ಮಂಡ್ಯ : ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಡಾ.ಎಲ್. ಮೂರ್ತಿ 08 /12/ 2025 ರಂದು ಸೋಮವಾರ ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಸೋಮವಾರ ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಹೊರಟು ಮದ್ದೂರು ನಗರದ ಪ್ರವಾಸಿ ಮಂದಿರಕ್ಕೆ 10.30ಕ್ಕೆ ಆಗಮಿಸಲಿದ್ದಾರೆ.
ಪ್ರವಾಸಿ ಮಂದಿರದಲ್ಲಿ ತಾಲೂಕು ತಹಶೀಲ್ದಾರ್, ತಾಪಂ ಇಓ, ನಗರಸಭೆ ಪೌರಾಯುಕ್ತ, ಮಳವಳ್ಳಿ ಉಪ ವಿಭಾಗದ ಡಿವೈಎಸ್ಪಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಬಳಿಕ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಬಳಿಕ 11.30 ಕ್ಕೆ ಮಳವಳ್ಳಿಗೆ ತೆರಳಿ 12.30 ರಿಂದ ಮಳವಳ್ಳಿ ಪ್ರವಾಸಿ ಮಂದಿರದಲ್ಲಿ ತಾಲೂಕು ತಹಶೀಲ್ದಾರ್, ತಾಪಂ ಇಓ, ಪುರಸಭೆ ಮುಖ್ಯಾಧಿಕಾರಿ, ಡಿವೈಎಸ್ಪಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಬಳಿಕ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ನಂತರ ಸಂಜೆ ಮಂಡ್ಯ ನಗರದಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಬಳಿಕ ಬೆಂಗಳೂರಿಗೆ ತೆರಳಲಿದ್ದಾರೆ.
ವರದಿ : ಗಿರೀಶ್ ರಾಜ್, ಮಂಡ್ಯ








