Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಒಂದೇ ದಾಳಿಗೆ ಇರಾನ್‌ನ 48 ಪ್ರಮುಖ ನಾಯಕರು ಫಿನಿಶ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

01/03/2026 9:58 PM

‘ಗ್ರಾಮ ವಾಸ್ತವ್ಯ’ದ ಮೂಲಕ ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ’ಗೆ ನಾಂದಿ: ಎಲ್ಲರಿಗೂ ಮಾದರಿಯಾದ ‘PSI’

01/03/2026 9:36 PM

BREAKING: ಇಸ್ರೇಲ್, ಅಮೇರಿಕಾ ದಾಳಿಯಲ್ಲಿ ಇರಾನ್ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಸಾವು | Ahmadinejad

01/03/2026 8:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ `ವಾಯು ಮಾಲಿನ್ಯ’ ನಿಯಂತ್ರಣಕ್ಕೆ DCM ಡಿ.ಕೆ.ಶಿವಕುಮಾರ್ ತಕ್ಷಣದ ಕ್ರಮ: ತಜ್ಞರ ಸಮಿತಿ ರಚನೆಗೆ ಸೂಚನೆ!
KARNATAKA

ಬೆಂಗಳೂರಿನ `ವಾಯು ಮಾಲಿನ್ಯ’ ನಿಯಂತ್ರಣಕ್ಕೆ DCM ಡಿ.ಕೆ.ಶಿವಕುಮಾರ್ ತಕ್ಷಣದ ಕ್ರಮ: ತಜ್ಞರ ಸಮಿತಿ ರಚನೆಗೆ ಸೂಚನೆ!

By kannadanewsnow5707/12/2025 1:23 PM

ಬೆಂಗಳೂರು: ದೇಶದ ಉದ್ಯಾನ ನಗರಿ ಹಾಗೂ ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿನ ವಾಯು ಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ಏರುತ್ತಿರುವ ಕುರಿತು ವಿಧಾನ ಪರಿಷತ್ ಶಾಸಕರೂ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ದಿನೇಶ್ ಗೂಳಿಗೌಡ ಅವರು ಮಾಡಿದ ಮನವಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಕ್ಷಣವೇ ಸ್ಪಂದಿಸಿದ್ದು, ಈ ವಿಷಯದ ಕುರಿತು ತುರ್ತು ಕ್ರಮ ಕೈಗೊಳ್ಳಲು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ್ದಾರೆ.

​ದೆಹಲಿಯಂತೆಯೇ ಬೆಂಗಳೂರು ಸಹ ಭವಿಷ್ಯದಲ್ಲಿ ತೀವ್ರ ಮಾಲಿನ್ಯದ ಬಿಕ್ಕಟ್ಟನ್ನು ಎದುರಿಸುವ ಸಾಧ್ಯತೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ ದಿನೇಶ್ ಗೂಳಿಗೌಡ ಅವರು ಡಿಸಿಎಂ ಅವರಿಗೆ ಪತ್ರ ಬರೆದಿದ್ದರು. ಪತ್ರಕ್ಕೆ ಧನಾತ್ಮಕವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಮುಖ್ಯ ಕಾರ್ಯದರ್ಶಿಗಳ ಮೂಲಕ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಿದ್ದು, ಬೆಂಗಳೂರಿನ ವಾಯು ಮಾಲಿನ್ಯದ ಅಪಾಯವನ್ನು ತಡೆಗಟ್ಟಲು ತುರ್ತು ಮಾರ್ಗೋಪಾಯಗಳನ್ನು ಕಂಡುಹಿಡಿಯಲು ತಜ್ಞರ ತಂಡವನ್ನು ರಚಿಸುವಂತೆ ಆದೇಶಿಸಿದ್ದಾರೆ.

​ಶಾಸಕ ದಿನೇಶ್ ಗೂಳಿಗೌಡರ ಮನವಿಯ ಮುಖ್ಯಾಂಶಗಳು:

​ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ಸ್ಫೋಟ: ನಗರದಲ್ಲಿ 1,23,24,919 ನೋಂದಾಯಿತ ಮೋಟರ್ ವಾಹನಗಳಿವೆ. ಜನಸಂಖ್ಯೆ (ಸುಮಾರು 1.47 ಕೋಟಿ) ಮತ್ತು ವಾಹನಗಳ ಅನುಪಾತವು ಸರಿಸುಮಾರು ಪ್ರತಿ ನಾಗರಿಕರಿಗೆ ಒಂದು ವಾಹನ ಎಂಬಂತಾಗಿದೆ.

​ನಿರಂತರ ನೋಂದಣಿ ಹೆಚ್ಚಳ: ಪ್ರತಿದಿನ ಸರಾಸರಿ 2,563 ಹೊಸ ವಾಹನಗಳು ಬೆಂಗಳೂರಿನಲ್ಲಿ ನೋಂದಣಿಯಾಗುತ್ತಿವೆ. ಇವುಗಳಲ್ಲಿ 84 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಾಗಿವೆ.

​ವಾಯು ಗುಣಮಟ್ಟದ ಸೂಚ್ಯಂಕ: ಬೆಂಗಳೂರಿನ ಪ್ರಸ್ತುತ ವಾಯು ಗುಣಮಟ್ಟ ಸೂಚ್ಯಂಕ (AQI) 50ನ್ನು ಮೀರಿ 70 ‘ಮಧ್ಯಮ’ ವರ್ಗದಲ್ಲಿದೆ. ಆದರೆ ಮುಂದಿನ 5-10 ವರ್ಷಗಳಲ್ಲಿ ನಗರವು ‘ತೀವ್ರ’ ಮಾಲಿನ್ಯದ ಮಟ್ಟ ತಲುಪಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ.

ಆರೋಗ್ಯದ ಮೇಲೆ ಗಂಭೀರ ಪರಿಣಾಮ: ಮಾಲಿನ್ಯದಿಂದಾಗಿ ಮಕ್ಕಳು, ಹಿರಿಯರು ಉಸಿರಾಟದ ತೊಂದರೆಗಳು, ಅಲರ್ಜಿಗಳು, ಆಸ್ತಮಾ ಮತ್ತು ಹೃದಯ ಸಂಬಂಧಿ ರೋಗಗಳಿಗೆ ತುತ್ತಾಗುತ್ತಿದ್ದಾರೆ.

​ತುರ್ತು ಸಮಿತಿ ರಚನೆಗೆ ಬೇಡಿಕೆ: ಪರಿಸರ ವಿಜ್ಞಾನಿಗಳು, ಸಂಚಾರ ತಜ್ಞರು, ಸಾರ್ವಜನಿಕ ಆರೋಗ್ಯ ತಜ್ಞರು ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ತಕ್ಷಣವೇ ರಚಿಸಬೇಕು.

ತಜ್ಞರ ಸಮಿತಿಯ ಕರ್ತವ್ಯಗಳು ಮತ್ತು ಧ್ಯೇಯೋದ್ದೇಶಗಳು: ಮುಂದಿನ ದಶಕದಲ್ಲಿ ಬೆಂಗಳೂರಿನ ಮಾಲಿನ್ಯದ ಪಥವನ್ನು ನಿರ್ಣಯಿಸುವುದು. ತುರ್ತು ಮತ್ತು ದೀರ್ಘಕಾಲೀನ ಮಾಲಿನ್ಯ ತಗ್ಗಿಸುವ ಕ್ರಮಗಳನ್ನು ಶಿಫಾರಸು ಮಾಡುವುದು.

ವಾಹನ ಹೊರಸೂಸುವಿಕೆಯ ನಿಯಮಗಳು ಮತ್ತು ಅವುಗಳ ಜಾರಿಯನ್ನು ಬಲಪಡಿಸುವುದು.

ಹೊಸ ವಾಹನ ನೋಂದಣಿ ಮತ್ತು ಸಂಚಾರ ದಟ್ಟಣೆಯನ್ನು ನಿರ್ವಹಿಸುವ ತಂತ್ರಗಳನ್ನು ರೂಪಿಸುವುದು.

ಬೆಂಗಳೂರು ಮಹಾನಗರ ಪ್ರದೇಶಕ್ಕಾಗಿ ಸಮಗ್ರ ಸ್ವಚ್ಛ-ವಾಯು ಕ್ರಿಯಾ ಯೋಜನೆಯನ್ನು ಅಭಿವೃದ್ಧಿಪಡಿಸಬೇಕೆಂದು ಮನವಿ ಮಾಡಿದ್ದರು.

DCM D.K.Shivakumar's immediate action to control 'air pollution' in Bengaluru: notice to form expert committee!
Share. Facebook Twitter LinkedIn WhatsApp Email

Related Posts

‘ಗ್ರಾಮ ವಾಸ್ತವ್ಯ’ದ ಮೂಲಕ ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ’ಗೆ ನಾಂದಿ: ಎಲ್ಲರಿಗೂ ಮಾದರಿಯಾದ ‘PSI’

01/03/2026 9:36 PM4 Mins Read

ವಸತಿ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಗಂಡ-ಹೆಂಡತಿ ಜೈಲುಪಾಲು!

01/03/2026 8:29 PM2 Mins Read

ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ: ಕೇಂದ್ರ ಸರ್ಕಾರಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮನವಿ

01/03/2026 7:30 PM1 Min Read
Recent News

BREAKING: ಒಂದೇ ದಾಳಿಗೆ ಇರಾನ್‌ನ 48 ಪ್ರಮುಖ ನಾಯಕರು ಫಿನಿಶ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

01/03/2026 9:58 PM

‘ಗ್ರಾಮ ವಾಸ್ತವ್ಯ’ದ ಮೂಲಕ ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ’ಗೆ ನಾಂದಿ: ಎಲ್ಲರಿಗೂ ಮಾದರಿಯಾದ ‘PSI’

01/03/2026 9:36 PM

BREAKING: ಇಸ್ರೇಲ್, ಅಮೇರಿಕಾ ದಾಳಿಯಲ್ಲಿ ಇರಾನ್ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಸಾವು | Ahmadinejad

01/03/2026 8:41 PM

US Israel Iran War: ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್: ಕೇವಲ 12 ಗಂಟೆಗಳಲ್ಲಿ 900ಕ್ಕೂ ಹೆಚ್ಚು ದಾಳಿ!

01/03/2026 8:36 PM
State News
KARNATAKA

‘ಗ್ರಾಮ ವಾಸ್ತವ್ಯ’ದ ಮೂಲಕ ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ’ಗೆ ನಾಂದಿ: ಎಲ್ಲರಿಗೂ ಮಾದರಿಯಾದ ‘PSI’

By kannadanewsnow0901/03/2026 9:36 PM KARNATAKA 4 Mins Read

ಶಿವಮೊಗ್ಗ: ಸಾಮಾನ್ಯವಾಗಿ ಪೊಲೀಸ್ ಎಂದರೆ ಸಾಮಾನ್ಯ ಜನರಿಗೆ ಒಂದು ರೀತಿಯ ಭಯ, ಆತಂಕ. ಪೊಲೀಸರ ಬಳಿ ಹೋಗುವುದು ಎಂದರೆ ಏನೋ…

ವಸತಿ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಗಂಡ-ಹೆಂಡತಿ ಜೈಲುಪಾಲು!

01/03/2026 8:29 PM

ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ: ಕೇಂದ್ರ ಸರ್ಕಾರಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮನವಿ

01/03/2026 7:30 PM

ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಧನುಸ್ಸು ರಾಶಿಯವರಿಗೆ ಅದೃಷ್ಟದ ಬದಲಾವಣೆ

01/03/2026 7:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.