ಬೆಂಗಳೂರು: ರಾಜ್ಯ ಸರ್ಕಾರವು 2025-26ನೇ ಸಾಲಿನಲ್ಲಿ ಹೊಸ ಶಆಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯಾಧ್ಯಂತ 2,200 ಸರ್ಕಾರಿ ಶಾಲೆಗಳಿಗೆ ತರಗತಿ ಕೊಠಡಿಗಳನ್ನು ನಿರ್ಮಾಣಕ್ಕೆ ಸರ್ಕಾರ ಅನುದಾನ ಮಂಜೂರು ಮಾಡಿ ಆದೇಶಿಸಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದು, ಮುಖ್ಯಮಂತ್ರಿಗಳು ವಿಧಾನ ಮಂಡಲದಲ್ಲಿ ಮಂಡಿಸಿದ 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಕಂಡಿಕೆ-116 ರಲ್ಲಿ ಈ ಕೆಳಕಂಡಂತೆ ಘೋಷಿಸಿರುತ್ತಾರೆ ಎಂದಿದ್ದಾರೆ.
2025-26ನೇ ಸಾಲಿನ ಬಜೆಟ್ ಸಂಖ್ಯೆ 116 ರ ಅಡಿಯಲ್ಲಿ ಘೋಷಣೆಯ ಪುಕಾರ, “ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿಗಳು, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿಗಾಗಿ ರೂ. 125.00 ಕೋಟಿ ಮತ್ತು ಅಗತ್ಯ ಪೀಠೋಪಕರಣಗಳನ್ನು ಒದಗಿಸಲು ರೂ.50.00 ಕೋಟಿಗಳನ್ನು ನಿಗದಿಪಡಿಸಲಾಗಿದೆ.
ಮೇಲೆ ಓದಲಾದ ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ 2025-26ನೇ ಸಾಲಿನ ಆಯವ್ಯಯ ಘೋಷಿತ ಕಂಡಿಕೆ-116 ರಂತೆ ಲೆಕ್ಕಶೀರ್ಷಿಕೆವಾರು ಕಾರ್ಯಕ್ರಮವಾರು ಅನುದಾನ ನಿಗದಿಪಡಿಸಿ ಆದೇಶಿಸಿದೆ.
ಮೇಲೆ ಓದಲಾದ ಕ್ರಮಾಂಕ (3)ರ ಪುಸ್ತಾವನೆಯಲ್ಲಿ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಇವರು 2025-26ನೇ ಸಾಲಿನಲ್ಲಿ ರಾಜ್ಯ ಯೋಜನೆಯಡಿ ಶಾಲಾ ಕೊಠಡಿಗಳ ನಿರ್ಮಾಣಕ್ಕಾಗಿ ರೂ.36000.00 ಲಕ್ಷಗಳನ್ನು ಮಂಜೂರು ಮಾಡಲಾದ ಪುಸ್ತಾವನೆಯನ್ನು ಸಲ್ಲಿಸಿದ್ದು, ಒಟ್ಟು ರೂ.35986.30 ಲಕ್ಷಗಳಿಗೆ ಶಾಲಾವಾರು ಕ್ರಿಯಾ ಯೋಜನೆಯನ್ನು ನೀಡಲಾಗಿದೆ. ಇದರಲ್ಲಿ ಸಂಭಾವ್ಯ ಪಟ್ಟಿಯಲ್ಲಿರುವ 912 ಶಾಲೆಗಳಲ್ಲಿ ಅಗತ್ಯವಿರುವ 1911 ಶಾಲಾ ಕೊಠಡಿಗಳ ನಿರ್ಮಾಣಕ್ಕಾಗಿ ರೂ. 32532.50 ಲಕ್ಷಗಳ ಅಂದಾಜು ವೆಚ್ಚವನ್ನು ಲೆಕ್ಕ ಹಾಕಲಾಗಿದೆ. ಸರ್ಕಾರಿ ಪ್ರಾಥಮಿಕ ಶಾಲಾ ತರಗತಿ ಕೊಠಡಿ ನಿರ್ಮಾಣ ಕಾಮಗಾರಿಗೆ ರೂ.14.50 ಲಕ್ಷ ಮತ್ತು ಪ್ರೌಢಶಾಲಾ ತರಗತಿ ಕೊಠಡಿ ನಿರ್ಮಾಣ ಕಾಮಗಾರಿಗೆ ರೂ.17.15 ಲಕ್ಷ ಘಟಕ ವೆಚ್ಚಗಳಂತೆ ಲೆಕ್ಕ ಹಾಕಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಹೊಸ ಶೌಚಾಲಯಗಳ ನಿರ್ಮಾಣಕ್ಕಾಗಿ .6329.00 ಲಕ್ಷಗಳ ಅನುದಾನವನ್ನು ಮಂಜೂರು ಮಾಡಲಾಗಿದೆ ಮತ್ತು NREGA ಯೋಜನೆಯಡಿಯಲ್ಲಿ ಒಗ್ಗೂಡಿಸುವಿಕೆ (Convergence) ಉಪಕ್ರಮಗಳಾಗಿ ಕೆಲಸಗಳನ್ನು ಕೈಗೊಳ್ಳಬಹುದು. ದುರಸ್ತಿಗಾಗಿ ರೂ.10000.00 ಲಕ್ಷಗಳನ್ನು ಮಂಜೂರು ಮಾಡಲಾಗಿದೆ ಮತ್ತು ಸ್ಥಳೀಯ ಅವಶ್ಯಕತೆಗಳು ಮತ್ತು ಆದ್ಯತೆಗಳ ಪುಕಾರ ನಿಯಮಗಳ ಪುಕಾರ ಜಿಲ್ಲೆಗಳಿಂದ ಪ್ರಸ್ತಾವನೆಗಳನ್ನು ಸ್ವೀಕರಿಸಿದ ನಂತರ ಕಾಮಗಾರಿಗಳನ್ನು ಕೈಗೊಳ್ಳಬಹುದು ಎಂದು ತಿಳಿಸಿದ್ದಾರೆ.
ಸದರಿ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದೆ.
2025-26ನೇ ಸಾಲಿನಲ್ಲಿ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಸುಮಾರು ರೂ.360.01 ಕೋಟಿ ಅಂದಾಜು ವೆಚ್ಚದಲ್ಲಿ ಸುಮಾರು 2200 ತರಗತಿ ಕೊಠಡಿಗಳ ನಿರ್ಮಾಣ ಕಾಮಗಾರಿಯನ್ನು ಅನುಬಂಧ ದಲ್ಲಿರುವ ಶಾಲಾವಾರು ಪಟ್ಟಿಯಂತೆ ಕೆಳಕಂಡ ನಿಬಂಧನೆಗಳು/ ಷರತ್ತುಗಳಿಗೆ ಒಳಪಟ್ಟಂತೆ ಯೋಜನೆಯನ್ನು ಸಮರ್ಪಕವಾಗಿ, ಗುಣಮಟ್ಟ ಕಾಪಾಡಿಕೊಂಡು ನಿಗದಿತ ಕಾಲಾವಧಿಯಲ್ಲಿ ಅನುಷ್ಠಾನಗೊಳಿಸಲು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ಅನುಮೋದನೆ ನೀಡಿ ಆದೇಶಿಸಿದೆ.
2025-26ನೇ ಆರ್ಥಿಕ ವರ್ಷದಲ್ಲಿ ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳಲ್ಲಿ ಶಾಲಾ ತರಗತಿ ಕೊಠಡಿಗಳ ನಿರ್ಮಾಣ ಕಾರ್ಯವನ್ನು ಲೋಕೋಪಯೋಗಿ ಇಲಾಖೆಗೆ ವಹಿಸಿ ಲೋಕೋಪಯೋಗಿ ಇಲಾಖೆಯು ನಿಯಮಾನುಸಾರ ನಿಗದಿಪಡಿಸುವ ಸಕ್ಷಮ ಪ್ರಾಧಿಕಾರದ ಮೂಲಕ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999 ಮತ್ತು ಅದರಡಿಯಲ್ಲಿ ಹೊರಡಿಸಲಾದ ನಿಯಮಗಳಂತೆ ವಲಯ ಮಟ್ಟದಲ್ಲಿ ಟೆಂಡರ್ ಕರೆಯಲು ಅವಕಾಶ ನೀಡುವುದು ಹಾಗೂ ಮೈಸೂರು ಮತ್ತು ಬೆಂಗಳೂರು ವಿಭಾಗಗಳಲ್ಲಿ ಶಾಲಾ ತರಗತಿ ಕೊಠಡಿಗಳ ನಿರ್ಮಾಣ ಕಾರ್ಯವನ್ನು ಲೋಕೋಪಯೋಗಿ ಇಲಾಖೆಯ ಯೋಜನೆ ಮತ್ತು ರಸ್ತೆಗಳ ಆಸ್ತಿ ನಿರ್ವಹಣಾ ಕೇಂದ್ರ (PRAMC) ಗೆ ವಹಿಸಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999 ಮತ್ತು ಅದರಡಿಯಲ್ಲಿ ಹೊರಡಿಸಲಾದ ನಿಯಮಗಳಂತೆ ಗುರುತಿಸಲಾದ ಸಕ್ಷಮ ಪ್ರಾಧಿಕಾರದ ಹಂತದಲ್ಲಿ ಕೇಂದ್ರೀಕೃತ ಟೆಂಡರ್ ಕರೆಯಲು ಅವಕಾಶ ನೀಡುವುದು. ಜಿಲ್ಲಾ ಮಟ್ಟದಲ್ಲಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ, ಜಿಲ್ಲಾ ಪಂಚಾಯತ್ ಮತ್ತು ಉಪ ನಿರ್ದೇಶಕರು (ಆಡಳಿತ) ಇವರು ಕಾಮಗಾರಿಗಳ ಮೇಲ್ವಿಚಾರಣೆ ನಡೆಸುವುದು.
ಸದರಿ ಉದ್ದೇಶಕ್ಕೆ ತಗಲುವ ವೆಚ್ಚವನ್ನು 2025-26ನೇ ಸಾಲಿನ ಆಯವ್ಯಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಮೂಲಭೂತ ಸೌಕರ್ಯ ಲೆಕ್ಕಶೀರ್ಷಿಕೆ 4202-01-201-1-04 ಪ್ರಧಾನ ಕಾಮಗಾರಿಗಳ ಉಪ ಶೀರ್ಷಿಕೆ-139 ರಡಿ ತ್ರೈಮಾಸಿಕವಾರು ಬಿಡುಗಡೆ ಮಾಡಲಾದ ಮಾಡಲಾಗುವ ಅನುದಾನದಿಂದ ನಿಯಾಮಾನುಸಾರ ಭರಿಸಲು ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಇವರಿಗೆ ಅನುಮತಿ ನೀಡಿದೆ.
ಅನುದಾನ ಬಳಕೆ ಮತ್ತು ಕಾಮಗಾರಿ ಅನುಷ್ಠಾನ ಸಂಬಂಧ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರು ಪಾಲಿಸಬೇಕಾದ ಷರತ್ತುಗಳು ಮತ್ತು ನಿಬಂಧನೆಗಳು:
1. ಅನುದಾನದ ಬಳಕೆಯಲ್ಲಿ ಯಾವುದೇ ಇತರೆ ಯೋಜನೆ ಅಂದರೆ ರಾಜ್ಯ ಸರ್ಕಾರ (GoK), ಭಾರತ ಸರ್ಕಾರ (Gol), ಸಿಎಸ್‌ಆರ್ (CSR), KKRDB, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, CEPMIZ ನಿಧಿ ಆಥವಾ ಇತರೆ ಯಾವುದೇ ಯೋಜನೆಯಲ್ಲಿ ಪುನರಾವರ್ತನೆ ಅಥವಾ ಅನುದಾನದ ದುರ್ಬಳಕೆ ಆಗದಂತೆ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಇವರು ಖಚಿತಪಡಿಸಿಕೊಳ್ಳತಕ್ಕದ್ದು.
2. ನಿಯಮಗಳಂತೆ ಪರಿಶೀಲಿಸಿ ನಿಯಮಗಳನುಸಾರ ಅರ್ಹತೆಯಂತೆ ಆಡಳಿತಾತ್ಮಕ ಮತ್ತು ತಾಂತ್ರಿಕ ಅನುಮೋದನೆಗಳನ್ನು ಸಕ್ಷಮ ಪ್ರಾಧಿಕಾರಗಳು ನೀಡಿದ ನಂತರ ಬಿಡುಗಡೆ ಮಾಡಲಾದ ಅನುದಾನವನ್ನು ನಿಗದಿತ ಉದ್ದೇಶಕ್ಕೆ ನಿಯಮಾನುಸಾರ ಭರಿಸತಕ್ಕದ್ದು ಹಾಗೂ ಬಿಡುಗಡೆ ಮಾಡಲಾದ ಅನುದಾನದ ಬಳಕೆಯ ಬಗ್ಗೆ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಇವರು ಎಲ್ಲಾ ಲೆಕ್ಕಪತ್ರಗಳನ್ನು ಇಡತಕ್ಕದ್ದು.
3. ಸರ್ಕಾರಿ ಪ್ರಾಥಮಿಕ ಶಾಲಾ ತರಗತಿ ಕೊಠಡಿ ನಿರ್ಮಾಣ ಕಾಮಗಾರಿಗೆ ರೂ.14.50 ಲಕ್ಷ ಮತ್ತು ಪ್ರೌಢಶಾಲಾ ತರಗತಿ ಕೊಠಡಿ ನಿರ್ಮಾಣ ಕಾಮಗಾರಿಗೆ ರೂ.17.15 ಲಕ್ಷ ಘಟಕ ವೆಚ್ಚಗಳಂತೆ ಕಾಮಗಾರಿ ನಿರ್ವಹಿಸತಕ್ಕದ್ದು
4. ಉದ್ದೇಶಿತ ಕಾಮಗಾರಿಗಳನ್ನು ನಿರ್ದಿಷ್ಟಪಡಿಸಲಾದ ಸಂಸ್ಥೆಯಿಂದ ನಿರ್ವಹಿಸತಕ್ಕದ್ದು. 5. ಬಿಡುಗಡೆಯಾದ ಅನುದಾನದ ಬಳಕೆ ಹಾಗೂ ಕಾಮಗಾರಿಗಳ ಭೌತಿಕ ಹಾಗೂ ಆರ್ಥಿಕ ಪ್ರಗತಿಯ ವಿವರಗಳನ್ನು ಕಡ್ಡಾಯವಾಗಿ ಆನ್‌ಲೈನ್ ಮೂಲಕ Worksoft Decision Supportive System ಅನ್ನು ಅಳವಡಿಸಿ ಆಯುಕ್ತಾಲಯದ ಹಂತದಲ್ಲಿ ಮತ್ತು ಶಾಲೆಯ ಹಂತದಲ್ಲಿ SATS ಮತ್ತು UDISE ತಂತ್ರಾಂಶಗಳಲ್ಲಿ ಅಳವಡಿಕೆ ಮಾಡತಕ್ಕದ್ದು. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್ ಇವರು ಕಾಮಗಾರಿಗಳ ಭೌತಿಕ ಹಾಗೂ ಆರ್ಥಿಕ ಪ್ರಗತಿಯ ವಿವರಗಳನ್ನು New Gandhi Sakshi Kayaka/Worksoft Decision Supportive System ನಲ್ಲಿ ಅಳವಡಿಸತಕ್ಕದ್ದು. 6. ಕೊಠಡಿ ನಿರ್ಮಾಣ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಾಗ ಮೇಲೆ ಓದಲಾದ ಕ್ರಮಾಂಕ(4)ರ ಸರ್ಕಾರಿ ಆದೇಶದಲ್ಲಿ ನಿಗದಿಪಡಿಸಿರುವ ಘಟಕ ವೆಚ್ಚಕ್ಕೆ ಅನುಗುಣವಾಗಿ ಕೊಠಡಿ ನಿರ್ಮಾಣ ಕಾಮಗಾರಿ ನಿರ್ವಹಿಸತಕ್ಕದ್ದು,
7. ಸದರಿ ಕಾಮಗಾರಿಗಳನ್ನು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999 ಮತ್ತು ಅದರಡಿಯಲ್ಲಿ ಹೊರಡಿಸಲಾದ ನಿಯಮಗಳಂತೆ ಟೆಂಡರ್ ಮೂಲಕ ಚಾಚೂ ತಪ್ಪದೇ ಕಡ್ಡಾಯವಾಗಿ ಹಾಗೂ ಕಟ್ಟುನಿಟ್ಟಾಗಿ ಪಾಲಿಸಿ ಅನುಷ್ಠಾನಗೊಳಿಸತಕ್ಕದ್ದು,
8. ಈ ಸರ್ಕಾರದ ಆದೇಶದಲ್ಲಿ ಅನುಮೋದನೆ ನೀಡಲಾದ ಕಾಮಗಾರಿಗಳಲ್ಲಿ ಯಾವುದೇ ಕಾರಣಗಳಿಂದ ಬದಲಾವಣೆ ಅಗತ್ಯವಿದ್ದಲ್ಲಿ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರು ನಿಯಮಾನುಸಾರ ಅರ್ಹತೆಯಂತೆ ಪರಿಶೀಲಿಸಿ ಕಾಮಗಾರಿ ಬದಲಾವಣೆಗೆ ಅನುಮೋದನೆ ನೀಡತಕ್ಕದ್ದು.
9. ಕಾಮಗಾರಿಗಳ ನಿರ್ವಹಣೆ ಮತ್ತು items of procurement ಗಳ ಗುಣಮಟ್ಟ ಮತ್ತು ಕಾರ್ಯನಿರ್ವಹಣೆಯು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಸಂಬಂಧಿತ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಮತ್ತು ಡಿಡಿಪಿಐ (ಆಡಳಿತ) ಇವರ ನೇರ ಜವಾಬ್ದಾರಿಯಾಗಿರುತ್ತದೆ. ಈ ಕಾಮಗಾರಿ ಮತ್ತು items of procurement ಗಳ ನಿರ್ವಹಣೆಯಲ್ಲಿ ಯಾವುದೇ ನಿರ್ಲಕ್ಷ್ಯತೆ ಅಥವಾ ಕಳಪೆ ಕಾರ್ಯನಿರ್ವಹಣೆ ಕಂಡುಬಂದರೆ ಅಥವಾ ಅನುದಾನದ ಬಳಕೆಯಲ್ಲಿ ಪುನರಾವರ್ತನೆ ಕಂಡುಬಂದಲ್ಲಿ ಈ ಅಧಿಕಾರಿಗಳು ನೇರವಾಗಿ ಹೊಣೆಗಾರರಾಗಿರುತ್ತಾರೆ.
10. ಈ ಕಾಮಗಾರಿಗಳಿಗೆ ನೀಡಲಾದ ಆಡಳಿತಾತ್ಮಕ ಅನುಮೋದನೆಯ ವಿವರಗಳು ಹಾಗೂ ಭೌತಿಕ ಮತ್ತು ಆರ್ಥಿಕ ಪ್ರಗತಿಯ ಮಾಹಿತಿಗಳನ್ನು ಪ್ರತಿ ತಿಂಗಳು ಜಿಲ್ಲಾ ಪಂಚಾಯತ್ ಕೆಡಿಪಿ ಸಭೆಯಲ್ಲಿ ಪರಿಶೀಲನೆಗಾಗಿ ಸಿಇಒ, ಜಿಪಂ ಇವರು ಮಂಡಿಸತಕ್ಕದ್ದು.
11. ಈ ಸರ್ಕಾರದ ಆದೇಶವನ್ನು, ಎಲ್ಲಾ ಕಾಮಗಾರಿಗಳ ಅಂದಾಜು ಪಟ್ಟಿಗಳು, ಘಟಕ ವೆಚ್ಚದ ಮಾಹಿತಿ, ತರಗತಿ ಕೊಠಡಿ ಪ್ಲಾನ್ ಗಳನ್ನು ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಸಂಬಂಧಿಸಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಉಪನಿರ್ದೇಶಕರು (ಆಡಳಿತ) ಇವರು ತಮ್ಮ ವೆಬ್‌ಸೈಟ್‌ನಲ್ಲಿ ಕಡ್ಡಾಯವಾಗಿ ಪಕಟಿಸತಕ್ಕದ್ದು. ಎಲ್ಲಾ ಕಾಮಗಾರಿಗಳ ಅಂದಾಜು ಪಟ್ಟಿಗಳು, ಘಟಕ ವೆಚ್ಚದ ಮಾಹಿತಿ, ತರಗತಿ ಕೊಠಡಿ ಪ್ಲಾನ್ ಮಾಹಿತಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕಾಮಗಾರಿ ಹಂಚಿಕೆಯಾಗಿರುವ ಶಾಲಾ ಮುಖ್ಯ ಶಿಕ್ಷಕರು ಕಡ್ಡಾಯವಾಗಿ ಹೊಂದಿರತಕ್ಕದ್ದು. ಕಾಮಗಾರಿಗಳ ಭೌತಿಕ ಮತ್ತು ಮಾಸಿಕ ಪ್ರಗತಿಯ ವಿವರಗಳನ್ನು ಜಿಯೋ-ಟ್ಯಾಗ್ ಮಾಡಿದ ಸ್ಥಳಗಳೊಂದಿಗೆ ಅವರ ವೆಬ್‌ಸೈಟ್‌ಗಳಲ್ಲಿ ಪಕಟಿಸತಕ್ಕದ್ದು.
12. 2025-26ನೇ ಸಾಲಿನ ಅನುಮೋದಿತ ಎಸ್.ಸಿ.ಎಸ್.ಪಿ./ಟಿ.ಎಸ್.ಪಿ. ಕ್ರಿಯಾ ಯೋಜನೆಯನುಸಾರ ನಿಗದಿತ ಅನುದಾನವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಶೇ.50 ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕಟ್ಟಡ ನಿರ್ಮಾಣಕ್ಕೆ ಬಳಸುವುದು. ಇದರಲ್ಲಿ ಗಡಿ ವುದೇಶದ ಶಾಲೆಗಳಿಗೆ ಆದ್ಯತೆ ನೀಡುವುದು. ಶೇ.50 ಕ್ಕಿಂತ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದ್ದಲ್ಲಿ ಎಸ್.ಸಿ./ಎಸ್.ಟಿ ವಿದ್ಯಾರ್ಥಿಗಳ ಸಂಖ್ಯೆಯ ಅನುಪಾತಕ್ಕೆ ಅನುಗುಣವಾಗಿ ಅನುದಾನವನ್ನು ವಿನಿಯೋಗಿಸುವುದು.
13. ಸರ್ಕಾರದ ಆದೇಶ ಸಂ: ಆಇ 758 ವೆಚ್ಚ-12/2023, ದಿನಾಂಕ:06-02-2025ರಂತೆ ಹೊಸ ಆವೃತ್ತಿಗಳಲ್ಲಿ ಟೆಂಡರ್ ಪ್ರಕ್ರಿಯೆಯನ್ನು ಕೈಗೊಳ್ಳಲಾಗಿರುವ ಮತ್ತು ಪ್ರಸಕ್ತ ಪುಗತಿಯಲ್ಲಿರುವ ಕಾಮಗಾರಿಗಳ ಟೆಂಡರ್ ಮತ್ತು ಭೌತಿಕ ಹಾಗೂ ಆರ್ಥಿಕ ಪ್ರಗತಿಯ ವಿವರಗಳನ್ನು ಕರ್ನಾಟಕ ಸಾರ್ವಜನಿಕ ಸಂಗ್ರಹಣಾ ವೇದಿಕೆಯಲ್ಲಿ ಕಲ್ಪಿಸಲಾಗಿರುವ Lateral Entry of Contract ಮೂಲಕ ಇ-ಸಂಗ್ರಹಣಾ ವೇದಿಕೆಯ ಗುತ್ತಿಗೆ ನಿರ್ವಹಣಾ ಮಾಡ್ಯೂಲ್‌ನಲ್ಲಿ (Contract Management Module) ಕಡ್ಡಾಯವಾಗಿ ಅಳವಡಿಸಲು ಕ್ರಮವಹಿಸತಕ್ಕದ್ದು.
14. 2025-26 ಆರ್ಥಿಕ ಸಾಲಿನ ಅಂತ್ಯದೊಳಗೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಕ್ರಮವಹಿಸತಕ್ಕದ್ದು.
ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ: ಎಫ್.ಡಿ 578 ವೆಚ್ಚ-8/2025 ದಿನಾಂಕ:28.08.2025 ರ ಸಹಮತಿಯಂತೆ, ಸಚಿವ ಸಂಪುಟದ ಟಿಪ್ಪಣಿ ಸಂಖ್ಯೆ: ಸಿ 881/2025, ದಿನಾಂಕ:30.10.2025 ರಲ್ಲಿ ಸಚಿವ ಸಂಪುಟದ ನಿರ್ಣಯದಂತೆ ಹಾಗೂ ಸರ್ಕಾರದ ಆದೇಶ ಸಂಖ್ಯೆ: ಆಇ 03 ಟಿ.ಎಫ್.ಪಿ 2025 ದಿನಾಂಕ:24.09.2025 ರಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರಿಗೆ ಪ್ರತ್ಯಾಯೋಜಿಸಿರುವ ಅಧಿಕಾರದನ್ವಯ ಹೊರಡಿಸಿದೆ ಹೊರಡಿಸಿದ್ದಾರೆ.

ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ‘ಆರೋಗ್ಯ ಸಂಜೀವಿನಿ ಯೋಜನೆ’ಗೆ ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ.!








