ಬೆಳಗಾವಿ : ರಾಜ್ಯದಲ್ಲಿ ಎಸ್ ಸಿ ಸಮುದಾಯವರಿಗೆ ಒಳಮೀಸಲಾತಿ ಜಾರಿಗೆ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪ ವರ್ಗೀಕರಣ) ವಿಧೇಯಕಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಹೌದು, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ರಾಜ್ಯದಲ್ಲಿ ಉದ್ಯೋಗ ಮತ್ತು ಶಿಕ್ಷಣ ಇನ್ನಿತರ ವಿಚಾರಗಳಲ್ಲಿ ಎಸ್ಪಿಯವರಿಗೆ 6-6-5 ಫಾರ್ಮೂಲಾ ಪ್ರಕಾರ ಒಳ ಮೀಸ ಲಾತಿ ಜಾರಿ ಮಾಡಲು ಹೊರಡಿಸಿದ್ದ ಐತಿಹಾಸಿಕ ಆದೇಶಕ್ಕೆ ಕಾನೂನು ಬಲ ನೀಡಲು ‘ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪ ವರ್ಗೀಕರಣ) ವಿಧೇಯಕ-2025’ ಜಾರಿಗೆ ನಿರ್ಧರಿಸಲಾಗಿದೆ.
ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲೇ ವಿಧೇಯಕ ಅಂಗೀಕರಿಸುವ ಮೂಲಕ ಎಸ್ ಸಿಯ ಶೇ.17ರಷ್ಟು ಮೀಸಲಾತಿ ಯಲ್ಲಿ ಎಡಗೈ, ಬಲಗೈ ಹಾಗೂ ದೃಶ್ಯ ಮತ್ತು ಅತಿಸೂಕ್ಷ್ಮ ಜಾತಿಗಳಿಗೆ ಒಳ ಮೀಸಲು ಜಾರಿ ಮಾಡಲು ತೀರ್ಮಾನಿಸಲಾಗಿದೆ.







