ಬೆಂಗಳೂರು: ಆಕ್ಸಿಸ್ ಮ್ಯಾಕ್ಸ್ ಲೈಫ್ ಸಂಸ್ಥೆ ಸಹಯೋಗದಲ್ಲಿ ಶಿಲ್ಪಾ ಫೌಂಡೇಶನ್, ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿದಡಿ (ಸಿಎಸ್ಆರ್) ಬನ್ನೇರುಘಟ್ಟ ರಸ್ತೆಯ ಬಿಳೇಕಹಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಬ್ಯಾಕ್ ವಿತರಿಸಲಾಯಿತು.

ಹತ್ತಾರು ಶಾಲೆಗಳ ನೂರಾರು ವಿದ್ಯಾರ್ಥಿಗಳಿಗೆ ಬ್ಯಾಕ್ ವಿತರಿಸುವ ಕಾರ್ಯ ನಿರಂತರವಾಗಿ ನಡೆಸಿಕೊಂಡು ಬರಲಾಗುವುದು. ವಿದ್ಯಾರ್ಥಿಗಳಿಗೆ ಒಳ್ಳೆಯ ಶಿಕ್ಷಣ ಸಿಕ್ಕಿದರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳುತ್ತಾರೆ. ಯಾರೂ ಸಹ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಶಿಲ್ಪಾ ಫೌಂಡೇಶನ್ನ ಇಎಸ್ಜಿ ಮತ್ತು ಸಾಮಾಜಿಕ ಕಾರ್ಯಕ್ರಮದ ಕಾರ್ಯನಿರ್ವಾಹಕ ಮುಖ್ಯಸ್ಥ ಡಾ.ಸತೀಶ್ ಬೆಟ್ಟಪ್ಪ ಹೇಳಿದರು.

ಆಕ್ಸಿಸ್ ಮ್ಯಾಕ್ಸ್ ಲೈಫ್ನ ವಲಯ ಉಪಾಧ್ಯಕ್ಷ ಕೆ.ಸುಧಾಕರ ಶೆಟ್ಟಿ, ಪ್ರಾದೇಶಿಕ ವ್ಯವಸ್ಥಾಪಕ ಎಂ.ಸಂತೋಷ್, ಜೆ.ಪಿ.ನಗರದ ಶಾಖಾ ವ್ಯವಸ್ಥಾಪಕ ರಾಮ್ ಪ್ರಸಾದ್ ಮತ್ತಿತರರಿದ್ದರು.








