Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
Vijay 5

ತಮಿಳುನಾಡು ನೂತನ ಸಿಎಂ ವಿಜಯ್‌ ‘ಗ್ಯಾರಂಟಿ’ ಧಮಾಕಾ: ಮಹಿಳೆಯರಿಗೆ ವಿಶೇಷ ಪಡೆ, ವಿದ್ಯುತ್ ಫ್ರೀ

ಸಚಿವ ಡಿ ಸುಧಾಕರ್ ನಿಧನ ಹಿನ್ನೆಲೆ ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ 3 ದಿನ ಶೋಕಾಚಾರಣೆ : ಸರ್ಕಾರ ಆದೇಶ

BREAKING : ಪ್ರಧಾನಿ ಮೋದಿ ತೆರಳುವ ರಸ್ತೆಯ ಸಮೀಪ ಜಿಲೇಟಿನ್ ಕಡ್ಡಿಗಳು ಪತ್ತೆ : ಓರ್ವ ಅರೆಸ್ಟ್ | Gelatin sticks found on Modi’s way

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಲ್ಲ, ಇದು ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ : CM ಸಿದ್ದರಾಮಯ್ಯ
KARNATAKA

ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಲ್ಲ, ಇದು ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ : CM ಸಿದ್ದರಾಮಯ್ಯ

By kannadanewsnow57

ಬೆಳಗಾವಿ : ಇಂದು ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಸಿಎಂ ಸಿದ್ದರಾಮಯ್ಯ ಅನಾವರಣಗೊಳಿಸಿದ್ದಾರೆ.

ಇಂದು ಬೆಳಗಾವಿಯ ಸುವರ್ಣಸೌಧದ ಮುಂಭಾಗ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣಗೊಳಿಸಿ, ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಗೆ ಮತ್ತು ಕಲಬುರ್ಗಿ ಜಿಲ್ಲೆಯ ಕಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮಣ್ಣ ಅವರ ಕುಟುಂಬಸ್ಥರಿಗೂ ಧನ್ಯವಾದಗಳು ತಿಳಿಸಿದ್ದಾರೆ.

ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ತ್ರಿವರ್ಣ ಧ್ವಜವನ್ನು ರೂಪಿಸಲಾಯಿತು. ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಲ್ಲ, ಇದು ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ. ಕೇಸರಿ ಬಣ್ಣವು ಶಕ್ತಿ, ಸ್ಥೈರ್ಯ ಹಾಗೂ ತ್ಯಾಗವನ್ನು ಪ್ರತಿಬಿಂಬಿಸುತ್ತದೆ. ಬಿಳಿಬಣ್ಣ ಶಾಂತಿ ಮತ್ತು ಸತ್ಯವನ್ನು ಪ್ರತಿನಿಧಿಸಿದರೆ, ಹಸಿರು ಸಮೃದ್ಧಿಯನ್ನು ಬಿಂಬಿಸುತ್ತದೆ. ಅಶೋಕ ಚಕ್ರ ನಿರಂತರವಾಗಿ ದೇಶದ ಆರ್ಥಿಕತೆಯನ್ನು ಹಾಗೂ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸುವುದರ ಸಂಕೇತವಾಗಿದೆ.

ನಮ್ಮ ರಾಷ್ಟ್ರದ ತ್ರಿವರ್ಣ ಧ್ವಜವನ್ನು ಗೌರವಿಸಿ, ಹೆಮ್ಮೆಯಿಂದ ಕಾಣಬೇಕು. ಪ್ರತಿಯೊಬ್ಬರೂ ರಾಷ್ಟ್ರಪ್ರೇಮವನ್ನು ಬೆಳೆಸಿಕೊಳ್ಳಬೇಕು. ಈ ಸಂದರ್ಭದಲ್ಲಿ ರಾಷ್ಟ್ರಕ್ಕಾಗಿ ತ್ಯಾಗ – ಬಲಿದಾನ, ಹೋರಾಟ ಮಾಡಿದವರನ್ನು ಸ್ಮರಿಸುವುದು ಅಗತ್ಯ. ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಸ್ವಾತಂತ್ರ ಹೋರಾಟ ನಡೆಯಿತು. ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ಗಾಂಧೀಜಿ ವಹಿಸಿದ್ದರು. ಇದು ನಡೆದು ನೂರು ವರ್ಷಗಳಾದ ಹಿನ್ನೆಲೆಯಲ್ಲಿ ಕೆಳದ ವರ್ಷ ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿಯವರ ಪ್ರತಿಮೆಯನ್ನು ಸುವರ್ಣಸೌಧದ ಪಕ್ಕದಲ್ಲಿ ಸ್ಥಾಪಿಸಲಾಗಿದೆ.

ನಾವೆಲ್ಲರೂ ದೇಶಪ್ರೇಮಿಗಳಾಗಬೇಕು. ದೇಶದಲ್ಲಿ ಅನೇಕ ಜಾತಿ, ಧರ್ಮಗಳಿದ್ದು, ನಾವೆಲ್ಲರೂ ಜಾತ್ಯತೀತರಾಗಬೇಕಾಗಿರುವುದು ಅವಶ್ಯಕ. ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕೆ ಹೊರತು ದ್ವೇಷಿಸಬಾರದು. ಆಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಜಾತ್ಯತೀತ ರಾಷ್ಟ್ರ ನಿರ್ಮಾಣ ಕಷ್ಟವಾಗುತ್ತದೆ.

ಸ್ವಾತಂತ್ರ್ಯ ಬಂದು 79 ವರ್ಷಗಳಾಗಿವೆ. ನಾವೆಷ್ಟರಮಟ್ಟಿಗೆ ಭ್ರಾತೃತ್ವ, ದೇಶಪ್ರೇಮ, ಮನುಷ್ಯ ಸಮಾಜವನ್ನು ಈ ದೇಶದಲ್ಲಿ ಸಾಧಿಸಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು. ಇದಿಲ್ಲದೇ ಹೋದರೆ ಮನುಷ್ಯರಾಗಿ ಬಾಳುವುದು ಸಾಧ್ಯವಿಲ್ಲ. ಎಲ್ಲ ವಿದ್ಯಾರ್ಥಿಗಳಲ್ಲಿ, ಯುವಕರಲ್ಲಿ ಈ ಮನೋಭಾವ ಬೆಳೆಯಬೇಕು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಶಾಲಾ ಕಾಲೇಜುಗಳಲ್ಲಿ ಓದಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಅದಕ್ಕಾಗಿಯೇ ಇಂಥ ಐತಿಹಾಸಿಕ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ. ವಿನೋದ್ ಕುಮಾರ್ ರೇವಪ್ಪ ಬಮ್ಮಣ್ಣ ಅವರು ಕೊಟ್ಟಿರುವ ರಾಷ್ಟ್ರಧ್ವಜಕ್ಕಾಗಿ ಸಮಸ್ತ ಕನ್ನಡಿಗರ ಪರವಾಗಿ ಮತ್ತೊಮ್ಮೆ ಧನ್ಯವಾದ ಅರ್ಪಿಸುತ್ತೇನೆ ಎಂದರು.

ಇಂದು ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣಗೊಳಿಸಲಾಗಿದ್ದು, ಇದಕ್ಕೆ ಕಾರಣರಾದ ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಗೆ ಮತ್ತು ಕಲಬುರ್ಗಿ ಜಿಲ್ಲೆಯ ಕಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮಣ್ಣ ಅವರ ಕುಟುಂಬಸ್ಥರಿಗೂ ಧನ್ಯವಾದಗಳು.… pic.twitter.com/k1JI0ykQ2f

— Siddaramaiah (@siddaramaiah) December 9, 2025

it is a symbol of India's pride and self-respect: CM Siddaramaiah The tricolour is not just a khadi cloth
Share. Facebook Twitter LinkedIn WhatsApp Email

Related Posts

ಸಚಿವ ಡಿ ಸುಧಾಕರ್ ನಿಧನ ಹಿನ್ನೆಲೆ ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ 3 ದಿನ ಶೋಕಾಚಾರಣೆ : ಸರ್ಕಾರ ಆದೇಶ

2 Mins Read

BREAKING : ಪ್ರಧಾನಿ ಮೋದಿ ತೆರಳುವ ರಸ್ತೆಯ ಸಮೀಪ ಜಿಲೇಟಿನ್ ಕಡ್ಡಿಗಳು ಪತ್ತೆ : ಓರ್ವ ಅರೆಸ್ಟ್ | Gelatin sticks found on Modi’s way

1 Min Read

ಪುಟ್ಟ ಕೈಗಳಲ್ಲಿ ಅರಳಿದ ಅನಿಮೇಷನ್ ಲೋಕ: ಪರಮ್ ಬೇಸಿಗೆ ಶಿಬಿರಕ್ಕೆ ಅದ್ಧೂರಿ ತೆರೆ

2 Mins Read
Recent News
Vijay 5

ತಮಿಳುನಾಡು ನೂತನ ಸಿಎಂ ವಿಜಯ್‌ ‘ಗ್ಯಾರಂಟಿ’ ಧಮಾಕಾ: ಮಹಿಳೆಯರಿಗೆ ವಿಶೇಷ ಪಡೆ, ವಿದ್ಯುತ್ ಫ್ರೀ

ಸಚಿವ ಡಿ ಸುಧಾಕರ್ ನಿಧನ ಹಿನ್ನೆಲೆ ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ 3 ದಿನ ಶೋಕಾಚಾರಣೆ : ಸರ್ಕಾರ ಆದೇಶ

BREAKING : ಪ್ರಧಾನಿ ಮೋದಿ ತೆರಳುವ ರಸ್ತೆಯ ಸಮೀಪ ಜಿಲೇಟಿನ್ ಕಡ್ಡಿಗಳು ಪತ್ತೆ : ಓರ್ವ ಅರೆಸ್ಟ್ | Gelatin sticks found on Modi’s way

ಪುಟ್ಟ ಕೈಗಳಲ್ಲಿ ಅರಳಿದ ಅನಿಮೇಷನ್ ಲೋಕ: ಪರಮ್ ಬೇಸಿಗೆ ಶಿಬಿರಕ್ಕೆ ಅದ್ಧೂರಿ ತೆರೆ

State News
KARNATAKA

ಸಚಿವ ಡಿ ಸುಧಾಕರ್ ನಿಧನ ಹಿನ್ನೆಲೆ ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ 3 ದಿನ ಶೋಕಾಚಾರಣೆ : ಸರ್ಕಾರ ಆದೇಶ

By ಸುರೇಶ್‌ KARNATAKA 2 Mins Read

ಬೆಂಗಳೂರು: ರಾಜ್ಯ ರಾಜಕಾರಣದ ಹಿರಿಯ ಮುಖಂಡರು ಹಾಗೂ ಹಾಲಿ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ (63)…

BREAKING : ಪ್ರಧಾನಿ ಮೋದಿ ತೆರಳುವ ರಸ್ತೆಯ ಸಮೀಪ ಜಿಲೇಟಿನ್ ಕಡ್ಡಿಗಳು ಪತ್ತೆ : ಓರ್ವ ಅರೆಸ್ಟ್ | Gelatin sticks found on Modi’s way

ಪುಟ್ಟ ಕೈಗಳಲ್ಲಿ ಅರಳಿದ ಅನಿಮೇಷನ್ ಲೋಕ: ಪರಮ್ ಬೇಸಿಗೆ ಶಿಬಿರಕ್ಕೆ ಅದ್ಧೂರಿ ತೆರೆ

BREAKING : ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ದಾಳಿ, ಬಾಲಕ ಸಾವು | Boy dies in leopard attack

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.