ಬೆಳಗಾವಿ : ಅನುದಾನ ಬಿಡುಗಡೆ ವಿಚಾರಕ್ಕೆ ಸಂಬಂಧಪಟ್ಟಂತೆ ಹಣ ಬೇಗ ಬಿಡುಗಡೆ ಮಾಡುವಂತೆ ಶಾಸಕರು ಕೇಳಿದ್ದರು. ನಮ್ಮ ಕಡೆ ಗಮನ ಇರಲಿ ಅಂತ ಎಂಎಲ್‌ಸಿ ಗಳು ಹೇಳಿದ್ದರು . ಬೇಗ ಅನುದಾನ ಬಿಡುಗಡೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ಬೆಳಗಾವಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದರು.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅನುದಾನ ಬಿಡುಗಡೆ ವಿಚಾರವಾಗಿ ಎಂ ಎಲ್ ಸಿ ಗಳು ಹೇಳಿದ್ದರು ನಮ್ಮ ಕಡೆ ಗಮನ ಇರಲಿ ಅಂತ ಹೇಳಿದ್ದರು ಹಾಗಾಗಿ ಆದಷ್ಟು ಶೀಘ್ರದಲ್ಲಿ ಅನುದಾನ ಬಿಡುಗಡೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಕ್ಯಾಬಿನೆಟ್ ನಲ್ಲಿ ಅನುದಾನದ ಬಗ್ಗೆ ಚರ್ಚೆ ಇದ್ದೇ ಇರುತ್ತದೆ. ಹಾಗಾಗಿ ಆದಷ್ಟು ಬೇಗ ಅನುದಾನ ಬಿಡುಗಡೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.








