ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ಸೇರಿದಂತೆ 12 ವಿಧೇಯಕಗಳನ್ನು ವಿಧಾನಸಭೆಯಲ್ಲಿ ಸಚಿವ ಹೆಚ್.ಕೆ.ಪಾಟೀಲ್ ಮಂಡಿಸಿದ್ದಾರೆ.
ಕಾನೂನು ಸಚಿವ ಹೆಚ್ ಕೆ ಪಾಟೀಲ್ ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆಯನ್ನು ನೀಡಲಾಗಿದೆ ಎಂದರು.
ಇನ್ನು ದ್ವೇಷ ಭಾಷಣ ಪ್ರತಿಬಂಧನ ಬಿಲ್ ಗೆ ವಿಧಾನಸಭೆಯಲ್ಲಿ ವಿಪಕ್ಷ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಮಂಡನೆ ವೇಳೆ ಒಪ್ಪಿಗೆ ಇಲ್ಲ ಎಂದು ಬಿಜೆಪಿ ಶಾಸಕರು ಕೂಗಿದ್ದಾರೆ.
ವಿಧಾನಸಭೆಯಲ್ಲಿ 12 ಪ್ರಮುಖ ವಿಧೇಯಕಗಳ ಮಂಡನೆ
ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕ
ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮತ್ತು ಇತರೆ ಕಾನೂನು ವಿಧೇಯಕ (ತಿದ್ದುಪಡಿ)
ಔಷಧ ಮತ್ತು ಪ್ರಸಾಧನಾ ಸಾಮಾಗ್ರಿ ವಿಧೇಯಕ (ಕರ್ನಾಟಕ ತಿದ್ದುಪಡಿ)
ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ
ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ
ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿ ಕಾರ್ಯಕರ್ತರ (ತಿದ್ದುಪಡಿ) ವಿಧೇಯಕ
ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ (2ನೇ ತಿದ್ದುಪಡಿ) ವಿಧೇಯಕ
ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮರಾಯ ದತ್ತಿಗಳ ವಿಧೇಯಕ (ತಿದ್ದುಪಡಿ)
ಚಂದ್ರಗುತ್ತಿ ರೇಣುಕಾಂಬ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ







