ಬಾಗಲಕೋಟೆ : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು ಲಾರಿ ಹಾಗೂ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬಂಟನೂರು ಕ್ರಾಸ್ ಬಳಿ ಒಂದು ಅಪಘಾತ ಸಂಭವಿಸಿದೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಂಟನೂರು ಕ್ರಾಸ್ ಬಳಿ ಬೆಳಿಗ್ಗೆ ಲಾರಿ ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿ ಮಲ್ಲಿಕಾರ್ಜುನ್ ಗುರಿಕಾರ್ (22) ರೇವಣಸಿದ್ದಪ್ಪ ಕಡೆಮನಿ (20) ಹಾಗೂ ಸುರೇಶ್ ಕೊಣ್ಣೂರ್ (33) ಎನ್ನುವವರು ಸಾವನಪ್ಪಿದ್ದಾರೆ ಇನ್ನು ಅಪಘಾತದಲ್ಲಿ ರಮೇಶ್ ಮಾದರ್ ಗೆ ಗಂಭೀರವಾದ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಡಿಕ್ಕಿ ರಭಸಕ್ಕೆ ಲಾರಿ ಮತ್ತು ಸಿಮೆಂಟ್ ತುಂಬಿದ ಟ್ಯಾಂಕರ್ ನಜ್ಗುಗುಜ್ಜಾಗಿದೆ. ಘಟನಾ ಸ್ಥಳಕೆ ಎಸ್ಪಿ ಸಿದ್ಧಾರ್ಥ ಗೋಯಲ್ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಪುರ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.








