ಬೆಳಗಾವಿ : ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಡಿಸೆಂಬರ್ 9, 2025ರಂದು ಬೆಳಿಗ್ಗೆ 9.30 ಗಂಟೆಗೆ ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಪ್ರದರ್ಶಿಸಲಾಗುವುದು.
ಕಲಬುರ್ಗಿ ಜಿಲ್ಲೆಯ ಕಾಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮನ್ನ ಕುಟುಂಬಸ್ಥರು ವೈಯಕ್ತಿಕ ಆಸಕ್ತಿಯಿಂದ ಮಾಡಲ್ಪಟ್ಟಿರುವ ಈ ಕೆಲಸ ಮತ್ತೊಮ್ಮೆ ಐತಿಹಾಸಿಕವಾಗಲಿದೆ.
ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್.ಕೆ.ಪಾಟೀಲ್ ಸೇರಿದಂತೆ ರಾಜ್ಯ ಸರ್ಕಾರದ ಸಚಿವರು ಹಾಗೂ ಶಾಸಕರು ಭಾಗವಹಿಸಲಿದ್ದಾರೆ ಎಂದು ವಿಧಾನ ಸಭೆಯ ಕಚೇರಿ ಪ್ರಕಟಣೆ ತಿಳಿಸಿದೆ.
BREAKING: ಜಪಾನಿನಲ್ಲಿ 7.6 ತೀವ್ರತೆಯಲ್ಲಿ ಪ್ರಬಲ ಭೂಕಂಪನ: ಸುನಾಮಿ ಎಚ್ಚರಿಕೆ | Earthquake in Japan
ALERT : ನಿಮ್ಮ `ಮನೆಯಲ್ಲಿ `ಇನ್ವರ್ಟರ್’ ಬಳಸುತ್ತೀರಾ? ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ.!








