ನವದೆಹಲಿ : ರಾಜ್ಯ ಸೇರಿದಂತೆ ದೇಶದ ಹಲವೆಡೆ ಚುನಾವಣೆ ವೇಳೆ ಮತಗಳ್ಳತನ ನಡೆದಿದೆ ಎಂದು ಕಾಂಗ್ರೆಸ್ ನಾಯಕ ಈ ಹಿಂದೆ ಆರೋಪಿಸಿದ್ದರು. ಇದೀಗ ಇಂದು ದೆಹಲಿಯಲ್ಲಿ ಈ ಕುರಿತು ವೋಟ್ ಚೋರಿ ಅಭಿಯಾನ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ನಾಯಕರು ಭಾಗವಹಿಸುತ್ತಿದ್ದಾರೆ.
ಈ ವೇಳೆ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಮತಗಳ್ಳತನ ವಿರುದ್ಧ ಕಾಂಗ್ರೆಸ್ ಹೋರಾಟ ಮಾಡುತ್ತಿದೆ. ಮತಗಳ್ಳತನ ವಿರುದ್ಧ ಇದುವರೆಗೂ 1.40 ಕೋಟಿ ಜನರ ಸಹಿ ಸಂಗ್ರಹಿಸಲಾಗಿದೆ. ಧರಣಿಗೆ ಬರುತ್ತಿರುವವರ ವಾಹನಗಳನ್ನು ತಡೆಯುತ್ತಿರುವ ಮಾಹಿತಿ ಇದೆ. ಕೇಂದ್ರ ಸರ್ಕಾರ ನಮ್ಮ ವಾಹನಗಳನ್ನು ತಡೆಯುತ್ತಿವೆ ಎಂಬ ಮಾಹಿತಿ ಇದೆ.
ನಮ್ಮ ಧ್ವನಿ, ಹೋರಾಟವನ್ನು ಕುಗ್ಗಿಸಲು ಯಾರಿಂದಲೂ ಸಾಧ್ಯವಿಲ್ಲ. ಮತದಾರರ ಹಕ್ಕುಗಳನ್ನು ಉಳಿಸಲು ನಾವು ಹೋರಾಟ ಮಾಡ್ತಿದ್ದೇವೆ. ಸೋಲಿನ ಹತಾಶೆಯಿಂದ ಮತಗಳ್ಳತನ ಆರೋಪ ಎಂಬ ಅಮಿತ್ ಶಾ ಹೇಳಿಕೆಗೆ ಅಮಿತ್ ಶಾ ತಮ್ಮ ಖುಷಿಗೆ ಏನು ಬೇಕಾದರೂ ಮಾತಾಡಿಕೊಳ್ಳಲಿ ಎಂದು ಅಮಿತ್ ಶಾ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.








