ಬೆಳಗಾವಿ : ರಾಜ್ಯ ಸರ್ಕಾರವು ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ಪೊಲೀಸ್ ಇಲಾಖೆಯಿಂದ 3,600 ಕಾನ್ಸ್ಟೇಬಲ್ ನೇಮಕಾತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಪರಿಶೀಲನೆಯಲ್ಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ನ ಡಿ.ಟಿ. ಶ್ರೀನಿ ವಾಸ್, ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ಪ್ರತ್ಯೇಕ ಪ್ರಶ್ನೆಗೆ ಉತ್ತರಿಸಿದ ಸಚಿವ ಡಾ.ಜಿ.ಪರಮೇಶ್ವರ್, , ಪೊಲೀಸ್ ಇಲಾಖೆಯಿಂದ 3,600 ಕಾನ್ಸ್ಟೇಬಲ್ ನೇಮಕಾತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಪರಿಶೀಲನೆಯಲ್ಲಿದೆ. ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಮಾಡಿಕೊಂಡು ಬರುತ್ತಿದೆ. ಸುಮಾರು 900 ಎಎಸ್ ಐ ನೇಮಕಾತಿ ಮಾಡಿದ್ದು, 10 ತಿಂಗಳ ತರಬೇತಿ ಪಡೆಯುತ್ತಿದ್ದಾರೆ. ಪೂರ್ಣಗೊಂಡ ನಂತರ ಹುದ್ದೆ ನೀಡಲಾಗುವುದು ಎಂದರು.
ರಾಜ್ಯ ಸರ್ಕಾರದ ಬೇರೆ ಬೇರೆ ಇಲಾಖೆಯಲ್ಲಿ ನೇಮಕಾತಿ ಮತ್ತು ಮುಂಬಡ್ತಿ ಹುದ್ದೆಗಳು 50:50 ಅನುಪಾತದಲ್ಲಿದೆ, ಆದರೆ ಪೊಲೀಸ್ ಇಲಾಖೆಯಲ್ಲಿ 70:30 ಅನುಪಾತದಲ್ಲಿದೆ. ಯುವಕರು ಬರಬೇಕು ಎಂದು ಶೇ.70 ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.







