Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಸೇನಾ ಕ್ಯಾಪ್ಟನ್ ಪ್ರೇಯಸಿಗೆ ಮಾಡಿದ ಪ್ರಪೋಸ್ ಪುಲ್ ವೈರಲ್; ನೆಟ್ಟಿಗರ ಕಾಮೆಂಟ್ ಸುರಿಮಳೆ

​ನಾರ್ವೆ ಚೆಸ್: ಗುಕೇಶ್ ವಿರುದ್ಧ ರೋಚಕ ಜಯ ಸಾಧಿಸಿದ ಪ್ರಜ್ಞಾನಂದ; ಪ್ರಶಸ್ತಿ ರೇಸ್‌ನಲ್ಲಿ ಮುನ್ನಡೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಭಗವದ್ಗೀತೆ ಬೋಧಿಸಿ ಎಂದಿದ್ದು ಧರ್ಮ ಸಂಘರ್ಷ ಉಂಟು ಮಾಡುವುದಕ್ಕಲ್ಲ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
KARNATAKA

ಭಗವದ್ಗೀತೆ ಬೋಧಿಸಿ ಎಂದಿದ್ದು ಧರ್ಮ ಸಂಘರ್ಷ ಉಂಟು ಮಾಡುವುದಕ್ಕಲ್ಲ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

By ವಸಂತ ಬಿ ಈಶ್ವರಗೆರೆ

ನವದೆಹಲಿ: ಶಾಲಾ ಹಂತದಿಂದಲೇ ಭಗವದ್ಗೀತೆಯನ್ನು ಮಕ್ಕಳಿಗೆ ಬೋಧಿಸಬೇಕು. ಇದು ಅತ್ಯಂತ ಉತ್ತಮ ಶೈಕ್ಷಣಿಕ ಸುಧಾರಣಾ ಕ್ರಮವಾಗುತ್ತದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪುನರುಚ್ಚರಿಸಿದರು.

ನವದೆಹಲಿಯಲ್ಲಿ ಮೈಸೂರಿನ ಕುವೆಂಪು ವಿಶ್ವಮಾನವ ಕ್ಷೇಮಾಭಿವೃದ್ಧಿ ಟ್ರಸ್ಟ್‌ ಹಾಗೂ ದೆಹಲಿ ಕರ್ನಾಟಕ ಸಂಘ ಹಮ್ಮಿಕೊಂಡಿದ್ದ ರಾಷ್ಟ್ರಕವಿ ಕುವೆಂಪು ಅವರ ಕೊಡುಗೆ ಮತ್ತು ಸಾಧನೆ ಕುರಿತ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು.

ಭಗವದ್ಗೀತೆಯನ್ನು ಬೋಧಿಸಬೇಕು ಎಂದು ಎಂದು ನಾನು ಹೇಳಿದ್ದು ರಾಜಕೀಯ ಉದ್ದೇಶ ಅಥವಾ ಯಾವುದೇ ಧರ್ಮ ಸಂಘರ್ಷ ಉಂಟು ಮಾಡುವುದಕ್ಕಲ್ಲ. ಉತ್ತಮ ಸಮಾಜ ನಿರ್ಮಾಣ ಮಾಡುವ ಅಗತ್ಯದ ದೃಷ್ಟಿಯಿಂದ ಹೇಳಿದ್ದೇನೆ ಎಂದು ಅವರು ಒತ್ತಿ ಹೇಳಿದರು.

ಭಗವದ್ಗೀತೆಯ ಉದಾತ್ತ, ಶ್ರೇಷ್ಟ ಮೌಲ್ಯಗಳ ಬಗ್ಗೆ ಹೊಸದಾಗಿ ತಿಳಿಹೇಳುವ ಅಗತ್ಯವಿಲ್ಲ. ಆದರೆ ಷಸಮಾಜದಲ್ಲಿ ನೈತಿಕ ಮೌಲ್ಯಗಳು ಅಧಃಪತನ ಆಗುತ್ತಿರುವ ಸಂದರ್ಭದಲ್ಲಿ ಗೀತೆಯ ಅಗತ್ಯ ಇನ್ನೂ ಹೆಚ್ಚಿದೆ. ಮಾನವ ಕುಲಕ್ಕೆ ಕೃಷ್ಣನ ಉಪದೇಶವು ದಾರಿದೀಪವಾಗಿದೆ. ಹೀಗಾಗಿ ಮಕ್ಕಳಿಗೆ ಬೋಧಿಸಬೇಕಾದ ಅಗತ್ಯವಿದೆ ಎಂದು ಹೇಳಿದ್ದೇನೆ. ಪಠ್ಯದಲ್ಲಿ ಭಗವದ್ಗೀತೆಯನ್ನು ಅಳವಡಿಸುವಂತೆ ಕೋರಿ ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರವನ್ನು ಕೂಡ ಬರೆದಿದ್ದೇನೆ. ಅದನ್ನೇ ಕೆಲವರು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಅವರು ನುಡಿದರು.

ನಮಗೆ ಎಲ್ಲವೂ ಇದೆ, ತಾಂತ್ರಿಕವಾಗಿ ಮತ್ತು ಆರ್ಥಿಕವಾಗಿ ಬೆಳೆಯುತ್ತಿದ್ದೇವೆ. ಆದರೆ ಮೌಲ್ಯಗಳ ವಿಷಯಕ್ಕೆ ಬಂದಾಗ ಪಾತಾಳಕ್ಕೆ ಹೋಗುತ್ತಿದ್ದೇವೆ. ಯಾಕೆ ಹೀಗೆ ಆಗುತ್ತಿದೆ ಎಂಬುದನ್ನು ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು. ಇವತ್ತು ಯಾರೇ ಆದರೂ ನೆಮ್ಮದಿಯಾಗಿ ನಿದ್ರೆ ಮಾಡುವ ಪರಿಸ್ಥಿತಿ ಇಲ್ಲ. ಅಂಥ ಪ್ರಾಮಾಣಿಕತೆಯನ್ನು ಯಾರೂ ಹೊಂದಿಲ್ಲ. ಹಾಗಾದರೆ ಮುಂದಿನ ತಲೆಮಾರಿಗೆ ಏನು ಕೊಡಬೇಕು ಎಂಬುದನ್ನು ಪೋಷಕರಢ ತೀರ್ಮಾನ ಮಾಡಬೇಕು ಎಂದು ಸಚಿವರು ಸೂಚ್ಯವಾಗಿ ಹೇಳಿದರು.

ಮಾನವೀಯ ಮೌಲ್ಯಗಳು, ತಾಯಿ ಹೃದಯ ಎಲ್ಲರಿಗೂ ಅಗತ್ಯ. ಈ ಮೌಲ್ಯಗಳನ್ನು ಜೀವನದಲ್ಲಿ ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಸಚಿವರು ವಿನಂತಿಸಿದರು.

ಕುವೆಂಪು ಅವರಿಗೆ ಭಾರತ ರತ್ನ ಸಿಗಲಿ:

ಕುವೆಂಪು ಅವರು ರಾಷ್ಟ್ರಕವಿಯಷ್ಟೇ ಅಲ್ಲ, ಅವರು ವಿಶ್ವಕವಿ. ಮನುಕುಲದ ಒಳಿತಿಗಾಗಿ ಸಾಹಿತ್ಯ ರಚಿಸಿದ ಅವರು, ಯುಗದ ಕವಿಯೂ ಆಗಿದ್ದಾರೆ. ಅಂಥ ಶ್ರೇಷ್ಟರಿಗೆ ಭಾರತ ರತ್ನ ಸಿಗಬೇಕು ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ಕುವೆಂಪು ಅವರ ಸಾಹಿತ್ಯವನ್ನು ನಾನು ಓದಿದ್ದೇನೆ. ಮುಖ್ಯವಾಗಿ ಅವರ ಎರಡು ಕಾದಂಬರಿಗಳ ಜತೆಗೆ, ಅವರ ಆತ್ಮಕಥನ ʼನೆನಪಿನ ದೋಣಿಯಲ್ಲಿʼ ಶ್ರೆದ್ಧೆಯಿಂದ ಓದಿದ್ದೇನೆ. ಆ ಕೃತಿಯನ್ನು ಕುವೆಂಪು ಅವರು ಹೃದಯದಿಂದ ಬರೆದಿದ್ದಾರೇನೋ ಅನ್ನುವಷ್ಟು ಅನನ್ಯವಾಗಿದೆ ಎಂದು ಅಬಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದ ನಾಥ ಮಹಾಸ್ವಾಮೀಜಿಗಳು, ಮೈಸೂರಿನ ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಶ್ರೀ ಮುಕ್ತಿದಾನಂದ ಜೀ ಮಹಜಾಜ್‌ ಅವರು, ಸ್ಫಟಿಕಪುರಿ ಮಹಾಸಂಸ್ಥಾನದ ಶ್ರೀ ನಂಜಾವಧೂತ ಮಹಾಸ್ವಾಮೀಜಿಗಳು, ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಮಹಾಸ್ವಾಮೀಜಿಗಳು, ಬೇಲಿಮಠದ ಶ್ರೀ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು, ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಶ್ರೀ ನಿಶ್ಚಲಾನಂದನಾಥ ಮಹಾಸ್ವಾಮೀಜಿ ಅವರುಗಳು ದಿವು ಸಾನ್ನಿಧ್ಯ ವಹಿಸಿದ್ದರು.

ರಾಜ್ಯದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಸಂಸದರಾದ ಡಾ. ಸಿ.ಎನ್.‌ ಮಂಜುನಾಥ್‌, ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ನಾಗರಾಜ್‌, ಕುವೆಂಪು ವಿಶ್ವಮಾನವ ಕ್ಷೇಮಾಭಿವೃದ್ಧಿ ಟ್ರಸ್ಟ್‌ ಅಧ್ಯಕ್ಷ ಹೆಚ್.ಕೆ. ರಾಮು ಮುಂತಾದವರು ಉಪಸ್ಥಿತರಿದ್ದರು.

ಸಾಗರದಲ್ಲಿ ‘KFD ಪ್ರಯೋಗಾಲಯ’ ಸ್ಥಾಪಿಸಿ, ಅಗತ್ಯ ಸಿಬ್ಬಂದಿಗಳ ನೇಮಿಸಿ: ಸರ್ಕಾರಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ಪತ್ರ

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’, 10 ನಿಮಿಷದಲ್ಲಿ ‘ಆಂಬ್ಯುಲೆನ್ಸ್’ ಸೇವೆ ; ಕೇಂದ್ರದ ಹೊಸ ಯೋಜನೆ

Share. Facebook Twitter LinkedIn WhatsApp Email

Related Posts

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

1 Min Read

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

1 Min Read

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

1 Min Read
Recent News

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಸೇನಾ ಕ್ಯಾಪ್ಟನ್ ಪ್ರೇಯಸಿಗೆ ಮಾಡಿದ ಪ್ರಪೋಸ್ ಪುಲ್ ವೈರಲ್; ನೆಟ್ಟಿಗರ ಕಾಮೆಂಟ್ ಸುರಿಮಳೆ

​ನಾರ್ವೆ ಚೆಸ್: ಗುಕೇಶ್ ವಿರುದ್ಧ ರೋಚಕ ಜಯ ಸಾಧಿಸಿದ ಪ್ರಜ್ಞಾನಂದ; ಪ್ರಶಸ್ತಿ ರೇಸ್‌ನಲ್ಲಿ ಮುನ್ನಡೆ!

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

State News
KARNATAKA

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು : ಇಂಧನ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳ ನೇಮಕ ಹಾಗೂ ಖಾತೆ ಹಂಚಿಕೆ ಕುರಿತು ಅಸಮಾಧಾನ ಇಲ್ಲ ಎಂದಿರುವ ಇಂಧನ…

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

BREAKING: ಧಾರವಾಡ ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗೆ ಪ್ರಾಧ್ಯಾಪಕನಿಂದಲೇ ಕಿರುಕುಳ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.