ಬೆಂಗಳೂರು : ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದ್ದು, ಧುನ್ನಸಂದ್ರದಲ್ಲಿ ಕಾಡಾನೆ ದಾಳಿಗೆ ರೈತರೊಬ್ಬರು ಸಾವನ್ನಪ್ಪಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆ ಹಾರೋಹಳ್ಳಿ ತಾಲೂಕಿನ ದುನ್ನಸಂದ್ರದಲ್ಲಿ ರೈತ ದುಂಡಮಾದ (50) ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.
ದುಂಡಮಾದ ಅವರು ಜಮೀನಿನಲ್ಲಿ ನೀರು ಹಾಯಿಸಲು ತೆರಳಿದ್ದ ವೇಳೆ ಕಾಡಾನೆ ದಾಳಿ ನಡೆಸಿದ್ದು, ಈ ವೇಳೆ ಸಾವನ್ನಪ್ಪಿದ್ದಾರೆ. ಕಾಡಾನೆ ಬನ್ನೇರುಘಟ್ಟ ಅರಣ್ಯ ಪ್ರದೇಶದಿಂದ ಬಂದಿದೆ ಎನ್ನಲಾಗಿದೆ.








