ಚಾಮರಾಜನಗರ : ಮನೆಯಲ್ಲಿ ನೇಣು ಬಿಗಿದುಕೊಂಡು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಹೊಸ ಹಂಪಾಪುರದಲ್ಲಿ ಒಂದು ಘಟನೆ ನಡೆದಿದೆ. ಮನೆಯಲ್ಲಿ ನೇಣು ಬಿಗಿದುಕೊಂಡು ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿನೀ ಪ್ರಿಯಾಂಕಾ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಕೆ ಎಮ್ ದೊಡ್ಡಿ ನರ್ಸಿಂಗ್ ಕಾಲೇಜಿನಲ್ಲಿ ಪ್ರಿಯಾಂಕ ಓದುತ್ತಿದ್ದಳು.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆಎಂ ದೊಡ್ಡಿ ನರ್ಸಿಂಗ್ ಕಾಲೇಜಿನಲ್ಲಿ ಪ್ರಿಯಾಂಕ ಓದುತ್ತಿದ್ದಳು. ಇನ್ನು ಎರಡು ತಿಂಗಳಲ್ಲಿ ನರ್ಸಿಂಗ್ ಕೋರ್ಸ್ ಮುಗಿಯುತ್ತಿತ್ತು. ನಿನ್ನೆ ಸಂಜೆ ಮನೆಯಲ್ಲಿ ಯಾರು ಇಲ್ಲದ ವೇಳೆ ಪ್ರಿಯಾಂಕ ನೇಣಿಗೆ ಶರಣಾಗಿದ್ದಾಳೆ. ಘಟನಾ ಸ್ಥಳಕ್ಕೆ ಕೊಳ್ಳೇಗಾಲ ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ ಯೂಡಿಆರ್ ಕೇಸ್ ದಾಖಲಿಸಿಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.








