ಬೆಂಗಳೂರು: ಅವಧಿ ಮೀರಿ ಮಧ್ಯ ಸರಬರಾಜು ಮಾಡುತ್ತಿದ್ದ ಆರೋಪದಡಿ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿನ್ ಪಬ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಬೆಂಗಳೂರಲ್ಲಿ ಇರುವಂತ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿನ್ ಪಬ್ ನಲ್ಲಿ ಅವಧಿ ಮೀರಿ ಅನಧಿಕೃತವಾಗಿ ರೆಸ್ಟೋರೆಂಟ್ ತೆರೆಯುತ್ತಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ 103 ಕೆಪಿ ಆಕ್ಟ್ ಅಡಿ ಸುಮೋಟೋ ದೂರನ್ನು ಪೊಲೀಸರು ದಾಖಲಿಸಿಕೊಂಡು ಎಫ್ಐಆರ್ ದಾಖಲಿಸಿದ್ದಾರೆ.
ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿರುವಂತ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿನ್ ಪಬ್ ಮತ್ತು ರೆಸ್ಟೋರೆಂಟ್ ಇದಾಗಿದೆ. ಇದಲ್ಲದೇ ರೆಸಿಡೆನ್ಸಿ ರಸ್ತೆಯಲ್ಲಿರುವ ಸೋರ್ ಬ್ಯಾರಿ ಪಬ್ ವಿರುದ್ಧವೂ ಕೇಸ್ ದಾಖಲಾಗಿದೆ. ಹೀಗೆ ಅವಧಿ ಮೀರಿ ಗ್ರಾಹಕರಿಗೆ ಅನುವು ಮಾಡಿಕೊಟ್ಟಿದ್ದ ಎರಡು ಪಬ್ ಗಳಿಗೆ ಪೊಲೀಸರು ಎಫ್ಐಆರ್ ದಾಖಲಿಸಿ, ಬಿಸಿ ಮುಟ್ಟಿಸಿದ್ದಾರೆ. ನಿಯಮ ಉಲ್ಲಂಘಿಸಿದ ಪಬ್ ಗಳ ಮ್ಯಾನೇಜರ್, ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಕಾಂಗ್ರೆಸ್ ಹಿರಿಯ ‘ಶಾಸಕ ಶಾಮನೂರು ಶಿವಶಂಕರಪ್ಪ’ ಶಿವೈಕ್ಯ: ಡಿ.26ರಂದು ‘ಕೈಲಾಸ ಶಿವ ಗಣರಾಧನೆ’
BREAKING: ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ: ಇನ್ನೂ ಕೊಡುಗೈ ದಾನಿ ನೆನಪು ಮಾತ್ರ








