ಬೆಂಗಳೂರು : ರಾಜ್ಯದಲ್ಲಿ ಕಾಯಕ ಗ್ರಾಮ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಕುರಿತು ರಾಜ್ಯ ಸರ್ಕಾರವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಉಲ್ಲೇಖ (1) ರಂತೆ ಮಾನ್ಯ ಮುಖ್ಯಮಂತ್ರಿಯವರು, 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 272 (IV) ರಲ್ಲಿ ಹಿರಿಯ ಅಧಿಕಾರಿಗಳಿಂದ ಗ್ರಾಮ ಪಂಚಾಯಿತಿಗಳನ್ನು ದತ್ತು ಪಡೆದು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ದತ್ತು ಕಾರ್ಯಕ್ರಮವನ್ನು ಆರಂಭಿಸಲಾಗುವುದು’ ಎಂದು ಘೋಷಿಸಿರುತ್ತಾರೆ. ಈ ಘೋಷಣೆಯನ್ನು ಈಡೇರಿಸಲು “ಕಾಯಕ ಗ್ರಾಮ” ಕಾರ್ಯಕ್ರಮವನ್ನು ಜಾರಿಗೊಳಿಸಲಾಗುತ್ತಿದೆ.
ಉಲ್ಲೇಖ (2) ರಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ವಿಭಾಗವು ಸಿದ್ಧಪಡಿಸುವ Gram Panchayat Performance Ranking ನಲ್ಲಿ ಹಿಂದುಳಿದಿರುವ ಗ್ರಾಮ ಪಂಚಾಯಿತಿಗಳನ್ನು ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ದತ್ತು ಪಡೆದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ, ಪಂಚಾಯಿತಿ ಕಾರ್ಯನಿರ್ವಹಣೆ, ನಿಯಮಿತವಾಗಿ ವಿವಿಧ ಸಭೆಗಳ ಆಯೋಜನೆ, ತೆರಿಗೆ ವಸೂಲಾತಿ, ನರೇಗಾ, ಸ್ವಚ್ಛ ಭಾರತ್ ಮಿಷನ್-ಗ್ರಾಮೀಣ, ಜಲ ಜೀವನ್ ಮಿಷನ್, ಸಾಮಾಜಿಕ ಲೆಕ್ಕಪರಿಶೋಧನೆ ಮತ್ತು ಕೇಂದ್ರ ಹಣಕಾಸು ಆಯೋಗದ ಅನುದಾನ ಸೇರಿದಂತೆ ಸಮಗ್ರವಾಗಿ ಅಭಿವೃದ್ಧಿಗೊಳಿಸಲು “ಗ್ರಾಮ ಪಂಚಾಯತಿ ದತ್ತು” ಕಾರ್ಯಕ್ರಮವನ್ನು ಜಾರಿಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿತ್ತು ಮತ್ತು ಈ ಕಾರ್ಯನಿರ್ವಹಣೆಗೆ ಸಂಬಂಧಿಸಿದ ವಿವರವಾದ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದಾಗಿ ತಿಳಿಸಲಾಗಿತ್ತು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ವಿಭಾಗವು ಸಿದ್ಧಪಡಿಸಿರುವ Gram Panchayat Performance Ranking ನಲ್ಲಿ ಹಿಂದುಳಿದಿರುವ ಗ್ರಾಮ ಪಂಚಾಯಿತಿಗಳನ್ನು ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ರಾಜ್ಯ ಮಟ್ಟದ ಅಧಿಕಾರಿಗಳು ಆಯ್ಕೆ ಮಾಡಿಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ, ಗ್ರಾಮ ಪಂಚಾಯಿತಿ ಕಾರ್ಯನಿರ್ವಹಣೆ, ನಿಯಮಿತವಾಗಿ ವಿವಿಧ ಸಭೆಗಳ ಆಯೋಜನೆ, ತೆರಿಗೆ ವಸೂಲಾತಿ ಸೇರಿದಂತೆ ಸಮಗ್ರವಾಗಿ ಅಭಿವೃದ್ಧಿಗೊಳಿಸುವುದು ಕಾರ್ಯಕ್ರಮದ ಉದ್ದೇಶವಾಗಿರುತ್ತದೆ.









