್ಟ 10 ವರ್ಷಗಳ ಸೇವಾವಧಿಯನ್ನು ಪೂರ್ಣಗೊಳಿಸಿರುವ ಸಹಶಿಕ್ಷಕರು ಹಾಗೂ ಅಂತಹ ಶಿಕ್ಷಕರು ಲಭ್ಯವಿಲ್ಲದಿದ್ದಲ್ಲಿ 7 ವರ್ಷಗಳ ಸೇವಾವಧಿ ಪೂರ್ಣಗೊಳಿಸಿರುವ ಈ ಅರ್ಹತೆಯುಳ್ಳ ಸಹಶಿಕ್ಷಕರುಗಳು ಬಿ.ಇಡಿ ಪದವಿಯನ್ನು ಹೊಂದಿದ್ದು, ಮುಂಬಡ್ತಿ ನೀಡುವ ಹುದ್ದೆಗಳಿಗೆ ಅರ್ಹರಿರುವ ಸಹಶಿಕ್ಷಕಕರುಗಳಿಗೆ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಅರ್ಹತಾ ಪರೀಕ್ಷೆಯನ್ನು ನಿಗದಿಪಡಿಸಲಾಗಿದೆ.
ಉಲ್ಲೇಖ-03ರಲ್ಲಿ ಶಾಲಾ ಶಿಕ್ಷಣ ಇಲಾಖೆಯ ಪ್ರೌಢಶಿಕ್ಷಣ ವಿಭಾಗದ ನಿರ್ದೇಶಕರು ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕ ಗ್ರೇಡ್-02 ಹುದ್ದೆಯಿಂದ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಸಹಶಿಕ್ಷಕರ ರಾಜ್ಯಮಟ್ಟದ ಒಂದೇ ಜೇಷ್ಠತಾ ಪಟ್ಟಿಯನ್ನು ಉಪನ್ಯಾಸಕರ ಹುದ್ದೆಯ ಬಡ್ತಿಗೆ ಮಾತ್ರ ಅನ್ವಯಿಸಿ ಅಂತಿಮ ಜೇಷ್ಠತಾ ಪಟ್ಟಿಯನ್ನು ಹೊರಡಿಸಲಾಗಿರುತ್ತದೆ.
ಶಾಲಾ ಶಿಕ್ಷಣ ಇಲಾಖೆಯ (ಪದವಿಪೂರ್ವ) ಉಳಿಕೆ ಮೂಲ ಉಪನ್ಯಾಸಕರ ವೃಂದದ ಮತ್ತು ಕಲ್ಯಾಣ ಕರ್ನಾಟಕ ರಾಜ್ಯ ವ್ಯಾಪ್ತಿಯ ಸ್ಥಳಿಯ ಉಪನ್ಯಾಸಕರ ವೃಂದದ (ಎರಡು ವೃಂದಗಳನ್ನು ಒಳಗೊಂಡಂತೆ) ಖಾಲಿ ಹುದ್ದೆಗಳಿಗೆ ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರ ವೃಂದದಿಂದ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ವೃಂದದ ಹುದ್ದೆಗೆ ಬಡ್ತಿ ನೀಡಲು ಇಲಾಖೆ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಅರ್ಹತಾ ಪರೀಕ್ಷೆ ನಡೆಸಿ, ನಿಗದಿತ ಮೀಸಲಾತಿ ನಿಯಮಗಳನ್ವಯ ಜೇಷ್ಠತಾ ಪಟ್ಟಿಯನುಸಾರ ಅಂತಿಮ ಅರ್ಹತಾ ಪಟ್ಟಿಯನ್ನು ನೀಡುವ ಸಂಬಂಧ ಅರ್ಹತಾ ಪರೀಕ್ಷೆಯ ಈ ಅಧಿಸೂಚನೆ ಹೊರಡಿಸಲಾಗಿರುತ್ತದೆ.









