ಬೆಳಗಾವಿ : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ಮೆಕ್ಕೆಜೋಳ ಪ್ರೋತ್ಸಾಹಧನ ಯೋಜನೆ ಅಡಿಯಲ್ಲಿ ನ.30ರಿಂದ ರಾಜ್ಯದಲ್ಲಿ ಕೆಎಂಎಫ್ ಮೂಲಕ ಮೆಕ್ಕೆಜೋಳ ರೈತರ ನೋಂದಣಿ ಮತ್ತು ಖರೀದಿ ಪ್ರಕ್ರಿಯೆ ಆರಂಭಿಸಲಾಗಿದೆ.
ರಾಜ್ಯದಲ್ಲಿ ಈವರೆಗೆ 17,873 ರೈತರು ನೋಂದಣಿ ಮಾಡಿದ್ದು, 7,094 ಕ್ವಿಂಟಲ್ ಮೆಕ್ಕೆಜೋಳ ಖರೀದಿ ಮಾಡಲಾಗಿದೆ. ಮೆಕ್ಕೆಜೋಳ ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರ ಅನುಕೂಲಕ್ಕಾಗಿ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಕೆಎಂಎಫ್ನಿಂದ ಪಶು ಆಹಾರ ಉತ್ಪಾದನೆಗಾಗಿ ರೈತರಿಂದ ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಆರಂಭಿಸಲಾಗಿದೆ.
ಕೆಎಂಎಫ್ ನ 5 ಪಶು ಆಹಾರ ಉತ್ಪಾದನಾ ಘಟಕಗಳ ವ್ಯಾಪ್ತಿಯಲ್ಲಿ ನಿಗದಿತ ಪೋರ್ಟಲ್ಗಳಲ್ಲಿ ರೈತರ ನೋಂದಣಿ ಮತ್ತು ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಪ್ರತಿ ರೈತರಿಂದ ತಲಾ 50 ಕ್ವಿಂಟಲ್ ಮೆಕ್ಕೆಜೋಳ ಖರೀದಿ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.








