ಬೆಳಗಾವಿ ಸುವರ್ಣ ಸೌಧ : ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.
2025ನೇ ಸಾಲಿನ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಮಂಡಿಸಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬುಧವಾರ ಮಾತನಾಡಿದರು.
“ಜಿಬಿಎ ಮೂಲಕ ಐದು ಪಾಲಿಕೆಗಳನ್ನು ಮಾಡಲಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರದಲ್ಲಿ ಬಿಬಿಎಂಪಿ ಮೇಯರ್ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರು ಎಂಬುದನ್ನು ಗ್ರೇಟರ್ ಬೆಂಗಳೂರಿನ ವಿವಿಧ ನಗರ ಪಾಲಿಕೆಯ ಹೆಸರುಗಳನ್ನು ಸೇರಿಸಿ ಬದಲಾವಣೆ ಮಾಡಲಾಗುತ್ತಿದೆ. ಇದರ ಹೊರತಾಗಿ ಬೇರೆ ಯಾವುದೇ ಬದಲಾವಣೆ ಇಲ್ಲ. ಕಾನೂನು ಪ್ರಕಾರ ಇದನ್ನು ಮಾಡಲೇಬೇಕಾಗಿರುವ ಕಾರಣ ಈ ತಿದ್ದುಪಡಿ ಮಾಡಲಾಗುತ್ತಿದೆ” ಎಂದು ತಿಳಿಸಿದರು.
BREAKING: ವಿಪಕ್ಷಗಳ ಸಭಾತ್ಯಾಗದ ನಡುವೆ ಲೋಕಸಭೆಯಲ್ಲಿ ಪರಮಾಣು ಮಸೂದೆ ಅಂಗೀಕಾರ








