ಬೆಂಗಳೂರು : ರಾಜ್ಯಾದ್ಯಂತ ತಾಪಮಾನ ಕುಸಿತದಿಂದ ಚಳಿ ಹೆಚ್ಚಳವಾಗಿದ್ದು, ಮೈ ನಡುಗುವ ಚಳಿಗೆ ಜನರು ತತ್ತರಿಸಿದ್ದಾರೆ. ಚಳಿ ಹಿನ್ನೆಲೆಯಲ್ಲಿ ಶಾಲಾ ಅವಧಿಯನ್ನು ಚಳಿಗಾಲ ಮುಗಿಯುವವರೆಗೂ ಪ್ರತಿ ದಿನ ಬೆಳಗ್ಗೆ 9.30 ಕ್ಕೆ ತರಗತಿಗಳನ್ನು ಆರಂಭಿಸಬೇಕು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಮನವಿ ಮಾಡಿದ್ದಾರೆ.
ಮಕ್ಕಳ ರಕ್ಷಣೆ ಮತ್ತು ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿಸಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಶೀತಗಾಳಿ ಕಾಣಿಸಿಕೊಳ್ಳುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಎಲ್ಕೆಜಿಯಿಂದ ಪಿಯುಸಿ ವರೆಗೆ ಶಾಲಾ ಅವಧಿಯನ್ನು ಚಳಿಗಾಲ ಮುಗಿಯುವವರೆಗೂ ಪ್ರತಿ ದಿನ ಬೆಳಗ್ಗೆ 9.30 ಕ್ಕೆ ತರಗತಿಗಳನ್ನು ಆರಂಭಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.








