ಚಾಮರಾಜನಗರ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ಒಂದು ನಡೆದಿದ್ದು,ಗುಂಡ್ಲುಪೇಟೆ ತಾಲೂಕಿನ ಗ್ರಾಮವೊಂದರಲ್ಲಿ 15 ವರ್ಷದ ಬಾಲಕಿಯೊಬ್ಬಳು ಗರ್ಭಿಣಿಯಾಗಿರುವ ಮತ್ತೊಂದು ಶಾಕಿಂಗ್ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿಯು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ತೆರಳಿದ್ದಾಗ ಗರ್ಭಿಣಿ ಆಗಿರುವುದು ಪತ್ತೆಯಾಗಿದೆ.
15 ವರ್ಷ 3 ತಿಂಗಳ ಬಾಲಕಿ ಗರ್ಭಿಣಿ ಆಗಿದ್ದು, ಈ ಸಂಬಂಧ ಯುವಕನೊಬ್ಬನ ವಿರುದ್ಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ದೂರು ಕೂಡ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
2025ರ ಆಗಸ್ಟ್ನಲ್ಲಿ ತಾನೇ ಬಲವಂತದಿಂದ ಯುವಕನ ಜೊತೆ ದೈಹಿಕ ಸಂಪರ್ಕ ಬೆಳೆಸಿದೆ. ಅದಾದ ಬಳಿಕ, ಕಳೆದ ಮೂರು ತಿಂಗಳಿನಿಂದ ತನಗೆ ಋತುಸ್ರಾವ ಆಗದ ಹಿನ್ನೆಲೆ ಪಾಲಕರು ಆಸ್ಪತ್ರೆಗೆ ಕರೆತಂದಾ








