ದಾವಣಗೆರೆ: ಜಿಲ್ಲೆಯಲ್ಲಿ ಸರ್ಕಾರಿ ಕೆಲಸ ಸಿಗಲಿಲ್ಲವೆಂದು ಮನನೊಂದಂತ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ನಡೆದಿದೆ.
ದಾವಣಗೆರೆಯ ಜಗಳೂರು ತಾಲ್ಲೂಕಿನ ಗುಡ್ಡದಲಿಂಗಣ್ಣ ಹಳ್ಳಿಯ ಯುವಕ ಅಂಜಿನಪ್ಪ(26) ಎಂಬಾತನೇ ಆತ್ಮಹತ್ಯೆಗೆ ಶರಣಾದಂತ ಯುವಕನಾಗಿದ್ದಾನೆ. ಸರ್ಕಾರಿ ಕೆಲಸ ಸಿಗದಿದ್ದಕ್ಕೆ ಅಂಜಿನಪ್ಪ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಹೇಳಲಾಗುತ್ತಿದೆ.
ಅಂದಹಾಗೇ ಮೃತ ಅಂಜಿನಪ್ಪ ಪದವಿ ಮುಗಿಸಿದ ಬಳಿಕ ಸ್ಪರ್ಧಾತ್ಮಕ ಪರೀಕ್ಷೆಗಾಗಿ ತಯಾರಿ ನಡೆಸಿದ್ದರು. ಆದರೇ ಎಷ್ಟೇ ಪ್ರಯತ್ನ ಪಟ್ಟರೂ ಅವರಿಗೆ ಸರ್ಕಾರಿ ಕೆಲಸ ಸಿಕ್ಕಿರಲಿಲ್ಲ. ಇದರಿಂದಾಗಿ ಯುವಕ ಅಂಜಿನಪ್ಪ ನೊಂದುಕೊಂಡು, ತನ್ನ ಬೇಸರವನ್ನು ಸ್ನೇಹಿತರ ಬಳಿಯಲ್ಲಿ ಹೇಳಿಕೊಂಡಿದ್ದನು ಎನ್ನಲಾಗಿದೆ.








