ಬೆಳಗಾವಿ : ಕಳೆದ ಎರಡು ದಿನಗಳ ಹಿಂದೆ ಗದಗದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಥಳಿಸಿದ್ದ ಘಟನೆ ನಡೆದಿತ್ತು. ಇದೀಗ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪ ಹಿನ್ನೆಲೆಯಲ್ಲಿ ಪ್ರೌಢ ಶಾಲೆಯ ಪ್ರಾಂಶುಪಾಲ ಕಲ್ಲಪ್ಪ ಬೆಳಗಾವ್ಕರಿಗೆ ಪೋಷಕರು ಥಳಿಸಿದ್ದಾರೆ ಬೆಳಗುಂದಿ ಬಾಲಕಿಯರ ಪ್ರೌಢಶಾಲೆಯಲ್ಲಿ ಈ ಒಂದು ಘಟನೆ ನಡೆದಿದ್ದು ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ಇರುವ ಹೈಸ್ಕೂಲ್ನಲ್ಲಿ ಇಂದು ಈ ಘಟನೆ ನಡೆದಿದೆ.
ಘಟನೆ ತಿಳಿದು ಶಾಲೆಗೆ ನುಗ್ಗಿ ಸ್ಥಳೀಯರು ಮತ್ತು ಪೋಷಕರು ಪ್ರಾಂಶುಪಾಲನಿಗೆ ಥಳಿಸಿದ್ದಾರೆ. ಪ್ರಾಂಶುಪಾಲನ ವಿರುದ್ಧ ವಿದ್ಯಾರ್ಥಿನಿಯರು ಕೂಡ ಆಕ್ರೋಶ ಹೊರಹಾಕಿದ್ದಾರೆ. ಪ್ರಾಂಶುಪಾಲ ಕಲ್ಲಪ್ಪನನ್ನು ವಶಕ್ಕೆ ಪಡೆದು ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ಘಟನೆ ಕುರಿತು ಬೆಳಗಾವಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ








