ಬೆಂಗಳೂರು: ರಾಜ್ಯದ ನಗರಸಭೆ, ಪುರಸಭೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಪೌರಕಾರ್ಮಿಕರಿಗೆ ಸರ್ಕಾರದಿಂದಲೇ ವೇತನ ಪಾವತಿಸುವ ಕುರಿತಂತೆ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬುದಾಗಿ ಪೌರಾಡಳಿತ ಸಚಿವ ರಹೀಂ ಖಾನ್ ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ಪೌರ ಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಸಿದ್ದು ಸವದಿ ಅವರ ಪ್ರಶ್ನೆಗೆ ಪೌರಾಡಳಿತ ಸಚಿವರಾದ ರಹೀಂ ಖಾನ್ ಅವರ ಉತ್ತರಿಸಿದರು.
ಕಳೆದ 2022ಕ್ಕೂ ಮುನ್ನ ನಗರ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರಿಗೆ ಎಸ್‍ಎಫ್‍ಸಿ ಅನುದಾನದಡಿ ವೇತನ ಪಾವತಿಸಲಾಗುತ್ತಿತ್ತು. ಆದರೆ ಸ್ಥಳೀಯ ಸಂಸ್ಥೆಗಳು ಉತ್ತಮವಾಗಿ ತೆರಿಗೆ ಸಂಗ್ರಹಿಸಿ, ಆತ್ಮ ನಿರ್ಭರವಾಗಬೇಕು. ಆರ್ಥಿಕವಾಗಿ ಸಬಲತೆಯನ್ನು ಸಾಧಿಸಬೇಕು ಎಂಬ ಉದ್ದೇಶದಿಂದ ಶೇ. 40 ರಷ್ಟು ಸರ್ಕಾರದಿಂದ ಹಾಗೂ ಶೇ. 60 ರಷ್ಟು ನಗರ ಸ್ಥಳೀಯ ಸಂಸ್ಥೆಗಳೇ ತಮ್ಮ ಆದಾಯದ ಅನುದಾನದಿಂದ ಪಾವತಿಸುವಂತೆ ಸೂಚನೆ ನೀಡಲಾಗಿರುತ್ತದೆ ಎಂದರು.
ರಾಜ್ಯದ ನಗರಸಭೆ, ಪುರಸಭೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಪೌರಕಾರ್ಮಿಕರಿಗೆ ಸರ್ಕಾರದಿಂದಲೇ ವೇತನ ಪಾವತಿಸುವ ಕುರಿತಂತೆ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಕಳೆದ 2022ಕ್ಕೂ ಮುನ್ನ ನಗರ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರಿಗೆ ಎಸ್‍ಎಫ್‍ಸಿ ಅನುದಾನದಡಿ ವೇತನ ಪಾವತಿಸಲಾಗುತ್ತಿತ್ತು. ಆದರೆ ಸ್ಥಳೀಯ… pic.twitter.com/4Zr6r2VKn9
— DIPR Karnataka (@KarnatakaVarthe) December 12, 2025
BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ‘ಆರೋಗ್ಯ ಸಂಜೀವಿನಿ ಯೋಜನೆ’ಗೆ ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ.!








