Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ವಾಹನ ಮಾರಾಟವಾದರೂ `RC’ ಬದಲಾಗದಿದ್ದರೆ ಅಪಘಾತದ ಹೊಣೆ ಹಳೇ ಮಾಲೀಕರದ್ದೇ: ಹೈಕೋರ್ಟ್ ಮಹತ್ವದ ತೀರ್ಪು

08/04/2026 6:33 AM

ಯುದ್ಧದ ಅಂಚಿನಿಂದ ಹಿಂದೆ ಸರಿದ ಇರಾನ್: ಟ್ರಂಪ್ ‘ಶಾಂತಿ ಮಂತ್ರ’ಕ್ಕೆ ಓಗೊಟ್ಟ ಟೆಹ್ರಾನ್; 14 ದಿನಗಳ ಕಾಲ ಕದನ ವಿರಾಮ ಘೋಷಣೆ!

08/04/2026 6:31 AM

ರಾಜ್ಯದಲ್ಲಿ ನಾಳೆ ಮತದಾನ ಮುಗಿದ ಬಳಿಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

08/04/2026 6:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 2ನೇ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ- ಸಚಿವ ಎಂ.ಬಿ.ಪಾಟೀಲ
KARNATAKA

2ನೇ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ- ಸಚಿವ ಎಂ.ಬಿ.ಪಾಟೀಲ

By kannadanewsnow0913/12/2025 4:37 PM

ಬೆಂಗಳೂರು: ರಾಜಧಾನಿಯ ಸಮೀಪ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಸ್ಥಳದ ಅನುಕೂಲ ಮತ್ತು ತಾಂತ್ರಿಕ ಹಾಗೂ ಆರ್ಥಿಕ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಪರಿಣತ ಸಲಹಾ ಸಂಸ್ಥೆಯ ಆಯ್ಕೆಗಾಗಿ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮವು (ಕೆಎಸ್ಐಐಡಿಸಿ) ಟೆಂಡರ್ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು 2026ರ ಜನವರಿ 12 ಕೊನೆಯ ದಿನವಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ಶನಿವಾರ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, 2ನೇ ವಿಮಾನ ನಿಲ್ದಾಣಕ್ಕಾಗಿ ರಾಜ್ಯ ಸರಕಾರವು ಕನಕಪುರ ರಸ್ತೆಯಲ್ಲಿರುವ ಚೂಡಹಳ್ಳಿ, ಸೋಮನಹಳ್ಳಿ ಮತ್ತು ನೆಲಮಂಗಲದ ಬಳಿ ಸ್ಥಳಗಳನ್ನು ಗುರುತಿಸಿದೆ. ಭಾರತೀಯ ವಿಮಾನನಿಲ್ದಾಣ ಪ್ರಾಧಿಕಾರದ ಉನ್ನತ ಮಟ್ಟದ ತಂಡವು ಇವುಗಳ ಪರಿಶೀಲನೆ ನಡೆಸಿ ಪ್ರಾಥಮಿಕ ವರದಿ ನೀಡಿದೆ. ಈಗ ಟೆಂಡರಿನಲ್ಲಿ ಆಯ್ಕೆಯಾಗುವ ಸಲಹಾ ಸಂಸ್ಥೆಯು 5 ತಿಂಗಳಲ್ಲಿ ಸರಕಾರಕ್ಕೆ ತನ್ನ ಸಮಗ್ರ ತಾಂತ್ರಿಕ ಮತ್ತು ಆರ್ಥಿಕ ಕಾರ್ಯಸಾಧ್ಯತಾ ವರದಿ ಕೊಡಬೇಕಾಗುತ್ತದೆ ಎಂದಿದ್ದಾರೆ.

ಕಳೆದ 5 ವರ್ಷಗಳಲ್ಲಿ ವಾರ್ಷಿಕವಾಗಿ 250 ಕೋಟಿ ರೂ. ಮೊತ್ತದ ಕೆಲಸಗಳನ್ನು ನಿರ್ವಹಿಸಿರುವಂಥ ಮತ್ತು ಸದರಿ ಕ್ಷೇತ್ರದಲ್ಲಿ ಕನಿಷ್ಠ ಪಕ್ಷ ಐದು ಯೋಜನೆಗಳನ್ನಾದರೂ ನಿರ್ವಹಿಸಿರುವ/ಸಲಹಾ ವರದಿ ನೀಡಿರುವಂತಹ ಸಂಸ್ಥೆಗಳು ಟೆಂಡರ್ ನಲ್ಲಿ ಭಾಗವಹಿಸಬಹುದು. ಟೆಂಡರ್ ನಲ್ಲಿ ಆಯ್ಕೆಯಾಗುವ ಸಂಸ್ಥೆಯು ನಾವು ಸೂಚಿಸುತ್ತಿರುವ ಮೂರೂ ಸ್ಥಳಗಳ ಮಳೆ ಪ್ರಮಾಣ, ಭೂಲಕ್ಷಣ, ವಿದ್ಯುತ್, ನೀರು, ಒಳಚರಂಡಿ, ತ್ಯಾಜ್ಯ ನಿರ್ವಹಣೆಯಂಥ ಮೂಲಸೌಕರ್ಯಗಳು, ಸುತ್ತಮುತ್ತಲಿನ ಜನಸಂಖ್ಯೆ, ಅಭಿವೃದ್ಧಿ, ಶಬ್ದ ಮತ್ತು ವಿಮಾನ ನಿಲ್ದಾಣದಿಂದ ಉಂಟಾಗುವ ಮಾಲಿನ್ಯ ಇತ್ಯಾದಿಗಳತ್ತ ಗಮನ ಹರಿಸಲಿದೆ ಎಂದು ಅವರು ಹೇಳಿದ್ದಾರೆ.

ಇದಲ್ಲದೆ ಉದ್ದೇಶಿತ 2ನೇ ವಿಮಾನ ನಿಲ್ದಾಣ ಅಭಿವೃದ್ಧಿಗೆ ತಗುಲುವ ವೆಚ್ಚ, ಅಗತ್ಯ ಇರುವ ಭೂಮಿ, ರಕ್ಷಣಾ ಸಚಿವಾಲಯ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಸೇರಿದಂತೆ ಹಲವು ಕಡೆಗಳಿಂದ ಪಡೆಯಬೇಕಾಗುವ ಅನುಮೋದನೆಗಳ ವಿವರಗಳು ಮುಂತಾದವನ್ನೂ ಈ ಕಾರ್ಯಸಾಧ್ಯತಾ ವರದಿಯಲ್ಲಿ ನೀಡಬೇಕಾಗುತ್ತದೆ. ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣದಿಂದ ಇಲ್ಲಿನ ಕೈಗಾರಿಕೆ, ಪ್ರವಾಸೋದ್ಯಮ, ಜನರ ಓಡಾಟ ಇತ್ಯಾದಿ ಅಂಶಗಳನ್ನೂ ಅದು ವಿವರಿಸಲಿದೆ ಎಂದು ಅವರು ನುಡಿದಿದ್ದಾರೆ.

ಉದ್ದೇಶಿತ ವಿಮಾನ ನಿಲ್ದಾಣಕ್ಕೆ ಹಾಲಿ ಇರುವ ವಿವಿಧ ರೀತಿಯ ಸಂಪರ್ಕ, ವಿಮಾನ ನಿಲ್ದಾಣ ನಿರ್ಮಾಣ ನಂತರ ಏನೆಲ್ಲ ಮೂಲಸೌಕರ್ಯ ಅಭಿವೃದ್ಧಿಪಡಿಸಬೇಕು ಎಂಬುದರ ಬಗ್ಗೆಯೂ ಸಲಹಾ ಸಂಸ್ಥೆ ಅಧ್ಯಯನ ನಡೆಸಲಿದೆ. ಇದಲ್ಲದೆ, ಸರಕು ಸಾಗಣೆ ಮತ್ತು ಪ್ರಯಾಣಿಕ ಸೇವೆಗಳು ಹಾಗೂ ಅದರಿಂದಾಗುವ ಆರ್ಥಿಕ ಕಾರ್ಯಸಾಧ್ಯತೆ ಬಗ್ಗೆಯೂ ಅಧ್ಯಯನ ನಡೆಸಬೇಕಾಗಿದೆ. ಒಟ್ಟಿನಲ್ಲಿ ಮೂರೂ ಸ್ಥಳಗಳ ಬಗ್ಗೆ ಅಧ್ಯಯನ ನಡೆಸಿ, ಯಾವುದು ಹೆಚ್ಚು ಸೂಕ್ತ‌ ಎನ್ನುವ ಅಭಿಪ್ರಾಯ ಕೂಡ ಸಲಹಾ ಸಂಸ್ಥೆ ನೀಡಲಿದೆ ಎಂದು ಅವರು ಹೇಳಿದರು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಈಗ ದಟ್ಟಣೆಯಲ್ಲಿ ದೇಶದಲ್ಲೇ 2ನೇ ಸ್ಥಾನದಲ್ಲಿದೆ. 2033ರ ಹೊತ್ತಿಗೆ ನಾವು ಮತ್ತೊಂದು ವಿಮಾನ ನಿಲ್ದಾಣ ಹೊಂದಬೇಕಾಗಿದೆ. ಮುಂದಾಲೋಚನೆಯನ್ನು ಇಟ್ಟುಕೊಂಡು ಈಗಿನಿಂದಲೇ ಪ್ರಯತ್ನಗಳನ್ನು ಆರಂಭಿಸಲಾಗಿದೆ. ಈಗಾಗಲೇ ಹೊಸದೆಹಲಿ ಮತ್ತು ಮುಂಬೈ ನಗರಗಳು ಎರಡೆರಡು ವಿಮಾನ ನಿಲ್ದಾಣ ಹೊಂದಿವೆ. ಕಾರ್ಯಸಾಧ್ಯತಾ ವರದಿ ಬಂದ ನಂತರ ಮುಂದಿನ ಹೆಜ್ಜೆ ಏನಿರಬೇಕೆಂದು ನಿರ್ಧರಿಸಲಾಗುವುದು ಎಂದು ಪಾಟೀಲ ವಿವರಿಸಿದ್ದಾರೆ.

ಪೋಷಕರೇ ಗಮನಿಸಿ : ಮಕ್ಕಳಿಗೆ ‘ಬ್ಲೂ ಆಧಾರ್ ಕಾರ್ಡ್’ ಮಾಡಿಸುವುದು ಹೇಗೆ.? ಇಲ್ಲಿದೆ ಮಾಹಿತಿ

ಹೊಸ ಮನೆಗೆ ಬಾಗಿಲು ಹಾಕಿಸುವ ಮುನ್ನ ಈ ವಿಚಾರಗಳು ನಿಮ್ಮ ಗಮನದಲ್ಲಿ ಇರಲಿ! ಯಾವ ರಾಶಿಗೆ ಯಾವ ದಿಕ್ಕಿನ ಬಾಗಿಲು ಗೊತ್ತಾ

Share. Facebook Twitter LinkedIn WhatsApp Email

Related Posts

BIG NEWS : ವಾಹನ ಮಾರಾಟವಾದರೂ `RC’ ಬದಲಾಗದಿದ್ದರೆ ಅಪಘಾತದ ಹೊಣೆ ಹಳೇ ಮಾಲೀಕರದ್ದೇ: ಹೈಕೋರ್ಟ್ ಮಹತ್ವದ ತೀರ್ಪು

08/04/2026 6:33 AM1 Min Read

ರಾಜ್ಯದಲ್ಲಿ ನಾಳೆ ಮತದಾನ ಮುಗಿದ ಬಳಿಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

08/04/2026 6:25 AM1 Min Read
BREAKING NEWS

BREAKING : ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಕೇರಳದ ಯುವತಿ ನಾಪತ್ತೆ : ಚಂದ್ರದ್ರೋಣ ಪರ್ವತ ಶ್ರೇಣಿಲಿ ಯುವತಿ ಕಣ್ಮರೆ.!

08/04/2026 6:13 AM1 Min Read
Recent News

BIG NEWS : ವಾಹನ ಮಾರಾಟವಾದರೂ `RC’ ಬದಲಾಗದಿದ್ದರೆ ಅಪಘಾತದ ಹೊಣೆ ಹಳೇ ಮಾಲೀಕರದ್ದೇ: ಹೈಕೋರ್ಟ್ ಮಹತ್ವದ ತೀರ್ಪು

08/04/2026 6:33 AM

ಯುದ್ಧದ ಅಂಚಿನಿಂದ ಹಿಂದೆ ಸರಿದ ಇರಾನ್: ಟ್ರಂಪ್ ‘ಶಾಂತಿ ಮಂತ್ರ’ಕ್ಕೆ ಓಗೊಟ್ಟ ಟೆಹ್ರಾನ್; 14 ದಿನಗಳ ಕಾಲ ಕದನ ವಿರಾಮ ಘೋಷಣೆ!

08/04/2026 6:31 AM

ರಾಜ್ಯದಲ್ಲಿ ನಾಳೆ ಮತದಾನ ಮುಗಿದ ಬಳಿಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

08/04/2026 6:25 AM

ನಮ್ಮ ಆಲೋಚನಾ ಶಕ್ತಿಯನ್ನೇ ನುಂಗಿ ಹಾಕುತ್ತಿದೆಯೇ ಚಾಟ್ ಜಿಪಿಟಿ?: ಎಂಐಟಿ ಮತ್ತು ಸ್ಟ್ಯಾನ್‌ಫೋರ್ಡ್ ಅಧ್ಯಯನದಲ್ಲಿ ಬಯಲಾಯ್ತು ಸ್ಫೋಟಕ ಸತ್ಯ!

08/04/2026 6:21 AM
State News
KARNATAKA

BIG NEWS : ವಾಹನ ಮಾರಾಟವಾದರೂ `RC’ ಬದಲಾಗದಿದ್ದರೆ ಅಪಘಾತದ ಹೊಣೆ ಹಳೇ ಮಾಲೀಕರದ್ದೇ: ಹೈಕೋರ್ಟ್ ಮಹತ್ವದ ತೀರ್ಪು

By kannadanewsnow5708/04/2026 6:33 AM KARNATAKA 1 Min Read

ಬೆಂಗಳೂರು: ವಾಹನವನ್ನು ಮತ್ತೊಬ್ಬರಿಗೆ ಮಾರಾಟ ಮಾಡಿದ್ದರೂ ಸಹ, ಅಧಿಕೃತವಾಗಿ ನೋಂದಣಿ ಪ್ರಮಾಣಪತ್ರದಲ್ಲಿ (RC) ಮಾಲೀಕತ್ವ ವರ್ಗಾವಣೆಯಾಗುವವರೆಗೆ ಅಪಘಾತಕ್ಕೆ ಸಂಬಂಧಿಸಿದ ಎಲ್ಲಾ…

ರಾಜ್ಯದಲ್ಲಿ ನಾಳೆ ಮತದಾನ ಮುಗಿದ ಬಳಿಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

08/04/2026 6:25 AM
BREAKING NEWS

BREAKING : ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಕೇರಳದ ಯುವತಿ ನಾಪತ್ತೆ : ಚಂದ್ರದ್ರೋಣ ಪರ್ವತ ಶ್ರೇಣಿಲಿ ಯುವತಿ ಕಣ್ಮರೆ.!

08/04/2026 6:13 AM

BIG NEWS: ಚಿತ್ರದುರ್ಗದ ಚಿಕ್ಕಜಾಜೂರು ‘PSI ನೇತ್ರಾವತಿ’ ಸಿಬ್ಬಂದಿಗೆ ‘ಬಿಸಿಲ ಶಿಕ್ಷೆ’ ನೀಡಿದ್ದೇಕೆ? ಅಸಲಿ ಸತ್ಯ, ಕಾರಣ ಇಲ್ಲಿದೆ ಓದಿ!

08/04/2026 6:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.