ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಒಂದೇ ಗ್ರಾಮದ 6 ಜನರಲ್ಲಿ ಮಂಗನ ಕಾಯಿಲೆ ದೃಢಪಟ್ಟಿದ್ದು, ಜನರಲ್ಲಿ ಆತಂಕ ಸೃಷ್ಠಿಯಾಗಿದೆ.
ಹೌದು, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಕ್ಕೋಡಿ ಗ್ರಾಮದ 5 ಜನರಲ್ಲಿ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಗ್ರಾಮದಲ್ಲಿ ಒಂದೇ ವಾರದಲ್ಲಿ 6 ಜನರಲ್ಲಿ ಸೋಂಕು ಕಾಣಿಸಿಕೊಂಡು ಭಾರಿ ಆತಂಕ ಸೃಷ್ಟಿಯಾಗಿದೆ.
ಹೊಸನಗರ ತಾಲೂಕಿನ ಬಿಳ್ಕೊಡಿ ಗ್ರಾಮದಲ್ಲಿ 55 ವರ್ಷದ ಮಹಿಳೆ ಯಲ್ಲಿ ಕೆಎಫ್‌ಡಿ ಸೋಂಕು ಕಾಣಿಸಿಕೊಂಡಿತ್ತು. ಈಗ ಅದೇ ಊರಿನಲ್ಲಿ ಮತ್ತೆ ಐವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜ್ವರದಿಂದ ಬಳಲುತ್ತಿರುವವರು ಯಾವುದೇ ನಿರ್ಲಕ್ಷ್ಯ ಮಾಡದೆ ಆಸ್ಪತ್ರೆಗೆ ತೆರಳಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕು. ಜೊತೆಗೆ ಮಂಗಗಳು ಮೃತಪಟ್ಟಲ್ಲಿ ಕಡ್ಡಾಯವಾಗಿ ಮಾಹಿತಿ ನೀಡಲು ತಿಳಿಸಲಾಗಿದೆ.








