ಚಿತ್ರದುರ್ಗ : ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿಯನ್ನು ಧ್ವಂಸ ಮಾಡಲಾಗಿದೆ ಎಂದು ವರದಿಯಾಗಿದೆ.
ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ನಾಮಫಲಕ ಧ್ವಂಸ ಮಾಡಲಾಗಿದೆ. ಲೇಔಟ್ ನಿರ್ಮಾಣ ವೇಳೆ ಸಮಾಧಿಗೆ ಧಕ್ಕೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಾನೆ ಎಂದು ನಟ ದರ್ಶನ್ ಸೇರಿದಂತೆ ಹಲವು ಆರೋಪಿಗಳು ಬೆಂಗಳೂರಿನ ಪಟ್ಟಣಗೆರೆ ಶೆಡ್ ಗೆ ರೇಣುಕಾಸ್ವಾಮಿ ಕರೆತಂದುಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ರೇಣುಕಾ ಸ್ವಾಮೀ ಸಮಾಜವನ್ನು ಧ್ವಂಸಗೊಳಿಸಲಾಗಿದೆ.
ಚಿತ್ರದುರ್ಗದಲ್ಲಿ ಸಮಾಧಿಯನ್ನು ಧ್ವಂಸಗೊಳಿಸಲಾಗಿದೆ ಜೋಗಿ ಮಟ್ಟಿ ರಸ್ತೆಯಲ್ಲಿರುವ ರುದ್ರ ಭೂಮಿಯಲ್ಲಿ ರೇಣುಕಾ ಸ್ವಾಮಿ ಶವ ಸಂಸ್ಕಾರ ಮಾಡಲಾಗಿತ್ತು ಸಮಾಧಿಯ ಮೇಲೆ ನಾಮಫಲಕ ಕೂಡ ಹಾಕಲಾಗಿತ್ತು. ಜೂನ್ 8 2024 ಎಂದು ದಿನಾಂಕ ಸಹ ಹಾಕಲಾಗಿತ್ತು ಆದರೆ ಇಂದು ಬೆಳಿಗ್ಗೆ ರೇಣುಕಾ ಸ್ವಾಮಿ ಸಮಾಧಿ ಧ್ವಂಸಗೊಳಿಸಲಾಗಿದೆ ಇದಕ್ಕೆ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ








