ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ಸೇರಿದಂತೆ 12 ವಿಧೇಯಕಗಳನ್ನು ವಿಧಾನಸಭೆಯಲ್ಲಿ ಸಚಿವ ಹೆಚ್.ಕೆ.ಪಾಟೀಲ್ ಮಂಡಿಸಿದ್ದಾರೆ.
ಕಾನೂನು ಸಚಿವ ಹೆಚ್ ಕೆ ಪಾಟೀಲ್ ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆಯನ್ನು ನೀಡಲಾಗಿದೆ ಎಂದರು.
ಇನ್ನು ದ್ವೇಷ ಭಾಷಣ ಪ್ರತಿಬಂಧನ ಬಿಲ್ ಗೆ ವಿಧಾನಸಭೆಯಲ್ಲಿ ವಿಪಕ್ಷ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಮಂಡನೆ ವೇಳೆ ಒಪ್ಪಿಗೆ ಇಲ್ಲ ಎಂದು ಬಿಜೆಪಿ ಶಾಸಕರು ಕೂಗಿದ್ದಾರೆ.
ವಿಧೇಯಕದಲ್ಲೇನಿದೆ?
ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ಭಾಷೆ, ರೆಸಿಡೆನ್ಸ್, ಅಂಗವೈಕಲ್ಯ ಬುಡಕಟ್ಟು ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವ ಅಥವಾ ದ್ವೇಷವನ್ನು ಉತ್ತೇಜಿಸುವುದು ಅಪರಾಧ
ಮೂರು ವರ್ಷಗಳ ಕಾಲ ಶಿಕ್ಷೆಗೆ ಗುರಿಪಡಿಸಲು ಅವಕಾಶ ಅಥವಾ 5 ಸಾವಿರ ರೂಪಾಯಿವರೆಗೆ ದಂಡ, ಮೂರು ವರ್ಷ ಶಿಕ್ಷೆ, 5 ಸಾವಿರ ದಂಡ ಎರಡನ್ನೂ ವಿಧಿಸಲು ಅವಕಾಶ
ದ್ವೇಷ ಭಾಷಣವನ್ನು ಉತ್ತೇಜಿಸುವಂತೆ ಉದ್ದೇಶಪೂರ್ವಕವಾಗಿ ಪ್ರಕಟಿಸುವವರು, ಪ್ರಚಾರ ಮಾಡುವವರು, ಸಮರ್ಥಿಸುವವರನ್ನ ಶಿಕೆಗೆ ಗುರಿಪಡಿಸಲು ಅವಕಾಶ. ಯಾವುದೇ ಭಾವನಾತ್ಮಕ, ಮಾನಸಿಕ, ದೈಹಿಕ, ಸಾಮಾಜಿಕ ಅಥವಾ ಆರ್ಥಿಕ ಹಾನಿಯೂ ಇದರಲ್ಲಿ ಒಳಗೊಂಡಿದೆ.ದತ್ತಾಂಶ, ಸಂದೇಶ, ಪಠ್ಯ ಚಿತ್ರಗಳು, ಧ್ವನಿ, ಸಂಕೇತಗಳು, ಕಂಪ್ಯೂಟರ್ ಪ್ರೋಗ್ರಾಂಗಳು ಸಾಫ್ಟ್ವೇರ್ ಮತ್ತು ಡೇಟಾಬೇಸ್‌ಗಳು ಅಥವಾ ಮೈಕ್ರೋಫಿಲ್ಡ್ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧದ ವ್ಯಾಪ್ತಿಗೆ ಒಳಪಡಿಸುವ ಸಾಧ್ಯತೆ ಇದೆ.
ವಿಧಾನಸಭೆಯಲ್ಲಿ 12 ಪ್ರಮುಖ ವಿಧೇಯಕಗಳ ಮಂಡನೆ
ದ್ವೇಷ ಭಾಷಣ ಪ್ರತಿಬಂಧಕ
ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮತ್ತು ಇತರೆ ಕಾನೂನು ವಿಧೇಯಕ (ತಿದ್ದುಪಡಿ)
ಔಷಧ ಮತ್ತು ಪ್ರಸಾಧನಾ ಸಾಮಾಗ್ರಿ ವಿಧೇಯಕ (ಕರ್ನಾಟಕ ತಿದ್ದುಪಡಿ)
ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ
ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ
ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿ ಕಾರ್ಯಕರ್ತರ (ತಿದ್ದುಪಡಿ) ವಿಧೇಯಕ
ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ (2ನೇ ತಿದ್ದುಪಡಿ) ವಿಧೇಯಕ








