ತುಮಕೂರು : ನಿನ್ನೆ ಗದಗ ಜಿಲ್ಲಾ ಆಡಳಿತ ಭವನ ಮಂಗಳೂರು ಆರ್ ಟಿ ಓ ಕಚೇರಿಗೆ ಬಾಂಬ್ ಇಟ್ಟು ಸ್ಪೋಟಿಸಲಾಗುತ್ತದೆ ಎಂದು ಬೆದರಿಕೆ ಇ-ಮೇಲ್ ಸಂದೇಶ ಬಂದಿತ್ತು. ಇದೀಗ ತುಮಕೂರು ಜಿಲ್ಲಾಧಿಕಾರಿ ಕಚೇರಿಗೂ ಬಾಂಬ್ ಬೆದರಿಕೆ ಸಂದೇಶ ಬಂದಿದೆ.
ಇಂದು ಬೆಳಿಗ್ಗೆ 7 ಗಂಟೆಗೆ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ ಅಧಿಕೃತ ಇ-ಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿದೆ. ಬಾಂಬ್ ಸ್ಪೋಟಗೊಳ್ಳಲಿದೆ ಎಂಬ ಸಂದೇಶ ಬಂದಿದೆ ಕೂಡಲೇ ಜಿಲ್ಲಾಧಿಕಾರಿ ಕಚೇರಿಗೆ ಪೊಲೀಸರು ದೌಡಯಿಸಿದ್ದಾರೆ. ಬಾಂಬ್ ನಿಷ್ಕ್ರಿಯದಳ, ಶ್ವಾನ ದಳ ಸಿಬ್ಬಂದಿಗಳು ಪರಿಶೀಲನೆ ನಡೆಸಿದ್ದಾರೆ. ಸದ್ಯ ಜಿಲ್ಲಾಧಿಕಾರಿ ಕಚೇರಿ ಒಳಗಡೆ ಯಾರನ್ನು ಬಿಡದೆ ತಪಾಸಣೆ ನಡೆಸುತ್ತಿದ್ದಾರೆ.








