ಬೆಳಗಾವಿ : ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಹೊಸ ಪಡಿತರ ಚೀಟಿ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.
ಸುವರ್ಣ ವಿಧಾನಸೌಧದಲ್ಲಿ ಮಾತನಾಡಿದ ಸಚಿವರು,ರಾಜ್ಯದಲ್ಲಿ ಹೊಸದಾಗಿ ಬಿಪಿಎಲ್ ಕಾರ್ಡ್ ಪಡೆಯಲು 3.96 ಲಕ್ಷ ಅರ್ಜಿಗಳು ಇಲಾಖೆಗೆ ಬಂದಿವೆ. ಈ ಪೈಕಿ 2.95 ಲಕ್ಷ ಅರ್ಜಿಗಳ ವಿಲೇ ವಾರಿ ಮಾಡಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನ ಮೇರೆಗೆ ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಅನರ್ಹರನ್ನು ಪತ್ತೆ ಹಚ್ಚಿ ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇನ್ನು ಹೊಸದಾಗಿ ಬಿಪಿಎಲ್ ಕಾರ್ಡ್ ಕೋರಿ 3.96 ಲಕ್ಷ ಅರ್ಜಿಗಳು ಬಂದಿದ್ದು, ಈ ಪೈಕಿ 2.95 ಲಕ್ಷ ಅರ್ಜಿ ವಿಲೇವಾರಿ ಮಾಡಲಾಗಿದೆ. ಉಳಿದ ಅರ್ಜಿಗಳನ್ನು ಒಂದು ತಿಂಗಳೊಳಗೆ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.








