ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ಆಗಿದ್ದು ಇದೀಗ ಜನರಲ್ಲಿ ಆತಂಕ ಮನೆ ಮಾಡಿದೆ. ಮೈಸೂರು, ಚಿಕ್ಕಮಗಳೂರು ಹಾಗು ಚಾಮರಾಜನಗರದಲ್ಲಿ ಹುಲಿ ಚಿರತೆ ಪ್ರತ್ಯಕ್ಷವಾಗುತ್ತಿದ್ದು ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ ಆಗಿದೆ.
ಹೌದು ಬೆಂಗಳೂರಿನ ಕಡಬಗೆರೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ಆಗಿದೆ. ಲಾರಿ ರಾಮಣ್ಣ ಎಂಬವರ ಮನೆಯ ಬಳಿ ಚಿರತೆ ಓಡಾಡಿದೆ.ಡಿಸೆಂಬರ್ 11ರಂದು ಚಿರತೆ ನಾಯಿಮರಿ ಎಳೆದೋಯ್ದಿದೆ. ಚಿರತೆ ಕಾಣಿಸಿಕೊಂಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹಾಗಾಗಿ ಗ್ರಾಮಸ್ಥರಿಗೆ ಹಾಗೂ ಎಲ್ಲರಿಗೂ ಎಚ್ಚರಿಕೆಯಿಂದ ಇರಲು ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ








