Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ರಾಜ್ಯದ ಗ್ರಾಮ ಪಂಚಾಯ್ತಿಯ ಎಲ್ಲ ಸರ್ಕಾರಿ ಆಸ್ತಿ ‘ಜಿಯೋಟ್ಯಾಗ್’ಗೆ : ಸಚಿವ ಈಶ್ವರ ಖಂಡ್ರೆ ಸೂಚನೆ

​’ದಾಳಿಯನ್ನು ಸಮರ್ಥಿಸಲು ಸಾಧ್ಯವೇ ಇಲ್ಲ’: ಅಮೆರಿಕ ನೌಕಾಪಡೆ ದಾಳಿಗೆ 3 ಭಾರತೀಯ ನಾವಿಕರ ಬಲಿ; ಯುಎಸ್ ವಿದೇಶಾಂಗ ಕಾರ್ಯದರ್ಶಿ ರೂಬಿಯೋ ಎದುರು ಜೈಶಂಕರ್ ತೀವ್ರ ಆಕ್ರೋಶ

BIG NEWS : ವಿಚ್ಛೇದನದನ ಬಳಿಕ ಮಹಿಳೆ ಮಾಜಿ ಪತಿಯ ವಿರುದ್ಧ `ಕ್ರಿಮಿನಲ್ ಮೊಕದ್ದಮೆ’ ಹೂಡುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ರೈತರ ಬೃಹತ್ ಪ್ರತಿಭಟನೆ, ಸುವರ್ಣ ಸೌಧಕ್ಕೆ ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
KARNATAKA

ನಾಳೆ ರೈತರ ಬೃಹತ್ ಪ್ರತಿಭಟನೆ, ಸುವರ್ಣ ಸೌಧಕ್ಕೆ ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

By ವಸಂತ ಬಿ ಈಶ್ವರಗೆರೆ

ಬೆಳಗಾವಿ: ನಾಳೆ (ಡಿ.9) ಬೆಳಿಗ್ಗೆ ಇಲ್ಲಿ ರೈತರ ಬೃಹತ್ ಪ್ರತಿಭಟನೆ ನಡೆಸಿ, ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಭ್ರಷ್ಟ ಕಾಂಗ್ರೆಸ್ ಸರ್ಕಾರದ ರೈತವಿರೋಧಿ ನೀತಿಯನ್ನು ಖಂಡಿಸಿ ನಾಳೆ ನಡೆಯುವ ಹೋರಾಟದ ಸ್ಥಳ ಮಾಲಿನಿ ಸಿಟಿ ಮೈದಾನಕ್ಕೆ ಇಂದು ಭೇಟಿ ನೀಡಿದ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಬೆಳಗಾವಿ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು, ಬೆಳಗಾವಿ, ಅಕ್ಕಪಕ್ಕದ ಜಿಲ್ಲೆಗಳ ರೈತರು ಭಾಗವಹಿಸುತ್ತಾರೆ ಎಂದರು.

ಪ್ರತಿಭಟನೆಯಲ್ಲಿ ಕನಿಷ್ಠ 20-25 ಸಾವಿರ ಜನರು ಸೇರುತ್ತಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಈ ಸರಕಾರ ಕಣ್ಣಿದ್ದೂ ಕುರುಡನಂತೆ, ಕಿವಿಯಿದ್ದೂ ಕಿವುಡನಂತೆ ನಟಿಸುತ್ತಿದೆ ಎಂದು ಅವರು ಟೀಕಿಸಿದರು. ಪರಿಹಾರದ ವಿಚಾರ ಕೇಳಿದರೆ ಕೇಂದ್ರದ ಮೇಲೆ ಆರೋಪಿಸುತ್ತಾರೆ ಎಂದು ಆಕ್ಷೇಪಿಸಿದರು. ರಾಜ್ಯ ಸರಕಾರಕ್ಕೆ ಜವಾಬ್ದಾರಿಯೇ ಇಲ್ಲ ಎಂದು ದೂರಿದರು.

ಕಬ್ಬು ಬೆಳೆಗಾರರ ಸಮಸ್ಯೆ ಇನ್ನೂ ಸಂಪೂರ್ಣವಾಗಿ ಇತ್ಯರ್ಥ ಆಗಿಲ್ಲ. ಕೇಂದ್ರವು ಮೆಕ್ಕೆ ಜೋಳಕ್ಕೆ 2400 ರೂ. ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿದೆ. ಆದರೆ, ರಾಜ್ಯ ಸರಕಾರವು ಸೂಕ್ತ ಸಮಯದಲ್ಲಿ ಖರೀದಿ ಕೇಂದ್ರ ತೆರೆಯದ ಕಾರಣ ಮೆಕ್ಕೆ ಜೋಳ ಬೆಳೆಯುವ ರೈತರು 1500, 1600 ರೂಪಾಯಿಗೆ ಮೆಕ್ಕೆ ಜೋಳ ಮಾರಾಟ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಹತ್ತಿ, ತೊಗರಿ ಮೊದಲಾದ ರೈತರ ಸಮಸ್ಯೆ ಚರ್ಚೆ ನಡೆಸಲಿದ್ದೇವೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಗಾದಿಗೆ ಕಚ್ಚಾಟದ ಕರಿನೆರಳು ರಾಜ್ಯದ ಮೇಲೆ ಬಿದ್ದಿದೆ. ರಾಜ್ಯ ಸರಕಾರವು ತನ್ನ ವೈಫಲ್ಯವನ್ನು ಮುಚ್ಚಿ ಹಾಕಿಕೊಳ್ಳಲು ಕೇಂದ್ರ ಸರಕಾರವನ್ನು ದೂರುವ ಪರಿಪಾಠವನ್ನು ಮುಂದುವರೆಸಿದೆ ಎಂದು ಟೀಕಿಸಿದರು. ಇವೆಲ್ಲವನ್ನೂ ಸದನದಲ್ಲಿ ಚರ್ಚಿಸುತ್ತೇವೆ ಎಂದು ಹೇಳಿದರು.

ರೊಚ್ಚಿಗೆದ್ದ ರೈತರ ಪರ ಧ್ವನಿ- ಆರ್.ಅಶೋಕ್

ರೊಚ್ಚಿಗೆದ್ದ ರೈತರ ಪರ ಧ್ವನಿ ಎತ್ತುತ್ತಿದ್ದೇವೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಅವರು ತಿಳಿಸಿದರು. ಬಿಜೆಪಿ, ಯಡಿಯೂರಪ್ಪನವರು ಮೊದಲಿನಿಂದಲೂ ರೈತಪರವಾಗಿ ಕೆಲಸ ಮಾಡುತ್ತ ಬಂದಿದ್ದಾಗಿ ವಿವರಿಸಿದರು. ಹೋರಾಟದ ಮೂಲಕ ಬಿಜೆಪಿ ಬೆಳೆದಿದೆ. ವಿಧಾನಸೌಧದಲ್ಲೂ ರೈತಪರವಾಗಿ ಧ್ವನಿ ಎತ್ತಲಿದೆ ಎಂದು ಹೇಳಿದರು.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ವಿಧಾನ ಪರಿಷತ್ತಿನ ಸದಸ್ಯ ಸಿ.ಟಿ. ರವಿ, ಶಾಸಕರಾದ ವಿಠ್ಠಲ ಹಲಗೇಕರ್, ಅಭಯ ಪಾಟೀಲ,  ರಾಜ್ಯ ಉಪಾಧ್ಯಕ್ಷ ಅನೀಲ ಬೆನಕೆ, ಮಾಜಿ ಶಾಸಕ ಸಂಜಯ ಪಾಟೀಲ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಜಿಲ್ಲಾಧ್ಯಕ್ಷರಾದ ಶ್ರೀಮತಿ ಗೀತಾ ಸುತಾರ, ಸುಭಾಷ ಪಾಟೀಲ, ಮುಖಂಡರಾದ ಎಂ.ಬಿ.ಜಿರಲಿ, ಅರವಿಂದ ಪಾಟೀಲ ಹಾಗೂ ಪಕ್ಷದ ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

BIG NEWS: ರಾಜ್ಯದ ಗ್ರಾಮ ಪಂಚಾಯ್ತಿಯ ಎಲ್ಲ ಸರ್ಕಾರಿ ಆಸ್ತಿ ‘ಜಿಯೋಟ್ಯಾಗ್’ಗೆ : ಸಚಿವ ಈಶ್ವರ ಖಂಡ್ರೆ ಸೂಚನೆ

3 Mins Read

BIG NEWS : ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ `ತಂಬಾಕು ಮುಕ್ತ ಕಚೇರಿ’ ಫಲಕ ಅಳವಡಿಕೆ ಕಡ್ಡಾಯ.!

1 Min Read

ALERT : ಸತತ ಎಷ್ಟು `EMI’ ಬಾಕಿಯಾದರೆ ಬ್ಯಾಂಕ್ ನಿಮ್ಮ ಮನೆಯನ್ನು ಹರಾಜು ಹಾಕಬಹುದು? ಸಾಲಗಾರರು ತಿಳಿಯಲೇಬೇಕಾದ ವಿಷಯ.!

2 Mins Read
Recent News

BIG NEWS: ರಾಜ್ಯದ ಗ್ರಾಮ ಪಂಚಾಯ್ತಿಯ ಎಲ್ಲ ಸರ್ಕಾರಿ ಆಸ್ತಿ ‘ಜಿಯೋಟ್ಯಾಗ್’ಗೆ : ಸಚಿವ ಈಶ್ವರ ಖಂಡ್ರೆ ಸೂಚನೆ

​’ದಾಳಿಯನ್ನು ಸಮರ್ಥಿಸಲು ಸಾಧ್ಯವೇ ಇಲ್ಲ’: ಅಮೆರಿಕ ನೌಕಾಪಡೆ ದಾಳಿಗೆ 3 ಭಾರತೀಯ ನಾವಿಕರ ಬಲಿ; ಯುಎಸ್ ವಿದೇಶಾಂಗ ಕಾರ್ಯದರ್ಶಿ ರೂಬಿಯೋ ಎದುರು ಜೈಶಂಕರ್ ತೀವ್ರ ಆಕ್ರೋಶ

BIG NEWS : ವಿಚ್ಛೇದನದನ ಬಳಿಕ ಮಹಿಳೆ ಮಾಜಿ ಪತಿಯ ವಿರುದ್ಧ `ಕ್ರಿಮಿನಲ್ ಮೊಕದ್ದಮೆ’ ಹೂಡುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

BIG NEWS : ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ `ತಂಬಾಕು ಮುಕ್ತ ಕಚೇರಿ’ ಫಲಕ ಅಳವಡಿಕೆ ಕಡ್ಡಾಯ.!

State News
KARNATAKA

BIG NEWS: ರಾಜ್ಯದ ಗ್ರಾಮ ಪಂಚಾಯ್ತಿಯ ಎಲ್ಲ ಸರ್ಕಾರಿ ಆಸ್ತಿ ‘ಜಿಯೋಟ್ಯಾಗ್’ಗೆ : ಸಚಿವ ಈಶ್ವರ ಖಂಡ್ರೆ ಸೂಚನೆ

By ವಸಂತ ಬಿ ಈಶ್ವರಗೆರೆ KARNATAKA 3 Mins Read

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಮತ್ತು ಪಂಚಾಯ್ತಿ ಸೃಜಿಸಿರುವ ಎಲ್ಲ ಸರ್ಕಾರಿ ಆಸ್ತಿಗಳನ್ನು ಜಿಯೋಟ್ಯಾಗ್…

BIG NEWS : ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ `ತಂಬಾಕು ಮುಕ್ತ ಕಚೇರಿ’ ಫಲಕ ಅಳವಡಿಕೆ ಕಡ್ಡಾಯ.!

ALERT : ಸತತ ಎಷ್ಟು `EMI’ ಬಾಕಿಯಾದರೆ ಬ್ಯಾಂಕ್ ನಿಮ್ಮ ಮನೆಯನ್ನು ಹರಾಜು ಹಾಕಬಹುದು? ಸಾಲಗಾರರು ತಿಳಿಯಲೇಬೇಕಾದ ವಿಷಯ.!

ಮನೆ ಇಲ್ಲದವರಿಗೆ ಗುಡ್ ನ್ಯೂಸ್ : ಕೇಂದ್ರದ PM ಆವಾಸ್ ಯೋಜನೆಯಡಿ ಮತ್ತೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.