ವಿಜಯನಗರ : ರಾಜ್ಯದಲ್ಲಿ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದು, l ಬೆಂಗಳೂರು, ವಿಜಯನಗರ ಶಿವಮೊಗ್ಗ ದಲ್ಲಿ ಅಧಿಕಾರಿಗಳ ಮನೆಯ ಮೇಲೆ ರೇಡ್ ಮಾಡಿದ್ದಾರೆ. ಧಾರವಾಡದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ ತಕ್ಷಣ ಬಾತ್ರೂಮ್ ನ ಕಮೋಡ್ ನಲ್ಲಿ 50 ಸಾವಿರ ಹಣ ಹಾಕಿರುವ ಘಟನೆ ಇದೀಗ ವರದಿಯಾಗಿದೆ.
ಹೌದು ವಿಜಯನಗರ ಜಿಲ್ಲೆಯ ಜಿಲ್ಲಾ ಆರೋಗ್ಯ ಅಧಿಕಾರಿಗೆ ಬೆಳ್ಳಂಬಳ್ಳಿಗೆ ಲೋಕಾಯುಕ್ತ ಅಧಿಕಾರಿಗಳು ನೀಡಿದ್ದಾರೆ. ಡಿ ಎಚ್ ಓ ಕಚೇರಿ, ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಅದೇ ರೀತಿಯಾಗಿ ಬೆಂಗಳೂರು ಶಿವಮೊಗ್ಗ ಹಾಗೂ ಧಾರವಾಡದಲ್ಲೂ ಕೂಡ ಭ್ರಷ್ಟಾಧಿಕಾರಿಗಳ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.
ಡಿ ಎಚ್ ಒ ಡಾಕ್ಟರ್ ಶಂಕರ್ ನಾಯಕ್ ನಿವಾಸ ಮತ್ತು ಆಸ್ಪತ್ರೆಯ ಮೇಲೆ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸುತ್ತಿದ್ದಾರೆ. ಕಚೇರಿ ನಿವಾಸ ಮತ್ತು ಆಸ್ಪತ್ರೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ ವಿಜಯನಗರ, ಕೊಪ್ಪಳ ಹಾಗು ಬಳ್ಳಾರಿ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ಮಾಡಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ








