ತುಮಕೂರು : ತುಮಕೂರು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಲಿಂಗರಾಜು ಹಾಗೂ ಸಹಾಯಕ ಪ್ರಸಾದ್ 1.15 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲಕ್ಕೆ ಬಿದ್ದಿದ್ದಾರೆ. ತುಮಕೂರು ಜಿಲ್ಲಾ ಕೈಗಾರಿಕಾ ಕಚೇರಿಯ ಮುಂಭಾಗ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಸಣ್ಣ ಉದ್ಯಮಿದಾರರೊಬ್ಬರಿಗೆ ಸಹಾಯಧನ ನೀಡಲು ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಇಬ್ಬರನ್ನು ರೆಡ್ ಹ್ಯಾಂಡಾಗಿ ಅರೆಸ್ಟ್ ಮಾಡಿದ್ದಾರೆ. ಇಬ್ಬರನ್ನು ವಶಕ್ಕೆ ಪಡೆದುಕೊಂಡು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.








