ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಂಗಳವಾರ ಪ್ರಕಟಿಸಿದೆ.
ಒಟ್ಟು 73 ವೈದ್ಯಕೀಯ ಹಾಗೂ 34 ದಂತ ವೈದ್ಯಕೀಯ ಸೀಟುಗಳನ್ನು ಈ ಸುತ್ತಿನಲ್ಲಿ ಹಂಚಿಕೆ ಮಾಡಲಾಗಿದೆ. 26 ವೈದ್ಯಕೀಯ ಸೀಟು ಹಂಚಿಕೆಗೆ ಬಾಕಿ ಉಳಿದಿವೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸೀಟು ಹಂಚಿಕೆಯಾದವರು ಡಿ.17ರಂದು ಸಂಜೆ 4 ಗಂಟೆಯೊಳಗೆ ಶುಲ್ಕ ಪಾವತಿಸಿ (ವೈದ್ಯಕೀಯ ಶುಲ್ಕ ಠೇವಣಿ ಕಡಿತ ಮಾಡಿಕೊಂಡು), ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಳ್ಳಬೇಕು. ಬಳಿಕ ಅಂದೇ ಸಂಜೆ 6 ಗಂಟೆ ಒಳಗೆ ಸಂಬಂಧಪಟ್ಟ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ತಾ.ಪಂ, ಜಿಪಂ ಚುನಾವಣೆಗೆ ರಾಜ್ಯ ಸರ್ಕಾರದ ದೃಢ ನಿಲುವು: ಸಚಿವ ಬೈರತಿ ಸುರೇಶ್
BREAKING : ಈ ಬಾರಿ ಬೆಂಗಳೂರಲ್ಲೆ ‘IPL’ ಪಂದ್ಯ ಉದ್ಘಾಟನೆ : ‘KSCA’ ಅಧ್ಯಕ್ಷ ವೆಂಕಟೇಶ್ ಪ್ರಸಾದ್








