ಮಂಡ್ಯ: ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066 ನೇ ಜಯಂತಿ ಮಹೋತ್ಸವ ವಳವಳ್ಳಿಯಲ್ಲಿ ನಡೆಯುತ್ತಿರುವುದು ಮಳವಳ್ಳಿ ಜನತೆಯ ಭಾಗ್ಯ. ಮಳವಳ್ಳಿ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಕಾರ್ಯಕ್ರಮ ಇದಾಗಿದೆ. ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳು ಲೋಕ ಕಲ್ಯಾಣಕ್ಕಾಗಿ ಮಾಡಿದ ಕಾರ್ಯಗಳು ನಿರಂತರವಾಗಿ ನಡೆಯಬೇಕು ಎಂದು ಸುತ್ತೂರು ಜಗತ್ ಗುರು ಶ್ರೀ ವೀರ ಸಿಂಹಾಸನ ಮಹಾ ಸಂಸ್ಥಾನಧೀಶರಾದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಹೇಳಿದರು.
ಇಂದು ವಳವಳ್ಳಿಯಲ್ಲಿ ಆಯೋಜಿಸಲಾಗಿದ್ದ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066 ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತಿ ಮಹೋತ್ಸವ ನಾನ ಜಿಲ್ಲೆಗಳಲ್ಲಿ ನಡೆದುಕೊಂಡು ಬರುತ್ತಿದೆ. ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳು ಸಾವಿರಾರು ವರ್ಷಗಳ ಹಿಂದೆ ಎರಡು ರಾಜ ಮನೆತನಗಳ ನಡುವೆ ಇದಂತಹ ವೈಷಮ್ಯವನ್ನು ಹೋಗಲಾಡಿಸಿ ಸಮಾರಸ್ಯದ, ಪ್ರೀತಿಯ, ಸ್ನೇಹದ ಬೀಜವನ್ನು ಬಿತ್ತಿ ನಾಡಿಗೆ ಕಲ್ಯಾಣ ತಂದವರು ಎಂದು ಹೇಳಿದರು.
ಅವರ ಹಾದಿಯಲ್ಲಿ ಬಂದಂತಹ ಎಲ್ಲಾ ಸುತ್ತೂರು ಮಠದ ಸ್ವಾಮಿಗಳು ಸುತ್ತೂರು ಮಠವನ್ನು ಮುನ್ನಡೆಸಿಕೊಂಡು ಬಂದಿದ್ದಾರೆ. ಸುಮಾರು 6 ವರ್ಷಗಳ ಹಿಂದೆಯೇ ಸದರಿ ಜಯಂತೋತ್ಸವ ಕಾರ್ಯಕ್ರಮ ಮಳವಳ್ಳಿ ನಡೆಯಬೇಕಿತ್ತು ಆದರೆ ಕಾರಣಾಂತರಗಳಿಂದ ಸಾಧ್ಯವಾಗಲಿಲ್ಲ. ಬಹುಶಃ 6 ವರ್ಷಗಳ ಹಿಂದೆ ಆಗಿದ್ದರೆ ಇಂದು ರಾಷ್ಟ್ರಪತಿಗಳು ಸದರಿ ಕಾರ್ಯಕ್ರಮವನ್ನು ಉದ್ಘಾಟಿಸುತ್ತಿರಲಿಲ್ಲ ಇದು ದೈವ ಸಂಕಲ್ಪ ಎಂದರು.
ಕೇಂದ್ರ ಸಚಿವ ಹೆಚ್.ಡಿ. ಕುಮಾರ ಸ್ವಾಮಿ ಅವರಿಂದಲೇ ಮಳವಳ್ಳಿಯಲ್ಲಿ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066 ನೇ ಜಯಂತಿ ಮಹೋತ್ಸವ ಕಾರ್ಯಕ್ರಮ ನಡೆಯುತ್ತದೆ ಹಾಗೂ ರಾಷ್ಟ್ರಪತಿಗಳು ಆಗಮಿಸಲು ಅವರೇ ಕಾರಣ. ನರೇಂದ್ರ ಸ್ವಾಮಿ ಅವರು ಕಾರ್ಯಕ್ರಮವನ್ನು ತಮ್ಮ ಮನೆಯ ಕಾರ್ಯಕ್ರಮದಂತೆ ಮುತುವರ್ಜಿ ವಹಿಸಿ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ರೂಪಿಸಿದ್ದಾರೆ ಮಳವಳ್ಳಿಯ ಎಲ್ಲಾ ಸಂಘ ಸಂಸ್ಥೆಗಳೂ ಹಾಗೂ ಮುಖಂಡರುಗಳು ಸದರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜವಾಬ್ದಾರಿ ವಹಿಸಿದ್ದಾರೆ ಎಂದು ಹೇಳಿದರು.
ಮಂಡ್ಯದ ಮದ್ದೂರಿನಲ್ಲಿ ‘HDK’ ಹುಟ್ಟು ಹಬ್ಬ ಆಚರಣೆ; ಕಾರ್ಯಕರ್ತರ ಅಭಿಮಾನಕ್ಕೆ ಮನಸೋತ ಕೇಂದ್ರ ಸಚಿವ
ಐಪಿಎಲ್ 2026 ಹರಾಜು: ಹೀಗಿದೆ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ | IPL 2026 Auction








