Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ನಾನಾ ಕಡೆ ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನ: ಬಂಕ್‌ಗಳಲ್ಲಿ ಕೃತಕ ತೈಲ ಅಭಾವದ ಭೀತಿ!

04/03/2026 5:55 PM

ರಾಜ್ಯದ 10 ವಿಭಾಗಗಳಿಗೆ ಬಿಜೆಪಿಯಿಂದ ಪ್ರಭಾರಿ, ಸಹ-ಪ್ರಭಾರಿಗಳನ್ನು ನಿಯುಕ್ತಿಗೊಳಿಸಿ ಬಿವೈ ವಿಜಯೇಂದ್ರ ಆದೇಶ

04/03/2026 5:45 PM

BREAKING : ಇರಾನ್’ನಲ್ಲಿ ಅಮೆರಿಕ-ಇಸ್ರೇಲ್ ದಾಳಿಗೆ ಬಲಿಯಾದವರ ಸಂಖ್ಯೆ 1,045ಕ್ಕೆ ಏರಿಕೆ

04/03/2026 5:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ‘ಕಲ್ಯಾಣ ಕರ್ನಾಟಕ’ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಇಲಾಖೆಗಳ ಹಂತದಲ್ಲೇ ಶೇ. 80ರಷ್ಟು ಹುದ್ದೆಗಳ ‘ನೇಮಕಾತಿ’ಗೆ ಅವಕಾಶ: CM ಸಿದ್ಧರಾಮಯ್ಯ ಘೋಷಣೆ
KARNATAKA

GOOD NEWS : ‘ಕಲ್ಯಾಣ ಕರ್ನಾಟಕ’ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಇಲಾಖೆಗಳ ಹಂತದಲ್ಲೇ ಶೇ. 80ರಷ್ಟು ಹುದ್ದೆಗಳ ‘ನೇಮಕಾತಿ’ಗೆ ಅವಕಾಶ: CM ಸಿದ್ಧರಾಮಯ್ಯ ಘೋಷಣೆ

By kannadanewsnow5712/12/2025 6:00 AM

ಬೆಳಗಾವಿ ಸುವರ್ಣವಿಧಾನಸೌಧ : ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಲ್ಲಿ ಮಂಜೂರಾದ ಹುದ್ದೆಗಳಲ್ಲಿ ಶೇ.80ರವರೆಗೆ ಹುದ್ದೆಗಳ ನೇಮಕಾತಿಯನ್ನು ಆಡಳಿತ ಇಲಾಖೆಗಳ ಹಂತದಲ್ಲಿಯೇ ನಿಯಮಾನುಸಾರ ಭರ್ತಿ ಮಾಡಿಕೊಳ್ಳಲು ಇಲಾಖಾ ಕಾರ್ಯದರ್ಶಿಗಳಿಗೆ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹೇಳಿದರು.

ಮೇಲ್ಮನೆಯಲ್ಲಿ ಡಿ.11ರಂದು ಪ್ರಶ್ನೋತ್ತರ ವೇಳೆ ಸದಸ್ಯರಾದ ಡಾ.ಧನಂಜಯ ಸರ್ಜಿ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರದ (ಕಾರ್ಯಕಲಾಪಗಳ ನಿರ್ವಹಣೆ) ನಿಯಮಗಳು 1977ರ ನಿಯಮ 42ರಲ್ಲಿ ರಾಜ್ಯದ ಹಣಕಾಸಿನ ಮೇಲೆ ಪರಿಣಾಮ ಉಂಟು ಮಾಡುವಂತಹ ವಿಶೇಷವಾಗಿ ಯಾವುದೇ ಹುದ್ದೆಯನ್ನು ಸಾರ್ವಜನಿಕ ಹುದ್ದೆಗೆ ಸೇರಿಸುವ ಅಥವಾ ಸಾರ್ವಜನಿಕ ಸೇವೆಯಿಂದ ರದ್ದುಪಡಿಸುವ ಅಥವಾ ಯಾವುದೇ ಹುದ್ದೆಯ ಅವಧಿಯನ್ನು ಅಥವಾ ಉಪಲಬ್ದಗಳನ್ನು ವ್ಯತ್ಯಾಸ ಮಾಡುವ ಪ್ರಸ್ತಾವನೆಗಳಿಗೆ ಆರ್ಥಿಕ ಇಲಾಖೆಯ ಅನುಮತಿ ಪಡೆಯಲು ತಿಳಿಸಲಾಗಿರುತ್ತದೆ. ಆದ್ದರಿಂದ ಹುದ್ದೆಗಳ ಸೃಜನ ಅಥವಾ ಹುದ್ದೆಗಳ ಸಂಖ್ಯೆಯನ್ನು ಒಳಗೊಂಡ ಪ್ರಸ್ತಾವನೆ, ಯೋಜನೆಗಳ ಕುರಿತು ಆದೇಶಗಳನ್ನು ಹೊರಡಿಸುವ ಪೂರ್ವದಲ್ಲಿ ಆರ್ಥಿಕ ಇಲಾಖೆಯ ಸಹಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ.

ಆರ್ಥಿಕ ಇಲಾಖೆಯ ಪೂರ್ವಾನುಮತಿಯನ್ನು ಪಡೆಯದೇ ಆಡಳಿತ ಇಲಾಖೆಗಳು ಹುದ್ದೆಗಳನ್ನು ಭರ್ತಿ ಮಾಡಿಕೊಂಡಲ್ಲಿ ಈ ಹುದ್ದೆಗಳಿಗೆ ನೀಡಬೇಕಾದ ವೇತನಕ್ಕಾಗಿ ಆಯವ್ಯಯದಲ್ಲಿ ಸೂಕ್ತ ಅನುದಾನವನ್ನು ಕಲ್ಪಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಜೊತೆಗೆ ಆರ್ಥಿಕ ಇಲಾಖೆಯು ಅಗತ್ಯತೆಗೆ ಅನುಗುಣವಾಗಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸಹಮತಿಸುತ್ತದೆ. ಜೊತೆಗೆ, ಕೆಲವು ಇಲಾಖೆಗಳ ಕಾರ್ಯವೈಖರಿ ಅಥವಾ ಕಾರ್ಯ ಪದ್ಧತಿಗಳಲ್ಲಿ ಬದಲಾವಣೆ ಉಂಟಾದಾಗ, ಸಿಬ್ಬಂದಿಯ ಅವಶ್ಯಕತೆ ಹಾಗೂ ಸಂಖ್ಯೆಯ ಬಗ್ಗೆ ಪರಾಮರ್ಶಿಸಬೇಕಾಗುತ್ತದೆ. ಈ ಕಾರ್ಯಗಳನ್ನು ಆರ್ಥಿಕ ಇಲಾಖೆ ನಿರ್ವಹಿಸುತ್ತದೆ.

ಒಂದು ವೇಳೆ ಆಡಳಿತ ಇಲಾಖೆಗಳು ಆರ್ಥಿಕ ಇಲಾಖೆಯ ಸಹಮತಿಯನ್ನು ಪಡೆಯದೇ ತಮ್ಮ ಹಂತದಲ್ಲಿಯೇ ಹುದ್ದೆಗಳನ್ನು ಭರ್ತಿ ಮಾಡಿಕೊಂಡಲ್ಲಿ ಆಯವ್ಯಯದಲ್ಲಿ ಸೂಕ್ತ ಅನುದಾನದ ಕೊರತೆ ಉಂಟಾಗಿ ಸಿಬ್ಬಂದಿಯ ವೇತನ ಪಾವತಿಗೆ ತೊಂದರೆಯಾಗುತ್ತದೆ. ಆರ್ಥಿಕ ಇಲಾಖೆಯ ಅನುಮತಿ ಪಡೆದು ಸೇವೆ ಪಡೆದ ಇಲಾಖೆಗಳ ಸಿಬ್ಬಂದಿಯ ವೇತನ ಪಾವತಿಸಲು ಆಯವ್ಯಯದಲ್ಲಿ ಅಗತ್ಯ ಅನುದಾನ ಕಲ್ಪಿಸಲಾಗುತ್ತದೆ. ಆದುದರಿಂದ ವೇತನ ಪಾವತಿಗೆ ತೊಂದರೆ ಹಾಗೂ ವಿಳಂಬ ಆಗುವುದಿಲ್ಲ.

ಆದಾಗ್ಯೂ ಮುಂಬಡ್ತಿ ಮೂಲಕ ಭರ್ತಿ ಮಾಡಿಕೊಳ್ಳಬೇಕಾದ ಹುದ್ದೆಗಳು, ಅನುಕಂಪದ ಆಧಾರದ ನೇಮಕಾತಿಗಳು, ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಲ್ಲಿ ಮಂಜೂರಾದ ಹುದ್ದೆಗಳಲ್ಲಿ ಶೇ.80ರವರೆಗೆ ಹುದ್ದೆಗಳ ನೇಮಕಾತಿ, ಆರ್ಥಿಕ ಇಲಾಖೆಯಿಂದ ಅನುಮೋದಿಸಲ್ಪಟ್ಟ ಹುದ್ದೆಗಳಲ್ಲಿ ಬ್ಯಾಕ್ಲಾಗ್ ಹುದ್ದೆಗಳೆಂದು ಗುರುತಿಸಿದ ಹುದ್ದೆಗಳ ನೇಮಕಾತಿಯನ್ನು ಆಡಳಿತ ಇಲಾಖೆಗಳ ಹಂತದಲ್ಲಿಯೇ ನಿಯಮಾನುಸಾರ ಭರ್ತಿ ಮಾಡಿಕೊಳ್ಳಲು ಇಲಾಖಾ ಕಾರ್ಯದರ್ಶಿಗಳಿಗೆ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಸ್ಪಷ್ಟಪಡಿಸಿದರು.

Welfare Karnataka: Allowing filling of vacant posts under Section 371(J) at the level of administrative departments: CM Siddaramaiah
Share. Facebook Twitter LinkedIn WhatsApp Email

Related Posts

ರಾಜ್ಯದ ನಾನಾ ಕಡೆ ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನ: ಬಂಕ್‌ಗಳಲ್ಲಿ ಕೃತಕ ತೈಲ ಅಭಾವದ ಭೀತಿ!

04/03/2026 5:55 PM2 Mins Read

ರಾಜ್ಯದ 10 ವಿಭಾಗಗಳಿಗೆ ಬಿಜೆಪಿಯಿಂದ ಪ್ರಭಾರಿ, ಸಹ-ಪ್ರಭಾರಿಗಳನ್ನು ನಿಯುಕ್ತಿಗೊಳಿಸಿ ಬಿವೈ ವಿಜಯೇಂದ್ರ ಆದೇಶ

04/03/2026 5:45 PM1 Min Read

ಶಿವಮೊಗ್ಗ: ಮಾ.6ರಂದು ಸಾಗರದಲ್ಲಿ ‘ಬೃಹತ್ ಹಿಂದೂ ಸಾಮಾಜೋತ್ಸವ’ ಆಯೋಜನೆ

04/03/2026 5:31 PM1 Min Read
Recent News

ರಾಜ್ಯದ ನಾನಾ ಕಡೆ ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನ: ಬಂಕ್‌ಗಳಲ್ಲಿ ಕೃತಕ ತೈಲ ಅಭಾವದ ಭೀತಿ!

04/03/2026 5:55 PM

ರಾಜ್ಯದ 10 ವಿಭಾಗಗಳಿಗೆ ಬಿಜೆಪಿಯಿಂದ ಪ್ರಭಾರಿ, ಸಹ-ಪ್ರಭಾರಿಗಳನ್ನು ನಿಯುಕ್ತಿಗೊಳಿಸಿ ಬಿವೈ ವಿಜಯೇಂದ್ರ ಆದೇಶ

04/03/2026 5:45 PM

BREAKING : ಇರಾನ್’ನಲ್ಲಿ ಅಮೆರಿಕ-ಇಸ್ರೇಲ್ ದಾಳಿಗೆ ಬಲಿಯಾದವರ ಸಂಖ್ಯೆ 1,045ಕ್ಕೆ ಏರಿಕೆ

04/03/2026 5:42 PM

ಶಿವಮೊಗ್ಗ: ಮಾ.6ರಂದು ಸಾಗರದಲ್ಲಿ ‘ಬೃಹತ್ ಹಿಂದೂ ಸಾಮಾಜೋತ್ಸವ’ ಆಯೋಜನೆ

04/03/2026 5:31 PM
State News
KARNATAKA

ರಾಜ್ಯದ ನಾನಾ ಕಡೆ ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನ: ಬಂಕ್‌ಗಳಲ್ಲಿ ಕೃತಕ ತೈಲ ಅಭಾವದ ಭೀತಿ!

By kannadanewsnow0904/03/2026 5:55 PM KARNATAKA 2 Mins Read

ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಕಾರ್ಮೋಡಗಳು ಕೇವಲ ಮಧ್ಯಪ್ರಾಚ್ಯವನ್ನಷ್ಟೇ ಅಲ್ಲ, ಕರ್ನಾಟಕದ ವಾಹನ ಸವಾರರನ್ನೂ ಬೆಚ್ಚಿಬೀಳಿಸಿವೆ. ಹೌದು,…

ರಾಜ್ಯದ 10 ವಿಭಾಗಗಳಿಗೆ ಬಿಜೆಪಿಯಿಂದ ಪ್ರಭಾರಿ, ಸಹ-ಪ್ರಭಾರಿಗಳನ್ನು ನಿಯುಕ್ತಿಗೊಳಿಸಿ ಬಿವೈ ವಿಜಯೇಂದ್ರ ಆದೇಶ

04/03/2026 5:45 PM

ಶಿವಮೊಗ್ಗ: ಮಾ.6ರಂದು ಸಾಗರದಲ್ಲಿ ‘ಬೃಹತ್ ಹಿಂದೂ ಸಾಮಾಜೋತ್ಸವ’ ಆಯೋಜನೆ

04/03/2026 5:31 PM

ಶಿವಮೊಗ್ಗ: ಮಾ.6ರಿಂದ 8ರವರೆಗೆ ಸಾಗರದಲ್ಲಿ ಚರಕ ಕೈಮಗ್ಗ ಉತ್ಪನ್ನಗಳ ಪ್ರದರ್ಶನ, ಮಾರಾಟ, ಆಹಾರ ಮೇಳ ಆಯೋಜನೆ

04/03/2026 5:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.