ಬೆಳಗಾವಿ : ರಾಜ್ಯ ಸರ್ಕಾರವು ಡಾ. ಕಸ್ತೂರಿ ರಂಗನ್ ಸಮಿತಿ ವರದಿ ಆಧರಿಸಿ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ತಿರಸ್ಕರಿಸಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಮಂಗಳವಾರ ಕಾಂಗ್ರೆಸ್ಸಿನ ಐವನ್ ಡಿಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪರಿಸರ ಸೂಕ್ಷ್ಮ ವಲಯ ಹಾಗೂ ಸಂರಕ್ಷಿತ ಅರಣ್ಯ ಪ್ರದೇಶ ಹೊರತುಪಡಿಸಿ ಬೇರೆ ಪ್ರದೇಶದಲ್ಲಿ ಕೃಷಿ, ಮತ್ತಿತರ ಚಟುವಟಿಕೆ ಮುಂದುವರೆಸಲು ಯಾವುದೇ ತೊಂದರೆ ಇಲ್ಲ ಎಂದು. ಡಾ.ಕಸ್ತೂರಿ ರಂಗನ ವರದಿ ಆಧರಿಸಿ ಈವರೆಗೆ ಆರು ಅಧಿಸೂಚನೆ ಹೊರಡಿಸಲಾಗಿದ್ದು, ರಾಜ್ಯ ಸರ್ಕಾರ ಅವುಗಳನ್ನು ತಿರಸ್ಕರಿಸಿದೆ ಎಂದು ತಿಳಿಸಿದ್ದಾರೆ.
ಅಧಿಸೂಚನೆ ಸಂಬಂಧ ಸಚಿವ ಸಂಪುಟ ಉಪಸಮಿತಿ ಶಿಫಾರಸು ಆಧರಿಸಿ ರಾಜ್ಯ ಸರ್ಕಾರ ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ವರದಿ ತಿರಸ್ಕರಿಸಿರುವುದಾಗಿ ಕೇಂದ್ರಕ್ಕೆ ತಿಳಿಸಿ ವರದಿ ಸಲ್ಲಿಸಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿರುವ ವನ್ಯ ಜೀವಿಧಾಮಗಳು ಮತ್ತು ರಾಷ್ಟ್ರೀಯ ಉದ್ಯಾನವನಗಳಲ್ಲಿ ಗಣತಿಯಂತೆ ಒಟ್ಟು 6,395 ಆನೆಗಳು ಮತ್ತು 563 ಹುಲಿಗಳಿವೆ.
ವನ್ಯ ಜೀವಿಗಳು ಅರಣ್ಯ ಪ್ರದೇಶದಿಂದ ಹೊರ ಬರುವುದನ್ನು ತಡೆಗಟ್ಟಲು ಮಾನವ ಪ್ರಾಣಹಾನಿಗೆ ಕಾರಣವಾದ ಹುಲಿ ಹಾಗೂ ಆನೆಯನ್ನು ನಿರ್ದಿಷ್ಟವಾಗಿ ಗುರುತಿಸಿ ಸೆರೆಹಿಡಿಯಲಾಗಿರುತ್ತದೆ.
ಮಾನವ-ವನ್ಯಜೀವಿ ಸಂಘರ್ಷ… pic.twitter.com/qpcNdUQ5rW
— DIPR Karnataka (@KarnatakaVarthe) December 16, 2025








