ದಾವಣಗೆರೆ : ಹಿರಿಯ ರಾಜಕಾರಣಿ, ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದು, ದಾವಣಗೆರೆಯ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರಿಂದ ದಾವಣಗೆರೆಯ ನಿವಾಸಕ್ಕೆ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರರವನ್ನು ರವಾನೆ ಮಾಡಲಾಗಿದೆ. ಮೊದಲು ಹಿರಿಯ ಪುತ್ರ ಎಸ್.ಎಸ್. ಬಕ್ಕೇಶ್ ಮನೆಯಲ್ಲಿ ಪಾರ್ಥಿವ ಶರೀರಕ್ಕೆ ಪೂಜೆ ಸಲ್ಲಿಸಲಾಗಿದ್ದು,. ಬಳಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಮಧ್ಯಾಹ್ನ 12.30ಕ್ಕೆ ಪಿ.ಜೆ.ಬಡಾವಣೆಯಲ್ಲಿರುವ ಹೈಸ್ಕೂಲ್ ಮೈದಾನಕ್ಕೆ ಶಾಮನೂರು ಶಿವಶಂಕರಪ್ಪ ಪಾರ್ಥಿವ ಶರೀರ ಶಿಫ್ಟ್ ಮಾಡಲಾಗುತ್ತದೆ. ಬಳಿಕ ಸಂಜೆ 4.30ರ ವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆ: ಇಂದು ಎಲ್ಲಾ ಶಾಲೆ – ಕಾಲೇಜುಗಳಿಗೆ ರಜೆ ಘೋಷಣೆ.!
ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ.ದಾವಣಗೆರೆ ವಿವಿಯ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ದಾವಣಗೆರೆ ವಿಶ್ವ ವಿದ್ಯಾಲಯಕ್ಕೆ ರಜೆಯನ್ನು ಘೋಷಣೆ ಮಾಡಲಾಗಿದೆ.
ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನರಾದ ಹಿನ್ನಲೆಯಲ್ಲಿ ದಾವಣಗೆರೆ ವಿವಿಯ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಇಂದು ವಿವಿ, ಸ್ವಾಯತ್ತ, ಸ್ನಾತಕೋತ್ತರ ಕೇಂದ್ರಗಳಿಗೂ ರಜೆಯನ್ನು ಘೋಷಿಸಿ ವಿವಿಯ ಕುಲಪತಿ ಪ್ರೊ.ಬಿ.ಡಿ ಕುಂಬಾರ್ ಆದೇಶಿಸಿದ್ದಾರೆ.
ಶಾಮನೂರು ಶಿವಶಂಕರಪ್ಪನವರು ನಿಧನ ಹಿನ್ನೆಲೆ ಅವರ ಗೌರವಾರ್ಥವಾಗಿ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಡಿಸೆಂಬರ್ 15 ರಂದು ದಾವಣಗೆರೆ ಜಿಲ್ಲೆ ವ್ಯಾಪ್ತಿಯ ಎಲ್ಲಾ ಸರ್ಕಾರಿ ಅನುದಾನಿತ ಅನುದಾನ ರಹಿತ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ರಜೆಯನ್ನು ಮುಂದಿನ ಶನಿವಾರ ಡಿಸೆಂಬರ್ 27 ರಂದು ಪೂರ್ತಿ ದಿನ ಶಾಲೆಯನ್ನು ನಡೆಸಿ ಸರಿದೂಗಿಸಲು ಸೂಚಿಸಲಾಗಿದೆ.








