ಬೆಳಗಾವಿ : ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿರುವ 15 ವರ್ಷ ಮೀರಿದ ವಾಹನಗಳಿಗೆ ಒಂದು ವರ್ಷ ವಿಸ್ತರಣೆಯ ಜೊತೆಗೆ, ಸುಸ್ಥಿತಿಯಲ್ಲಿರುವ ಕೆಲ ವಾಹನಗಳಿಗೆ ಗುಜರಿ ನೀತಿಯಡಿ ವಿನಾಯಿತಿ ನೀಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಪರಿಷತ್ತಿನಲ್ಲಿ ಸದಸ್ಯರಾದ ಗೋವಿಂದ ರಾಜು ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಎನ್.ಐ.ಸಿ. ಅವರು ಒದಗಿಸಿರುವ ಮಾಹಿತಿಯ ಪ್ರಕಾರ ಡಿ.4ರ ಅಂತ್ಯಕ್ಕೆ 15 ವರ್ಷದ ಅವಧಿ ಮೀರಿದ ಒಟ್ಟು 18,552 (ಸಾರಿಗೆ ಸಂಸ್ಥೆಗಳ ಬಸ್ಸುಗಳನ್ನು ಹೊರತುಪಡಿಸಿ) ಸರ್ಕಾರಿ ವಾಹನಗಳ ನೋಂದಣಿಯನ್ನು ಕೇಂದ್ರ ಸರ್ಕಾರವು ವಾಹನ್ ಪೋರ್ಟಲ್‌ನಲ್ಲಿ ರದ್ದುಪಡಿಸಿದೆ. ಈ 18,552 ವಾಹನಗಳ ಪೈಕಿ ಆರ್‌ವಿಎಸ್‌ಎಫ್‌ನಲ್ಲಿ ಒಟ್ಟು 1,493 ವಾಹನಗಳನ್ನು ಸ್ಕ್ರ್ಯಾಪ್ ಮಾಡಲಾಗಿದೆ. 17,059 ವಾಹನಗಳನ್ನು ಸ್ಕ್ರ್ಯಾಪ್ ಮಾಡುವುದು ಬಾಕಿ ಇರುತ್ತದೆ ಎಂದರು.
ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆ, ನಿಗಮ, ಮಂಡಳಿ, ನಗರಸಭೆ, ಸರ್ಕಾರದ ಇತರೆ ಅಧೀನ ಸಂಸ್ಥೆಗಳಿಗೆ ಸೇರಿದ ನೋಂದಣಿಯಾಗಿ 15 ವರ್ಷ ಮೀರಿದ ವಾಹನಗಳನ್ನು ಕಡ್ಡಾಯವಾಗಿ ರಾಜ್ಯದಲ್ಲಿ ಸ್ಥಾಪಿತವಾಗಿರುವ ರಿಜಿಸ್ಟರ್ಡ್ ವೆಹಿಕಲ್ ಸ್ಕ್ರ್ಯಾಪಿಂಗ್ ಫ್ಯಾಸಿಲಿಟಿ ಗಳಲ್ಲಿಯೇ ಸ್ಕ್ರ್ಯಾಪ್ ಮಾಡಲು ರಾಜ್ಯ ಸರ್ಕಾರವು ಕಳೆದ ಸೆ.12 ರಂದು ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.
ಡಿಸೆಂಬರ್ 4ರ ಅಂತ್ಯಕ್ಕೆ ಒಟ್ಟು 18,552 15 ವರ್ಷಗಳು ಮೀರಿದ ಸಾರಿಗೆ ಸಂಸ್ಥೆಗಳ ಬಸ್ಗಳನ್ನು ಹೊರತುಪಡಿಸಿ, ಸರ್ಕಾರಿ ವಾಹನಗಳ ನೋಂದಣಿಯನ್ನು ಕೇಂದ್ರ ಸರ್ಕಾರವು ವಾಹನ ಪೋರ್ಟಲ್‌ನಲ್ಲಿ ರದ್ದುಪಡಿಸಿದೆ. ಈ 18,552 ವಾಹನಗಳ ಪೈಕಿ ಆರ್‌ವಿಎಸ್‌ಎಫ್‌ನಲ್ಲಿ ಒಟ್ಟು 1,493 ವಾಹನಗಳನ್ನು ಸ್ಕ್ರ್ಯಾಪ್ ಮಾಡಲಾಗಿದೆ ಮತ್ತು 17,059 ವಾಹನಗಳನ್ನು ಸ್ಕ್ರ್ಯಾಪ್ ಮಾಡುವುದು ಬಾಕಿಯಿದೆ ಎಂದರು.








